ಶಿಕ್ಷಣ ಸಂಸ್ಥೆಗಳು ಪಡೆಯುವ ದೇಣಿಗೆಗೆ ತೆರಿಗೆ ವಿನಾಯಿತಿ ಎಂದು ಹೈಕೋರ್ಟ್ ಆದೇಶ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಆದಾಯ ತೆರಿಗೆ ವಿನಾಯಿತಿ ನೀಡಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ನೀಡಿದ್ದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾ.ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿ ಆದೇಶಿಸಿದೆ. ”ಶಿಕ್ಷಣ ಸಂಸ್ಥೆಗಳು ಸಾರ್ವಜನಿಕರಿಂದ ಪಡೆಯುವ ದೇಣಿಗೆಗೆ ಆದಾಯ ತೆರಿಗೆ ಪಾವತಿಯಿಂದ ವಿನಾಯಿತಿ ಇರಲಿದೆ” ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ತಿಳಿಸಿದೆ.ಅಲ್ಲದೇ, ಶಿಕ್ಷಣ ನೀಡುವ ಕಾಯಕದಲ್ಲಿ ತೊಡಗಿರುವ ಚಾರಿಟಬಲ್ […]

ಸೇತುವೆ ಕೊಚ್ಚಿ ಹೋದ ಹಿನ್ನೆಲೆ ಬಿಹಾರದಲ್ಲಿ ನದಿಯ ಮಧ್ಯದಲ್ಲೇ ಸಿಲುಕಿದ ಜನತೆ!

ವೈಶಾಲಿ (ಬಿಹಾರ): ವೈಶಾಲಿ ಜಿಲ್ಲಾ ಕೇಂದ್ರದಿಂದ ರಘೋಪುರಕ್ಕೆ ಸಂಪರ್ಕ ಕಲ್ಪಿಸಲು ಗಂಗಾ ನದಿಗೆ ಅಡ್ಡಲಾಗಿ ತಾತ್ಕಾಲಿಕವಾದ ಈ ಪಿಪಾ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಮಳೆ ಜೊತೆಗೆ ಬಲವಾದ ಗಾಳಿಗೆ ಅದು ಕೊಚ್ಚಿಕೊಂಡು ಹೋಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆ ದಾಟುತ್ತಿದ್ದರು. ಏಕಾಏಕಿ ಉಂಟಾದ ಅವಘಡದಿಂದ ಜನರು ನದಿಯ ಮಧ್ಯದಲ್ಲೇ ಸಿಲುಕಿಕೊಂಡಿದ್ದರು. ಬಳಿಕ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದೆ. ಬಿಹಾರದಲ್ಲಿ ಮತ್ತೊಂದು ಸೇತುವೆ ಕೊಚ್ಚಿಕೊಂಡು ಹೋಗಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಇತ್ತೀಚಿಗೆ ಬಹುಕೋಟಿ ವೆಚ್ಚದ […]

ಜುಲೈ 1ರಿಂದ 10 ಕೆಜಿ ಧಾನ್ಯ ವಿತರಣೆ- ಸಿಎಂ ಸಿದ್ದರಾಮಯ್ಯ,ಅಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಹಣ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಹೆಚ್ಚುವರಿ ಅಕ್ಕಿ ನೀಡಲು ನಾವು ತೀರ್ಮಾನಿಸಿದರೆ ಕೇಂದ್ರ ಸರ್ಕಾರ ಕುತಂತ್ರದಿಂದ ತಪ್ಪಿಸಿದೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ನೀಡಬೇಕಾಗಿದೆ. ನಾವು ನಮ್ಮ ನಿಲುವಿನಿಂದ ಹಿಂದೆ ಸರಿಯದೆ ಯೋಜನೆಯನ್ನು ಜುಲೈ […]

ಚಂದ್ರಯಾನ-3 ಉಡಾವಣೆ ಜುಲೈ13ರಂದು ಮಧ್ಯಾಹ್ನ 2.30ಕ್ಕೆ: ಇಸ್ರೋ ಘೋಷಣೆ

ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3 ನೌಕೆಯನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-III ಮೂಲಕ ಉಡಾವಣೆ ಮಾಡಲಾಗುವುದು. ಇದಕ್ಕಾಗಿ ಜುಲೈ 13ರಂದು ಮುಹೂರ್ತ ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಜುಲೈ 13ರಂದು ಮಧ್ಯಾಹ್ನ 2:30 ಕ್ಕೆ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಘೋಷಿಸಿದೆ.ಇಸ್ರೋ ಮತ್ತೊಂದು ವಿಕ್ರಮಕ್ಕೆ ಸಜ್ಜಾಗಿದೆ. ಮುಂದಿನ ತಿಂಗಳಲ್ಲಿ ಚಂದ್ರಯಾನ ಸರಣಿಯ ಮೂರನೇ ನೌಕೆಯನ್ನು ನಭಕ್ಕೆ ಹಾರಿಸಲಿದೆ. ಇದು ಲ್ಯಾಂಡರ್ ಮತ್ತು ರೋವರ್ ಮಾದರಿಯನ್ನು […]

ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45.70 ಕೋಟಿ ಅನುದಾನಕ್ಕೆ ಒಪ್ಪಿಗೆ

ಮೈಸೂರು: ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ ಸುತ್ತಲಿನ ಪ್ರಾಂಗಣ, ದೇವಿಕೆರೆ, ನಂದಿ ಪ್ರತಿಮೆ, ದೇವಿ ಪಾದ, ಪ್ರವಾಸಿಗರ ವೀಕ್ಷಣಾ ಪ್ರದೇಶಗಳ ಸುತ್ತಲಿನ ಅಭಿವೃದ್ಧಿಗೆ ಹಾಗೂ ಭಕ್ತರು ಸರದಿ ಸಾಲಿನಲ್ಲಿ ನಿಲ್ಲುವ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದನ್ನು ಪ್ರಸಾದ್ ಯೋಜನೆ ಒಳಗೊಂಡಿದೆ. ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸುವ ಕಾಮಗಾರಿಗಳಿಗಾಗಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ […]