ನವೀಕೃತ ಶ್ರೀ ಕೃಷ್ಣ ಛತ್ರ ಲೋಕಾರ್ಪಣೆ

ಉಡುಪಿ: ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಚತುರ್ಥ ಶ್ರೀ ಕೃಷ್ಣ ಪೂಜಾ ಪರ್ಯಾಯ ಅವಧಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಭಕ್ತರ ನೆರವಿನೊಂದಿಗೆ ಶ್ರೀ ಕೃಷ್ಣಮಠದ ರಾಜಾಂಗಣಕ್ಕೆ ಹೊಂದಿಕೊಂಡು ಇರುವ ನವೀಕೃತ ಶ್ರೀ ಕೃಷ್ಣ ಛತ್ರವನ್ನು ಇತರೆ ಮಠಾಧೀಶರ ಉಪಸ್ಥಿತಿಯಲ್ಲಿ ಬುಧವಾರ ಶ್ರೀ ಕೃಷ್ಣನಿಗೆ ಸಮರ್ಪಿಸಿದರು. ಬಳಿಕ ಮಠದ ಪುರೋಹಿತ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನೆರವೇರಿದವು. ಸದ್ರಿ ಛತ್ರವು 1966 ರಲ್ಲಿ ಆಗಿನ ಶೀರೂರು ಮಠಾಧೀಶರಿಂದ ನಿರ್ಮಸಲ್ಪಟ್ಟು ಪ್ರಸ್ತುತ ಶಿಥಿಲಗೊಂಡಿತ್ತು. ಇದೀಗ […]

ಕೆಜಿಎಫ್ ಹಾಡು ಹಕ್ಕುಸ್ವಾಮ್ಯ ಚ್ಯುತಿ ಆರೋಪ: ಕಾಂಗ್ರೆಸ್ ನಾಯಕರ ಮೇಲಿನ ಎಫ್ಐಆರ್ ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಕಾರ

ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಕೆಜಿಎಫ್ ಅಧ್ಯಾಯ 2 ರ ಸಂಗೀತದ “ಅನಧಿಕೃತ” ಬಳಕೆ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಟೆ ವಿರುದ್ಧದ ಎಫ್ಐಆರ್ ಅನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ನವೆಂಬರ್ 2022 ರಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಕೆಜಿಎಫ್ ಅಧ್ಯಾಯ 2 ರ ಸಂಗೀತವನ್ನು ಅನಧಿಕೃತವಾಗಿ ಬಳಸಲಾಗಿದೆ ಎಂದು ಎಂ.ಆರ್.ಟಿ ಸಂಗೀತ ಕಂಪನಿ ನೀಡಿದ ದೂರಿನ […]

10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ

ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ ಇದ್ದು, ಎಂ.ಎ/ಎಂ.ಎಸ್ಸಿ, ಬಿ.ಎಡ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೀನಿಯರ್ ಸೆಕೆಂಡರಿ ಸಿ.ಬಿ.ಎಸ್.ಸಿ ಶಾಲೆ ಅಥವಾ ಪಿ.ಯು ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9606474298