ನಾಳೆ ದ.ಕ. ಜಿಲ್ಲೆಯ ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು ದ.ಕ. ಜಿಲ್ಲಾಧ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಮಳೆ ಮುಂದುವರೆಯುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ […]

ಉಡುಪಿ ಜಿಲ್ಲೆಗೆ ಜುಲೈ 7 ರವರೆಗೂ ಮುಂದುವರಿದ ರಜೆ

ಉಡುಪಿ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು , ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು , ಮಳೆ ಮುಂದುವರೆಯುವ ಮುನ್ಸೂಚನೆಯಿರುವುದರಿಂದ ಮುಂಜಾಗರ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:07.07.20123 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ […]

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ (ಜು.7) ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ನಾಲ್ಕು ದಿನದಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಅತಿ ಚಿಕ್ಕ ತುಂಗಾ ಅಣೆಕಟ್ಟು ಭರ್ತಿ ಹಿನ್ನೆಲೆ 7,500 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ : ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 7,500 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಉತ್ತಮ ಮಳೆಯಿಂದ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದೆ.ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಅಣೆಕಟ್ಟಿನ‌ ಹಿನ್ನೀರಿನ ಪ್ರದೇಶಗಳಾದ ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳ ಹರಿವು ಕೂಡಾ ಹೆಚ್ಚಾಗಿದೆ. ಇದರ ಪರಿಣಾಮ ನಿನ್ನೆ ರಾತ್ರಿ 10 ಸಾವಿರ ಕ್ಯೂಸೆಕ್ […]