ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗೆ, ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.awards.gov.in ಅಥವಾ www.disabilityaffairs.gov.in ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ […]

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಆಚರಣೆ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜುಲೈ 3 ಸೋಮವಾರ ಗುರು ಪೂರ್ಣಿಮೆಯ ಪರ್ವಕಾಲದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಮನ್ನಿನಾಮಕ ಲಕ್ಷ್ಮಿ ನರಸಿಂಹ ಮಹಾ ಯಾಗವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿರುವುದು. ಗತಕಾಲದಲ್ಲಿ ಕ್ಷೇತ್ರ ರಚನೆಗೆ ಕಾರಣೀ ಭೂತರಾದ ಮುನಿ ಶ್ರೇಷ್ಠರೇನಿಸಿದ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ವಿಶೇಷವಾದ ನೃತ್ಯಸೇವೆ ಹಾಗೂ ಸಂಗೀತ ಸೇವೆಗಳು ಪ್ರಜ್ಞಾ ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ವಿವಿಧ […]

ಫಾಸ್ಟ್ ಫುಡ್ ಸೇವಿಸಿದ ಇಬ್ಬರು ಮಕ್ಕಳ ಸಾವು

ಹರಿಯಾಣ: ಫಾಸ್ಟ್ ಫುಡ್ ಇಬ್ಬರು ಮಕ್ಕಳ ಪ್ರಾಣವನ್ನೇ ತೆಗೆದ ಘಟನೆ ಹರಿಯಾಣದ ಸೋನಿಪತ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ನೂಡಲ್ಸ್, ಪರೋಟಾ ತಿಂದ ಮೂವರು ಮಕ್ಕಳ ಆರೋಗ್ಯ ಹದಗೆಟ್ಟಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಮತ್ತೊಂದು ಮಗುವಿನ ಸ್ಥಿತಿಯೂ ಗಂಭೀರವಾಗಿದೆ. ಭೂಪೇಂದ್ರ ಎಂಬುವವರ ಕುಟುಂಬದವರು ರಾತ್ರಿ ಪರೋಟಾ ಮತ್ತು ನೂಡಲ್ಸ್ ತಿಂದಿದ್ದಾರೆ. ಆದರೆ ರಾತ್ರಿ ಒಂದು ಗಂಟೆ ಸುಮಾರಿಗೆ ಭೂಪೇಂದ್ರ ಅವರ ಮೂವರು ಮಕ್ಕಳ ಸ್ಥಿತಿ ಹದಗೆಟ್ಟಿದೆ. ನಂತರ ಮೂವರನ್ನೂ […]

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಉಡುಪಿ ತಾಲೂಕು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಶುಕ್ರವಾರ ಹಿರಿಯಡ್ಕ ಶಾಸಕರ ಕಚೇರಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೇತ್ರಿ, ಕಾರ್ಯದರ್ಶಿ ಪ್ರಕಾಶ್ ಕುಲಾಲ್ ಮಂದಾರ್ತಿ, ರಾಜ್ಯ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಭಜನಾ ಪರಿಷತ್ತಿನ ಪದಾಧಿಕಾರಿಗಳಾದ ವಿಜಯ ಶೆಟ್ಟಿ ಕೊಂಡಾಡಿ, ಧರ್ಮಯ್ಯ ಕೆ. ಹಿರಿಯಡ್ಕ, ಸಂಧ್ಯಾ ಕಾಮತ್ ಹಿರಿಯಡ್ಕ, ಗೋಕುಲದಾಸ್ […]

ಉಡುಪಿ: ಚರಂಡಿಗಳಿಗೆ ಕಸ, ಕಡ್ಡಿ, ಪ್ಲಾಸ್ಟಿಕ್‌ಗಳನ್ನು ಎಸೆಯದಂತೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ವಾರ್ಡಿನ ಮಠದಬೆಟ್ಟು ಕಿಂಡಿ ಅಣಿಕಟ್ಟಿನಲ್ಲಿ ಜೂನ್ 28 ರಂದು ಭಾರಿ ಪ್ರಮಾಣದ ಕಸ, ಮರ ಹಾಗೂ ಮರದ ರೆಂಬೆ ಕೊಂಬೆಗಳು ಬಂದು ಕಿಂಡಿ ಅಣಿಕಟ್ಟಿನ ಹತ್ತಿರ ಬ್ಲಾಕ್ ಆಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುತ್ತದೆ. ಅದರಂತೆ ನಗರಸಭೆಯಿಂದ ಸ್ಥಳ ಪರಿಶೀಲಿಸಲಾಗಿ ಸದರಿ ಪ್ರದೇಶದಲ್ಲಿ ಬ್ಲಾಕ್ ಆಗಿದ್ದ ಮರದ ರಾಶಿಗಳನ್ನು ಪೌರಕಾರ್ಮಿಕರಿಂದ ತೆರವುಗೊಳಿಸಲು ನೀರಿನ ರಭಸ ಹೆಚ್ಚಿದ್ದರಿಂದ ಅಸಾಧ್ಯವಾಗಿರುತ್ತದೆ. ಆದ್ದರಿಂದ ನಗರಸಭೆಯ ಜೆ.ಸಿ.ಬಿ.ಯನ್ನು ಬಳಸಿ ಸಂಜೆಯ ವೇಳೆಗೆ ಸಿಕ್ಕಿ ಹಾಕಿಕೊಂಡಿದ್ದ ಮರದ […]