ಮೊಬೈಲ್ ಆ್ಯಪ್ ನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡು, “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ Generate OTP ಯನ್ನು ಆಯ್ಕೆ ಮಾಡಬೇಕು. ನಂತರದಲ್ಲಿ ಆಧಾರ್ […]
ಜೂ 27 ರಂದು ಹರ್ಷ ಧನಂಜಯ ಟವರ್ಸ್ ನಲ್ಲಿ ನೇರ ಸಂದರ್ಶನ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30 ಕ್ಕೆ ಹರ್ಷ ಧನಂಜಯ ಟವರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, […]
ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಐಕ್ಯರಂಗ ರಚನೆಗೆ ಮುಂದಾದ ಪ್ರತಿಪಕ್ಷ: ಪಟ್ನಾದಲ್ಲಿ ಸಭೆ
ಪಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಐಕ್ಯರಂಗವನ್ನು ರಚಿಸಲು ಭಾರತದ 17 ರಾಜಕೀಯ ಪಕ್ಷಗಳ ನಾಯಕರು ಶುಕ್ರವಾರ ಒಪ್ಪಿಕೊಂಡಿದ್ದಾರೆ. “ನಮ್ಮ ನಡುವೆ ಖಂಡಿತವಾಗಿಯೂ ಕೆಲವು ಭಿನ್ನಾಭಿಪ್ರಾಯಗಳಿವೆ ಆದರೆ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ, ಹೊಂದಿಕೊಳ್ಳುವಿಕೆಯೊಂದಿಗೆ ಕೆಲಸ ಮಾಡುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ” ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಈ ಸಭೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದರು. ದೇಶದ […]
ಅಮೇರಿಕಾದಲ್ಲಿ ಪ್ರಧಾನಿ ಮೋದಿ ಭೇಟಿ ಪರಿಣಾಮ: ಭಾರತದಲ್ಲಿ ಪ್ರಮುಖ ಹೂಡಿಕೆಗಳನ್ನು ಪ್ರಕಟಿಸಿದ Google ಮತ್ತು Amazon ಕಂಪನಿ
ನ್ಯೂಯಾರ್ಕ್: ಭಾರತದ ಡಿಜಿಟಲ್ ಜಗತ್ತಿನ ಉತ್ತೇಜಕ ಬೆಳವಣಿಗೆಯಲ್ಲಿ, Google ನ ಸಿಇಒ ಸುಂದರ್ ಪಿಚೈ ಮತ್ತು Amazon ನ ಸಿಇಒ ಆಂಡ್ರ್ಯೂ ಜಾಸ್ಸಿ ಅಮೇರಿಕಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ನಂತರ ಮಹತ್ವದ ಹೂಡಿಕೆ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಹೂಡಿಕೆಗಳು ಡಿಜಿಟಲ್ ರೂಪಾಂತರ ಹಾಗೂ ಸ್ಥಳೀಯ ಭಾಷೆಯ ವಿಷಯವನ್ನು ಉತ್ತೇಜಿಸುವ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ಜಾಗತಿಕವಾಗಿ ಭಾರತೀಯ ಉತ್ಪನ್ನಗಳ ರಫ್ತು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಪ್ರಧಾನ ಮಂತ್ರಿಯೊಂದಿಗಿನ ಭೇಟಿಯ ಸಂದರ್ಭದಲ್ಲಿ, ಸುಂದರ್ ಪಿಚೈ ಅವರು ಗುಜರಾತ್ನ […]
ಜೂ 26 ರಿಂದ 28 ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಪಿತ್ರೋಡಿ ಮತ್ತು ಪಿತ್ರೋಡಿ ಇಂಡಸ್ಟ್ರೀಯಲ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂಕುದ್ರು, ಗೋವಿಂದಗುಡ್ಡೆ, ಪಿತ್ರೋಡಿ, ಮುದ್ದಲಗುಡ್ಡೆ, ಪಿತ್ರೋಡಿ ಇಂಡಸ್ಟ್ರೀಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ. 26 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ […]