ಶಾಲಾ ಪಠ್ಯದಲ್ಲಿ ಮಾದಕ ವ್ಯಸನ ದುಷ್ಪರಿಣಾಮದ ಪಾಠ ಅಳವಡಿಸಿ ಮಾಹಿತಿ ನೀಡಿ: ನ್ಯಾ. ಶರ್ಮಿಳಾ

ಉಡುಪಿ: ಇಂದಿನ ಯುವಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ತಡೆಯಲು ಪಠ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪಾಠಗಳನ್ನು ಅಳವಡಿಸಿ, ಸರಿಯಾದ ಮಾಹಿತಿ ನೀಡುವುದರಿಂದ ಈ ಸಮಸ್ಯೆ ಹೋಗಲಾಡಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಅಭಿಪ್ರಾಯಪಟ್ಟರು. ಅವರು ಸೋಮವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಪ್ರಾಣಿಗಳ ಅನಧಿಕೃತ ವಧೆ ಮೇಲೆ ಕಣ್ಗಾವಲಿಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಣಿಗಳ ಅನಧಿಕೃತ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ […]

ಶುದ್ಧೀಕರಿಸಿದ ನೀರು ಸರಬರಾಜಿಗೆ ನಗರಸಭೆ ಕ್ರಮ

ಉಡುಪಿ: ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ, ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಇದು ಪ್ರಥಮ ಮಳೆಯಾಗಿರುವುದರಿಂದ ಆಲಂ ಪ್ರಮಾಣ ಈ ಹಿಂದೆ ನಿಗದಿಪಡಿಸಿದಂತೆ ಇರುವುದರಿಂದ ಸಾರ್ವಜನಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ಕೆಂಪು ನೀರು ಸರಬರಾಜು ಆಗಿರುತ್ತದೆ. ಈಗಾಗಲೇ ಆಲಂ ಪ್ರಮಾಣವನ್ನು ಸರಿಪಡಿಸಲಾಗಿದ್ದು, ನಗರಸಭೆ ನೀರು, ಸರಬರಾಜು ಮಾಡುತ್ತಿರುವ ನೀರಿನಲ್ಲಿ ಕಸ-ಕಡ್ಡಿಗಳು ಬಂದಿರುವುದಿಲ್ಲ. […]

ಶಿಕ್ಷಣ, ಆರೋಗ್ಯ ಮತ್ತು ಆದಾಯದ ಅಂಶಗಳು ನೈಜ ಅಭಿವೃದ್ದಿಗೆ ಮಾಪಕ: ಎಸ್. ಜನಾರ್ದನ ಮರವಂತೆ

ಬೈಂದೂರು: ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದೇ ಅಭಿವೃದ್ಧಿ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಶಿಕ್ಷಣ, ಆರೋಗ್ಯ ಮತ್ತು ತಲಾ ಆದಾಯದ ಅಂಶಗಳನ್ನು ಒಟ್ಟು ಸೇರಿಸಿ ಮಾಡಲಾಗುವ ಅಪೇಕ್ಷಿತ ಮಾರ್ಪಾಡುಗಳು ನೈಜ ಅಭಿವೃದ್ಧಿ ಎಂದೆನಿಸಿಕೊಳ್ಳುತ್ತದೆ ಎಂದು ರಾಜ್ಯ ಪಂಚಾಯತ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಉಪ್ಪುಂದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಕುಂದಾಪ್ರ ಡಾಟ್ ಕಾಂ ವತಿಯಿಂದ ಆಯೋಜಿಸಲಾದ ‘ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟಿಸಿ, ಅಭಿವೃದ್ಧಿಯ ಪರಿಕಲ್ಪನೆ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಿದರು. ಯುನೈಟೆಟ್‍ […]

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಬ್ರಹ್ಮಾವರ: ಇಲ್ಲಿನ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಜೂನ್ 25 ರಂದು ಕಾಲೇಜಿನ ಸಭಾಗಂಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷ ಡಾ. ದೈವಿಕ್ ಟಿ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಂಗಾರಕಟ್ಟೆಯ ಸಾಮಾಜಿಕ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆ ಇದರ ಅಧ್ಯಕ್ಷ ಬಿ.ಭರತ್ ಕುಮಾರ್ ಶೆಟ್ಟಿ ಮತ್ತು ಸಂಸ್ಥೆಯ ಕಾರ್ಯದರ್ಶಿ ಎಚ್.ಇಬ್ರಾಹಿಂ ಸಾಹೇಬ್ ಹಾಗೂ ಚೇತನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಕಲ್ಪನಾ ಶೆಟ್ಟಿ ಇವರು ವಹಿಸಿದ್ದರು. ಫಾರ್ಚ್ಯೂನ್ ಶಿಕ್ಷಣ ಸಂಸ್ಥೆಗಳ […]