ವಿದ್ಯಾರ್ಥಿನಿ ನಿಖಿತ ಸಾವಿನ ಬಗ್ಗೆ ಆಸ್ಪತ್ರೆಯವರು ದಿಕ್ಕು ತಪ್ಪಿಸಿದ್ದಾರೆ: ಸಂತೋಷ್ ಕುಲಾಲ್ ಪಕ್ಕಾಲು ಆರೋಪ
ಉಡುಪಿ: ವಿದ್ಯಾರ್ಥಿನಿ ನಿಖಿತ ಸಾವಿನ ಘಟನೆ ನೋವಿನ ಸಂಗತಿ. ಕುಟುಂಬಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಆಸ್ಪತ್ರೆಯವರು ಸರಿಯಾದ ಸ್ಪಷ್ಟೀಕರಣ ನೀಡಿಲ್ಲ. ಈಗಾಗಲೇ ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ವಿದ್ಯಾರ್ಥಿನಿ ಮೃತಪಟ್ಟ ಬಳಿಕ ಕುಟುಂಬಕ್ಕೆ ಹಾಗೂ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಅದೊಂದು ಗೊಂದಲ ಇನ್ನೂ ಕೂಡ ಕಾಡುತಿದೆ ಎಂದು ಕುಂಬಾರರ ಗುಡಿಕೈಗಾರಿಕೆ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು ಹೇಳಿದರು. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕುಲಾಲ ಸಂಘದ ವತಿಯಿಂದ […]
ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಶಾಸಕ ಯಶ್‍ಪಾಲ್ ಸುವರ್ಣ ಭೇಟಿ; ಮೀನುಗಾರ ಮಹಿಳೆಯರ ಬೇಡಿಕೆ ಈಡೇರಿಕೆ ಭರವಸೆ
ಉಡುಪಿ: ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‍ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೀನುಗಾರ ಮಹಿಳೆಯರಿಂದ ಮನವಿಯನ್ನು ಸ್ವೀಕರಿಸಿ ಮೀನುಗಾರ ಮಹಿಳೆಯರ ಅಗತ್ಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಮೀನು ಮಾರುಕಟ್ಟೆಯಲ್ಲಿ ಹೋಲ್‍ಸೇಲ್ ಮೀನು ವ್ಯಾಪಾರ ಮಾಡುವ ಸ್ಥಳದಲ್ಲಿ ಗೋಡೆ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ನೀರು ಸೋರುತ್ತಿದೆ ಹಾಗೂ ಪ್ರಾಂಗಣದಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟುವುದು, ಶೌಚಾಲಯ ಮತ್ತು ಅದರ ಪಿಟ್ ನ್ನು ವಿಸ್ತಾರಗೊಳಿಸುವುದು, ಮೀನು […]
ರಾಜಕೀಯ ಶಿಷ್ಟಾಚಾರ ಮೀರುತ್ತಿರುವ ಕಾಂಗ್ರೆಸ್ ಹಿಂಬಾಲಕರು; ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಮಂತ್ರಿ ಮಾಗಧರು ಹದ್ದು ಮೀರಿ ವರ್ತಿಸುವುದು ತರವಲ್ಲ: ಕಾರ್ಕಳ ಬಿಜೆಪಿ
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಕೆಲವು ಸಚಿವರು, ನಾಯಕರು ಮತ್ತು ಆ ನಾಯಕರ ಚೇಲಾಗಳು ಶಿಷ್ಟಾಚಾರ ಮೀರಿ ವರ್ತಿಸುತ್ತಿರುವುದು ಕಂಡುಬರುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಅಧ್ಯಕ್ಷ ಮಹಾವೀರ್ ಹೆಗ್ಡೆ ಹೇಳಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸಹಿತ ಕೆಲವರು ತಮ್ಮ ಇಲಾಖೆಗಳಿಗೆ ಸಂಬಂಧಪಡದ, ಸಂಘರ್ಷಕ್ಕೆ ಕಾರಣವಾಗಬಹುದಾದಂಥ ಹೇಳಿಕೆಗಳನ್ನು ನೀಡಿ ಹಲವು ಸಲ ಸರಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಉಂಟು ಮಾಡಿದ್ದಾರೆ. ಸೋತ ಪಕ್ಷವನ್ನು ಟೀಕಿಸುವ ಭರದಲ್ಲಿ ಅವರು ನೀಡುತ್ತಿರುವ […]
ಬಂಟ್ವಾಳ: ಸುಣ್ಣದ ಡಬ್ಬಿ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಜೀವದಾನ
ಬಂಟ್ವಾಳ: ತಾಲೂಕಿನ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಹೊರ ಬರಲು ಹೆಣಗಾಡುತ್ತಿದ್ದ ನಾಗರಹಾವನ್ನು ಮೂರು ದಿನಗಳಿಂದ ಗಮನಿಸುತ್ತಿದ್ದ ಮನೆಯವರು ಜೂನ್ 6ರಂದು ವಗ್ಗದ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿ ಮನೆಗೆ ಕರೆಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕಿರಣ್ ಹಾವನ್ನು ಬಿಲದಿಂದ ಮೆಲ್ಲಗೆ ಹೊರ ತೆಗೆದು ರಕ್ಷಿಸಿದ್ದಾರೆ. ಆದರೆ ಅದರ ತಲೆಯ ಕೆಳಭಾಗದಲ್ಲಿ ಎರಡು ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ […]
ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಉಡುಪಿ: ಮುನಿಯಾಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 9ನೇ ಅಂತಾರಾಷ್ಟೀಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಗಣಪತಿ ಜೋಯಿಸ, (ನಿವೃತ್ತ ಮುಖ್ಯಸ್ಥರು, ಯೋಗ ವಿಭಾಗ, ಕೆ ಎಂ ಸಿ ಮಣಿಪಾಲ), ಮುನಿಯಾಲ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಅಪರ್ಣ ಸುರೇಂದ್ರ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಚಂದ್ರಕಾಂತ್ ಭಟ್, ಸ್ನಾತಕ ಪೂರ್ವ ವಿಭಾಗದ […]