ಉಡುಪಿ: ಸಿಟಿ ಆಸ್ಪತ್ರೆಯ ಎದುರು ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ
ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ […]
ಜೂನ್ 24 ರಂದು ವಿಷನ್ ಬೈಂದೂರು: ಶಾಸಕರೊಂದಿಗೆ ಸಾರ್ವಜನಿಕ ಸಂವಾದ ಕಾರ್ಯಕ್ರಮ
ಬೈಂದೂರು: ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ಕುಂದಾಪ್ರ ಡಾಟ್ ಕಾಂ: ವಿಷನ್ ಬೈಂದೂರು ಎಂಬ ಕಾರ್ಯಕ್ರಮವನ್ನು ಜೂನ್.24 ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಉಪ್ಪುಂದದ ನಂದನವನ – ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು- ಚರ್ಚೆ- ಮಂಥನ ನಡೆಯಲಿದೆ. ಕಾರ್ಯಕ್ರಮವನ್ನು ಬೈಂದೂರಿನ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ […]
ಮುರುಕಲು ಗುಡಿಸಲಿನ 90ರ ವೃದ್ದೆಗೆ ಮೇ ತಿಂಗಳ ಕರೆಂಟ್ ಬಿಲ್ 1 ಲಕ್ಷ ರೂ! ತಾಂತ್ರಿಕ ದೋಷದಿಂದ ಬಿಲ್ ನಲ್ಲಿ ಗಡಿಬಿಡಿ
ಕೊಪ್ಪಳ: ಇಲ್ಲಿನ 90 ವರ್ಷದ ವೃದ್ದೆಗೆ ಮೇ ತಿಂಗಳ ತನ್ನ ವಿದ್ಯುತ್ ಬಿಲ್ ಅನ್ನು ಕಂಡು ಜೀವಮಾನದ ಆಘಾತಕ್ಕೆ ಒಳಗಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ಮುರುಕಲು ಗುಡಿಸಿಲಿನಲ್ಲಿ ಕೇವಲ ಎರಡು ಎಲ್.ಇ.ಡಿ ಬಲ್ಬ್ ಮಾತ್ರ ಹೊಂದಿರುವ ಗಿರಿಜಮ್ಮ ಎನ್ನುವ 90 ವರ್ಷದ ವೃದ್ದೆಗೆ ಮೇ ತಿಂಗಳ ವಿದ್ಯುತ್ ಬಿಲ್ 1,03,315 ರೂ ಬಂದಿದ್ದು ವೃದ್ದೆಯು ಆಘಾತಕ್ಕೆ ಒಳಗಾಗಿದ್ದಾರೆ. ಪ್ರತಿ ತಿಂಗಳೂ 70-80 ರೂ ವಿದ್ಯುತ್ ಬಿಲ್ ಬರುತ್ತಿದ್ದು, ಮೇ ತಿಂಗಳಲ್ಲಿ ಏಕಾಏಕಿ 1 ಲಕ್ಷಕ್ಕೂ ಮಿಕ್ಕಿ ಬಿಲ್ ಬಂದಿರುವುದನ್ನು […]
ಗ್ರಾಮ ಮಟ್ಟದಲ್ಲಿಯೂ ಮಕ್ಕಳ ಮತ್ತು ಮಹಿಳಾ ರಕ್ಷಣಾ ಸಮಿತಿ ರಚಿಸಿ: ಡಾ. ತಿಪ್ಪೇಸ್ವಾಮಿ ಕೆ.ಟಿ
ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಅವುಗಳ ಅನುಷ್ಠಾನ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗ್ರಾಮ ಮಟ್ಟಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಶಿಕ್ಷಣ ಸಮಿತಿಗಳನ್ನು ರಚಿಸಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು. ಶಾಲೆಯಿಂದ ಯಾವುದೇ ಮಕ್ಕಳು ಹೊರ ಉಳಿಯದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆ, ಸ್ಥಳೀಯ ಸಂಸ್ಥೆಗಳು ಕಾರ್ಯಪ್ರವೃತ್ತರಾಗಿರಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ […]
ಹಲಸಿನ ಮೌಲ್ಯವರ್ಧನೆಯಿಂದ ರೈತರ ಆರ್ಥಿಕ ಸಬಲತೆ ಸಾಧ್ಯ: ಯಶ್ ಪಾಲ್ ಸುವರ್ಣ
ಉಡುಪಿ: ಮಲೆನಾಡು ಸೇರಿದಂತೆ ಕರಾವಳಿ ಭಾಗದ ಪೌಷ್ಠಿಕ ಆಹಾರಗಳಲ್ಲಿ ಒಂದಾದ ಹಲಸು ಇಲ್ಲಿ ಹೇರಳವಾಗಿ ಉತ್ಪತ್ತಿಯಾಗುತ್ತದೆ. ಇದಕ್ಕೆ ಹೆಚ್ಚಿನ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯನ್ನು ಒದಗಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋಸಾಫ್ಟ್ ಟೆಕ್ನೋಲಾಜಿಸ್ […]