ಉಡುಪಿ: ವಿದ್ಯಾರ್ಥಿನಿ ನಿಖಿತಾ ಕುಲಾಲ್ ಅನುಮಾನಸ್ಪದ ಸಾವು ಪ್ರಕರಣ; ವೈದ್ಯರ ನಿರ್ಲಕ್ಷ್ಯ ಆರೋಪ

ಉಡುಪಿ: ಉಡುಪಿಯ ಖಾಸಗಿ‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಎರ್ಮಾಳು ನಿವಾಸಿ ವಿದ್ಯಾರ್ಥಿನಿ ನಿಖಿತಾ ಕುಲಾಲ್ (20) ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಸಂಘಟನೆ ನಾಳೆ (ಜೂ.23) ರಂದು ಪ್ರತಿಭಟನೆಗೆ ಕರೆಕೊಟ್ಟಿದೆ. ನಿಖಿತಾ ಅವರು ಜೂ.13ರಂದು ರಾತ್ರಿ ವಿಪರೀತ ವಾಂತಿಯಿಂದ ಅಸ್ವಸ್ಥಗೊಂಡಿದ್ದರು. ಜೂ.14ರಂದು ಮುಂಜಾನೆ ಆಕೆಯನ್ನು ಮನೆಯವರು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಖಿತ ಮೃತಪಟ್ಟಿದ್ದಳು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಮನೆಯವರು‌ ಆರೋಪಿಸಿದ್ದಾರೆ.

670 ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ KEA Recruitment

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್​ ಅಸಿಸ್ಟಂಟ್​, ಎಸ್​ಡಿಎ ಮತ್ತು ಅಸಿಸ್ಟೆಂಟ್​ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ.ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ […]

ನಟ ಶಿವರಾಜ್​ಕುಮಾರ್​ ದಂಪತಿಯಿಂದ ಜೂ. 24ಕ್ಕೆ ಗ್ಲೋಬಲ್ ಮಾಲ್ ಡಿವೈನಿಟಿ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ಪಂತರಪಾಳ್ಯದ ಮೈಸೂರು ರಸ್ತೆಯಲ್ಲಿ (ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ) ಗ್ಲೋಬಲ್ ಡಿವೈನಿಟಿ ಮಾಲ್ ಇದೇ ಜೂನ್ 24 ರಂದು ಸಂಜೆ 5.30ಕ್ಕೆ ಉದ್ಘಾಟನೆಗೊಳ್ಳಲಿದೆ. ಸಿಲಿಕಾನ್​ ಸಿಟಿ, ಉದ್ಯಾನನಗರಿ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನಲ್ಲಿ ವಿಶ್ವದರ್ಜೆಯ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನೆಗೆ ಸಜ್ಜಾಗಿದೆ.ಡಿಸಿಎಂ ಡಿಕೆಶಿ ಮಾಲೀಕತ್ವದ ಗ್ಲೋಬಲ್ ಡಿವೈನಿಟಿ ಮಾಲ್ ಜೂನ್ 24 ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಖ್ಯಾತ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ […]

ದ್ವಿಭಾಷೆಯಲ್ಲಿ ದ್ವಿವೇದಿ ಸಿನಿಮಾ ರಿಲೀಸ್ ಗೆ ರೆಡಿ, ರಾಗಿಣಿಯ ‘ಶೀಲಾ’ ಸಿನಿಮಾ ಫಸ್ಟ್​ ಲುಕ್

ಬೆಂಗಳೂರು: ಈ ಶೀಲ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ವೀರ ಮದಕರಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ, ತನ್ನದೇ ಬೇಡಿಕೆ ಹೊಂದಿರುವ ನಟಿ ರಾಗಿಣಿ ದ್ವಿವೇದಿ. ಸದ್ಯ ಕನ್ನಡ, ತಮಿಳು, ಹಿಂದಿ ಹಾಗೂ ಮಲೆಯಾಳಂ ಚಿತ್ರಗಳನ್ನು ಮಾಡುತ್ತಿರುವ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುಭಾಷೆಯಲ್ಲಿ ನಟಿಸುತ್ತಿದ್ದ ಕನ್ನಡದ ನಟಿ ರಾಗಿಣಿ ದ್ವಿವೇದಿ ಮೊದಲ ಬಾರಿಗೆ ಶೀಲಾ […]

ಮಾನವರ ಬದಲು AI ನಿಂದ ಕೆಲಸ ಮಾಡಿಸುತ್ತಿರುವ ಜರ್ಮನ್ ಮಾಧ್ಯಮ ಸಂಸ್ಥೆ ಆಕ್ಸೆಲ್ ಸ್ಪ್ರಿಂಗರ್​ನಲ್ಲಿ ಶೇ 20ರಷ್ಟು ಉದ್ಯೋಗ ಕಡಿತ

ಲಂಡನ್ : ಜರ್ಮನಿಯ ಪ್ರಖ್ಯಾತ ಮಾಧ್ಯಮ ಸಂಸ್ಥೆ ಆಕ್ಸೆಲ್ ಸ್ಪ್ರಿಂಗರ್ ತನ್ನ ಶೇ 20 ರಷ್ಟು ಸುದ್ದಿಮನೆಯ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಪತ್ರಿಕೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಂಪಾದಕರು, ಫೋಟೋ ಸಂಪಾದಕರು, ಪ್ರೂಫ್ ರೀಡರ್‌ಗಳು ಮತ್ತು ಇತರ ಉದ್ಯೋಗಿಗಳ ಪಾತ್ರಗಳು ಇನ್ನು ಮುಂದೆ ಇರುವುದಿಲ್ಲ ಎಂದು ಸಂಸ್ಥೆ ತನ್ನ ಉದ್ಯೋಗಿಗಳಿಗೆ ನೀಡಿದ ಮೆಮೊದಲ್ಲಿ ಹೇಳಿದೆ. ಎಐ ತಂತ್ರಜ್ಞಾನವು ಹಲವಾರು ಕ್ಷೇತ್ರಗಳಲ್ಲಿನ ಉದ್ಯೋಗಗಳಿಗೆ ಕುತ್ತು ತರಲಿದೆ ಎಂಬುದು ನಿಜವಾಗುತ್ತಿದೆ. ಜರ್ಮನಿಯ ಪ್ರಖ್ಯಾತ ಮಾಧ್ಯಮ ಸಂಸ್ಥೆಯೊಂದು ಕೆಲ ಉದ್ಯೋಗಿಗಳನ್ನು ವಜಾಗೊಳಿಸಿ, […]