ಗ್ರಾಮ ಪಂಚಾಯತ್ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ಜುಲೈ 12 ಕೊನೆ ದಿನ; ಜುಲೈ 23 ರಂದು ಚುನಾವಣೆ

ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರಂತೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮ ಪಂಚಾಯತ್- ಹಿಂದುಳಿದ ವರ್ಗ ಅ, ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್- ಸಾಮಾನ್ಯ ಮಹಿಳೆ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್‌ನ ಅನುಸೂಚಿತ ಪಂಗಡ ಮಹಿಳೆ ತಲಾ 1 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿ […]

ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ 2,667, ಕಾಳುಮೆಣಸು 4,328 ಹಾಗೂ ತೆಂಗು 458 ಗಿಡಗಳು ಸೇರಿದಂತೆ ಒಟ್ಟು 7,453 ಸಸಿಗಳು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ತೋಟಗಾರಿಕೆ ಕ್ಷೇತ್ರಗಳಲ್ಲಿ ಅಡಿಕೆ 9,000, ಗೋಡಂಬಿ 5,683 ಹಾಗೂ 15,266 ಕಾಳುಮೆಣಸು ಸಸಿಗಳು ಸೇರಿದಂತೆ […]

ಜಿಲ್ಲೆಯ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ತಕ್ಷಣ ಸಂಪರ್ಕಕ್ಕೆ ಸಿಗುವಂತಿರಬೇಕು: ಕೂರ್ಮಾ ರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ರಾಜ್ಯ ವಿಕೋಪ ನಿರ್ವಹಣಾ ಪಡೆಯ ಒಂದು ತಂಡವನ್ನು ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಕೋರಲಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಯಾವುದೇ ಸಂದರ್ಭದಲ್ಲೂ ತಕ್ಷಣ ಸಂಪರ್ಕಕ್ಕೆ ಸಿಗುವಂತೆ ಇರಬೇಕು ಮತ್ತು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ರಕ್ಷಣೆ ಮಾಡಬೇಕು. ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗೆ ರಚಿಸಲಾಗಿರುವ ಎಲ್ಲಾ ವಾರ್ಡ್ ಮತ್ತು ಗ್ರಾಮ ತಾಲೂಕು […]

ಸಿ.ಎ ಫೈನಲ್ ಫಲಿತಾಂಶ: ತ್ರಿಶಾ ಕಾಲೇಜಿನ ವಿದ್ಯಾರ್ಥಿನಿಯರು ಉತ್ತೀರ್ಣ

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಉಡುಪಿಯ ಅಂಕಿತಾ ಶೆಣೈ. ಇವರು ಶಿವಪ್ರಸಾದ್ ಶೆಣೈ ಹಾಗೂ ಅಂಜನಾ ಶೆಣೈ ದಂಪತಿಯ ಪುತ್ರಿಯಾಗಿದ್ದು, ಕೆ. ರಾವ್ ಆಂಡ್ ಕೋ. ಉಡುಪಿಯಲ್ಲಿ ತಮ್ಮ ಆರ್ಟಿಕಲ್ ಷಿಪ್ ಅನ್ನು ಮುಗಿಸಿದ್ದಾರೆ. ಇವರು ತಮ್ಮ ಸಿ.ಪಿ.ಟಿ ಹಾಗೂ ಇಂಟರ್ಮಿಡಿಯೇಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಪಡೆದುಕೊಂಡಿದ್ದಾರೆ. ಕಡೆಕಾರಿನ ಪದ್ಮಶ್ರೀ ಭಟ್. ಇವರು ಬಿ. ಎಸ್. ಶಶೀಂದ್ರ ಭಟ್ […]

ಜುಲೈ 8 ರಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಪಡುಬಿದ್ರಿ ಮತ್ತು ಉಡುಪಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವರು. ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ […]