ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಕಲಬುರಗಿ : ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟೆ ಸಿರೂರು ಗ್ರಾಮದ ಬಳಿ ನಡೆದಿದೆ. ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ; ಪೈಲಟ್, ತರಬೇತುದಾರ ಪ್ರಾಣಾಪಾಯದಿಂದ ಪಾರು ಘಟನೆಯಲ್ಲಿ ಪೈಲಟ್ ಹಾಗು ತರಬೇತುದಾರ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖಾಸಗಿ ವಿಮಾನ ತರಬೇತಿ ‘ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ […]

ಹವಾಮಾನ ಇಲಾಖೆಯಿಂದ ಮುನ್ಸೂಚನೆ ಮುಂದಿನ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆ

ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ.ರಾಜ್ಯದಲ್ಲಿ ಮುಂದಿನ ತಿಂಗಳು ಮಳೆ ಪ್ರಮಾಣ ಎಷ್ಟಿರಲಿದೆ […]

ದೊಡ್ಮನೆ ಕುಟುಂಬದ ಯುವ ನಟ ಸೂರಜ್​ಗೆ ಅಪಘಾತ

ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು ನಂಜನಗೂಡು ರಸ್ತೆಯಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ವರನಟ ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್​ಗೆ ಅಪಘಾತ ಆಗಿದೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್​​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೂರಜ್​ ನೋಡಲು ಈಗಾಗಲೇ ಶಿವರಾಜ್ ಕುಮಾರ್ ನಿರ್ಮಾಪಕ ಚಿನ್ನೆಗೌಡ ಅವರು ಮೈಸೂರಿಗೆ ಹೋಗಿದ್ದಾರೆ. ಸೂರಜ್​ಭಗವಾನ್ ಶ್ರೀ ಕೃಷ್ಣ ಪರಮಾತ್ಮ […]

ಶಕ್ತಿ ಯೋಜನೆ ಪರಿಣಾಮ 1 ಕೋಟಿ ದಾಟಿದ ಸರ್ಕಾರಿ ಬಸ್ ಗಳಲ್ಲಿನ ಪ್ರಯಾಣಿಕರ ಸಂಖ್ಯೆ

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಪರಿಣಾಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ, ಈ ಹಿಂದೆ ಪ್ರತಿದಿನ 84.15 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಈಗ 1 ಕೋಟಿ ದಾಟಿದೆ ಎಂದು ತಿಳಿದುಬಂದಿದೆ. ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಅದರಿಂದ ಸಾರ್ವಜನಿಕ ಸಾರಿಗೆ ಅಭಿವೃದ್ಧಿ ಹೊಂದಲು ನೆರವಾಗಲಿದೆ. ನಿವೃತ್ತ […]

‘ಆರ್ಡರ್ ಆಫ್ ದಿ ನೈಲ್’ ಪ್ರಧಾನಿ ಮೋದಿಗೆ ಈಜಿಪ್ಟ್‌ನ ಅತ್ಯುನ್ನತ ಪ್ರಶಸ್ತಿ ಪ್ರದಾನ

ಕೈರೋ (ಈಜಿಪ್ಟ್) : ಪ್ರಧಾನಿ ನರೇಂದ್ರ ಮೋದಿಯವರಿಗೆ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾದ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್ ಸಿಸಿ ಅವರು ಭಾನುವಾರ ಪ್ರಧಾನಿ ಮೋದಿಯವರಿಗೆ ಕೈರೋದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಇದು ಪ್ರಪಂಚದಾದ್ಯಂತದ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡಿದ 13 ನೇ ಅತ್ಯುನ್ನತ ಸರ್ಕಾರಿ ಗೌರವವಾಗಿದೆ ಮತ್ತು ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ.ಕಳೆದ ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ, ಪಿಎಂ ಮೋದಿ ಅವರು ಕಂಪ್ಯಾನಿಯನ್ […]