ತಾಲೂಕು ಕಾನೂನು ಸೇವಾ ಸಮಿತಿಗೆ ಸ್ವಯಂ ಸೇವಕರ ನೇಮಕಾತಿ

ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಾಪುರ ಮತ್ತು ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಗೆ ಅರೆಕಾಲಿಕ ಸ್ವಯಂ ಸೇವಕರನ್ನು ನೇಮಕಾತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಅಥವಾ ಕುಂದಾಪುರ ಹಾಗೂ ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ […]

ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆ ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ

ಉಡುಪಿ: ಉಡುಪಿ ವಲಯದ ಶ್ರೀ ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಣ ಇಲಾಖೆಯಲ್ಲಿ ನೋಂದಣಿಯಾಗದೇ ಇರುವುದರಿಂದ ಅನಧಿಕೃತ ಶಾಲೆ ಎಂದು ಪರಿಗಣಿಸಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದು, ಪ್ರಸ್ತುತ ಉಚ್ಛ ನ್ಯಾಯಾಲಯ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹೂಡಿರುವ ದಾವೆಯು ವಜಾಗೊಂಡಿರುವುದರಿಂದ ಸದ್ರಿ ಶಾಲೆಯನ್ನು ಮುಚ್ಚುವಂತೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸದಂತೆ ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು […]

ಹಿಂದೂ ಧಾರ್ಮಿಕ ದತ್ತಿ ಇಲಾಖಾಧೀನ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಬುಧವಾರ ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು […]

ಪ್ರಧಾನಮಂತ್ರಿ ಮತ್ಯ ಸಂಪದ ಯೋಜನೆಯಡಿ ಮೀನುಗಾರಿಕೆ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಯಸಂಪದ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಉಪಘಟಕಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲಕಳೆ ಕೃಷಿ ಸೇರಿದಂತೆ ಸಮುದ್ರ ಮೀನುಗಾರಿಕೆಯ ಅಭಿವೃದ್ಧಿ, ಅಲಂಕಾರಿಕ ಮತ್ತು ಮನರಂಜನಾ ಮೀನುಗಾರಿಕೆಯ ಅಭಿವೃದ್ಧಿ ಹಾಗೂ ತಂತ್ರಜ್ಞಾನದ ಅಳವಡಿಕೆ, ಮೂಲಭೂತ ಸೌಕರ್ಯ ಮತ್ತು ಹಿಡುವಳಿ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಡುವಳಿ ನಂತರದ ಮತ್ತು ಶೀತಲ ಸರಪಳಿ ಮೂಲಸೌಕರ್ಯ, ಮೀನು […]

ವ್ಯಕ್ತಿಯ ಸರ್ವಾಂಗೀಣ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಉತ್ತಮ: ಯಶ್‌ಪಾಲ್ ಸುವರ್ಣ

ಉಡುಪಿ: ಯೋಗ ಮನುಷ್ಯನ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಮಾಡಬೇಕೆಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದರು. ಅವರು ಬುಧವಾರದಂದು ನಗರದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು […]