ಜಿಲ್ಲೆಯಲ್ಲಿ ಕೋವಿಡ್ -19 ಬೂಸ್ಟರ್ ಡೋಸ್ ಲಸಿಕೆ ಲಭ್ಯ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಡೋಸ್ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆ ಪಡೆದು 6 ತಿಂಗಳಾಗಿರುವ 18 ವರ್ಷ ಮೇಲ್ಪಟ್ಟವರಿಗೆ ಕೋರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಲಸಿಕೆಯು ಉಡುಪಿ, ಕಾರ್ಕಳ ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಗಳಲ್ಲಿ ತಲಾ 20-ಡೋಸ್ ಲಸಿಕೆ ಲಭ್ಯವಿರುತ್ತದೆ. ಲಸಿಕೆ ಪಡೆಯಲು ತಾಲೂಕು ಆರೋಗ್ಯಾಧಿಕಾರಿ ಕಚೇರಿಗಳಾದ ಉಡುಪಿಯ ರಂಜಿತ್ ಮೊ.ನಂ: 8277506007, ಕುಂದಾಪುರದ ಪ್ರದೀಪ್ ಮೊ.ನಂ: 8277506008 ಹಾಗೂ ಕಾರ್ಕಳದ ಪ್ರಸನ್ನ ಮೊ.ನಂ: 9844875390 ಅವರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಲು ನೋಂದಾಯಿಸಿಕೊಳ್ಳಬಹುದಾಗಿದೆ […]
‘ಕಿಚ್ಚ 46’ ಸಿನಿಮಾದ ಟೀಸರ್ ರಿಲೀಸ್, ರಗಡ್ ಲುಕ್‌ನಲ್ಲಿ ಕಿಚ್ಚ ಸುದೀಪ್ ಅಬ್ಬರ
ಕನ್ನಡ ಚಿತ್ರರಂಗದ ಬಹುಬೇಡಿಕೆ ತಾರೆ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾವನ್ನು ಅಭಿಮಾನಿಗಳು ಬಹಳ ಕಾತರದಿಂದ ಕಾಯುತ್ತಿದ್ದರು. ಮುಂದಿನ ಸಿನಿಮಾ ಘೋಷಣೆಯ ಬಗ್ಗೆ ಒತ್ತಾಯಿಸುತ್ತಿದ್ದರು. ಇದೀಗ ನಟನ ಅಭಿಮಾನಿಗಳಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ‘ಕಿಚ್ಚ 46’: ಸೋಷಿಯಲ್ ಮೀಡಿಯಾದಲ್ಲಿ ಬಹುಕಾಲದಿಂದ ‘ಕಿಚ್ಚ 46’ಎಂಬುದು ಟ್ರೆಂಡಿಂಗ್ ಆಗಿತ್ತು. ವಿಕ್ರಾಂತ್ ರೋಣ ಬಳಿಕ ಸುದೀಪ್ ಯಾವುದೇ ಸಿನಿಮಾ ಘೋಷಿಸಿರಲಿಲ್ಲ. ಸುಮಾರು ಏಳೆಂಟು ತಿಂಗಳಿಂದ ನಟನ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳು ಸೇರಿದಂತೆ ಸಿನಿಗಣ್ಯರು ಕತೂಹಲ ವ್ಯಕ್ತಪಡಿಸಿದ್ದರು. ಈಗಾಗಲೇ ಹಲವು ಅಂತೆ […]
ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್ ಪವಾರ್ ಅಧಿಕಾರ ಸ್ವೀಕಾರ
ಮುಂಬೈ:ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು, ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್ಸಿಪಿ ರಾಜ್ಯ […]
ಚಾಮರಾಜನಗರದ ಬುಡಕಟ್ಟು ಜನರೊಂದಿಗೆ ರಾಷ್ಟ್ರಪತಿ ಸಂವಾದ
ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ.ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಂವಾದಕ್ಕೆ ಬುಡಕಟ್ಟು ಜನರನ್ನು ಆಯ್ಕೆ ಮಾಡಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ […]
ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶ ‘ನಲಿಕಲಿ ನಕ್ಷತ್ರ’
ಗಂಗಾವತಿ (ಕೊಪ್ಪಳ):ಇಲ್ಲೊಂದು ಸರ್ಕಾರಿ ಶಾಲೆಯ ಗೋಡೆಗಳಿಗೆ ಚಿತ್ತಾರಗಳನ್ನು ಬಿಡಿಸುವ ಮೂಲಕ ಗಮನ ಇವರು ಸೆಳೆಯುತ್ತಿದ್ದಾರೆ.ಶಿಕ್ಷಕರ ತಂಡ ಮಕ್ಕಳನ್ನು ಶಾಲೆಗೆ ಸೆಳೆಯುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಶಾಲಾ ಬಿಡುವಿನ ಅವಧಿಯಲ್ಲಿ ಗಂಗಾವತಿಯ ಸರ್ಕಾರಿ ಶಾಲೆಗಳ ಶಿಕ್ಷಕರು ‘ನಲಿಕಲಿ ನಕ್ಷತ್ರ’ ಎಂಬ ತಂಡ ಕಟ್ಟಿಕೊಂಡು ಶಾಲೆಗಳನ್ನು ಸುಂದರಗೊಳಿಸುವ ಕಾಯಕ ಮಾಡುತ್ತಿದ್ದಾರೆ. ಮಕ್ಕಳನ್ನು ತಮ್ಮ ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕಿದೆ. ಇದರ ಜೊತೆಗೆ ಕಟ್ಟಡದ ಸೌಂದರ್ಯಕ್ಕೂ ಗಮನ ಕೊಡಬೇಕು. ಒಳ ಮತ್ತು ಹೊರಾಂಗಣಗಳನ್ನು ಆಕರ್ಷಣೀಯಗೊಳಿಸಲು ನಾನಾ ಚಿತ್ತಾರಗಳ ಮೊರೆ […]