ಹೊಂಬಾಳೆ ಫಿಲಂಮ್ಸ್ ನ ಪ್ರಭಾಸ್-ಪ್ರಶಾಂತ್ ನೀಲ್-ಪೃಥ್ವಿರಾಜ್ ಕಾಂಬಿನೇಷನ್ ನ ಬಹು ನಿರೀಕ್ಷಿತ ಚಿತ್ರ ‘ಸಲಾರ್’ ಟೀಸರ್ ರಿಲೀಸ್

ಪ್ರಭಾಸ್ ನಟನೆ, ಹೊಂಬಾಳೆ ನಿರ್ಮಾಣ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರವನ್ನು 2020 ರಲ್ಲಿ ಘೋಷಿಸಲಾಯಿತಾದರೂ ಕೋವಿಡ್ ನಿಂದಾಗಿ ಚಿತ್ರ ನಿರ್ಮಾಣದ ಕೆಲಸವು ಹಿನ್ನಡೆಯನ್ನು ಅನುಭವಿಸಿತು. ಎರಡು ವರ್ಷಗಳ ಬಳಿಕ ಇದೀಗ ಮೊದಲನೆ ಬಾರಿಗೆ ಸಲಾರ್ ನ ಟೀಸರ್ ಅನ್ನು ಜುಲೈ 6 ರಂದು ಬೆಳಿಗ್ಗೆ 5.12 ಕ್ಕೆ ರಿಲೀಸ್ ಮಾಡಲಾಗಿದೆ. ಇತರ ಚಲನಚಿತ್ರ ನಿರ್ಮಾಪಕರು ಮಧ್ಯರಾತ್ರಿಯಲ್ಲಿ ಟೀಸರ್‌ಗಳನ್ನು ಬಿಡುಗಡೆ ಮಾಡಿದರೆ, ಸಲಾರ್ ನಿರ್ಮಾಪಕರು ವಿಚಿತ್ರ ಸಮಯವನ್ನು ಆರಿಸಿಕೊಂಡರು. ಟೀಸರ್ ಅನ್ನು ಜುಲೈ 6 ರಂದು ಬೆಳಿಗ್ಗೆ […]

ಹಾಸನ: 2.5 ಲಕ್ಷ ರೂಪಾಯಿ ಮೌಲ್ಯದ ಟೊಮೇಟೊದೊಂದಿಗೆ ಪರಾರಿಯಾದ ಕಳ್ಳರು; ರೈತ ಮಹಿಳೆಯ ಅಳಲು

ಹಾಸನ: ರೈತ ಮಹಿಳೆಯೊಬ್ಬರು ತಮ್ಮ ಜಮೀನಿನಿಂದ 2.5 ಲಕ್ಷ ರೂಪಾಯಿ ಮೌಲ್ಯದ ಟೊಮೆಟೊಗಳನ್ನು ಕಳವು ಮಾಡಿದ್ದಾರೆ ಎಂದು ಬುಧವಾರ ಆರೋಪಿಸಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದ ರೈತ ಮಹಿಳೆಯ ಕೃಷಿ ಜಮೀನಿನಲ್ಲಿ ಮಂಗಳವಾರ ರಾತ್ರಿ ಕಳ್ಳರು 50-60 ಚೀಲ ಟೊಮೇಟೊಗಳೊಂದಿಗೆ ಪರಾರಿಯಾಗಿದ್ದಾರೆ. ರೈತ ಮಹಿಳೆ ಧಾರಿಣಿ ಮತ್ತು ಅವರ ಕುಟುಂಬ ಸದಸ್ಯರು ಎರಡು ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಮುಂದಿನ ವಾರ ಇಳುವರಿಯನ್ನು ಮಾರುಕಟ್ಟೆಗೆ ಸಾಗಿಸಲು ಯೋಜಿಸಿದ್ದರು. ಆದರೆ ಅಷ್ಟರಲ್ಲಾಗಲೇ ಕಳ್ಳರು […]

ಕುಂದಾಪುರ: ಕಮಲಶಿಲೆ ದೇಗುಲಕ್ಕೆ ತೆರಳಿದ್ದ ವ್ಯಕ್ತಿ ಆಕಸ್ಮಿಕವಾಗಿ ನದಿಗೆ ಬಿದ್ದು ಸಾವು

ಕುಂದಾಪುರ: ಇಲ್ಲಿನ ಬಹು ಪ್ರಖ್ಯಾತ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮೃತರನ್ನು ಶೇಷಾದ್ರಿ ಐತಾಳ್ ಎಂದು ಗುರುತಿಸಲಾಗಿದೆ. ಇವರು ಜು. ೫ ರಂದು ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ ಕಮಲಶಿಲೆ ದೇವಾಲಯದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಇಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರಲ್ಲಿ ಶವ ಪತ್ತೆಯಾಗಿದ್ದು, ಮುಳುಗು ತಜ್ಞ […]

ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನ: 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಅನ್ವಯ

ಬೆಂಗಳೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಪ್ರತಿ ತಿಂಗಳ ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸಲು ಶಾಲೆಗಳಿಗೆ ಸೂಚನೆ ನೀಡಿದೆ. ಒಂದನೇ ತರಗತಿಯಿಂದ ಎಂಟನೇ ತರಗತಿ ವರೆಗಿನ ಮಕ್ಕಳಿಗೆ ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನ ಅನ್ವಯವಾಗಲಿದೆ. ಮಣ ಭಾರದ ಶಾಲಾ ಬ್ಯಾಗ್ ಗಳಿಂದ ಮಕ್ಕಳಿಗೆ ಮುಕ್ತಿ ದೊರಕಿಸಿ, ಶಾಲಾ ಶಿಕ್ಷಣವನ್ನು ಆನಂದದಾಯಕ ಮತ್ತು ಚಟುವಟಿಕೆಯುಕ್ತ ಮಾಡುವಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಭಾರೀ ಮಳೆ: ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಮುಳುಗಡೆ

ಉಡುಪಿ: ಕಳೆದ 2-3 ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳಾದ ಬೈಲಕರೆ ಹಾಗೂ ಕಲ್ಸಂಕ ಹತ್ತಿರದ ಮನೆಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ನೇತೃತ್ವದಲ್ಲಿ ಸಹಾಯಕ ಅಗ್ನಿಶಾಮಕ ದಳದ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳ ಸಹಾಯದಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕುಂಜಿಬೆಟ್ಟು ನಗರಸಭಾ ಸದಸ್ಯ ಗಿರೀಶ್ ಅಂಚನ್, ಮಾಜಿ ನಗರಸಭಾ […]