ಜೂನ್ 30 ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಕೆ.ಪಿ.ಸಿ.ಎಲ್ ರವರು ವರಾಹಿ ವಿದ್ಯುದಾಗಾರದಲ್ಲಿ Black Start Procedure ನಡೆಸುವುದರಿಂದ 220 ಕೆ.ವಿ ಕೇಮಾರ್ ಕಾರ್ಕಳದಿಂದ ವಿದ್ಯುತ್ ಸರಬರಾಜು ಆಗುತ್ತಿರುವ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವುಂಟಾಗುತ್ತದೆ. ಆದ ಕಾರಣ ಹಿರಿಯಡ್ಕ ಸ್ಥಾವರದಿಂದ ಹೊರಡುವ 33ಕೆವಿ ಹೆಬ್ರಿ ಫೀಡರ್ ನಲ್ಲಿಯೂ ಸಹಾ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, […]

ಮಂಗಳೂರು ವಿವಿ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್, ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಮಂಗಳೂರು ವಿವಿ ಪುರುಷರ ಮತ್ತು ಮಹಿಳೆಯರ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಿದ ಮಾಜಿ ಶಾಸಕ ಕೆ.ರಘುಪತಿ ಭಟ್, ಸರಕಾರಿ ಸಂಸ್ಥೆಗಳಲ್ಲಿ ಇದೇ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟುಉತ್ತೇಜನ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ತೆಂಕನಿಡಿಯೂರು ಕಾಲೇಜಿನ […]

ಎಸ್.ಡಿ.ಎಂ.ಸಿ ವತಿಯಿಂದ ಶಿಕ್ಷಕಿಯರಿಗೆ ಸನ್ಮಾನ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಶಿಕ್ಷಕಿಯರಾದ ಶ್ಯಾಮಲಾ ಮತ್ತು ಸತ್ಯವತಿಯವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶಾಮಲಾ ಪ್ರಭು ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯಾನಂದ ನಾಯಕ್ ಸ್ವಾಗತಿಸಿ ಮಾತನಾಡಿ, ಶಿಕ್ಷಕಿಯರ ಸೇವೆ , ಗ್ರಾಮಸ್ಥರೊಂದಿಗಿನ ಒಡನಾಟ, ಶಾಲೆಯ ಮೇಲೆ ಅವರಿಗಿರುವ ಅಭಿಮಾನದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಸಿ ಆರ್ ಪಿ ಪ್ರದೀಪ್ ಕುಮಾರ್, ಶಾಲಾ ಹಿತೈಷಿ ಹರೀಶ್ […]