ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ; ಕ್ರಿಯೇಟಿವ್ ಸಮಾಗಮ
ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ಜುಲೈ 07 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಸಂಸ್ಥಾಪಕ ಅಮೃತ್ ರೈ ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ […]
ಚಿಕ್ಕೋಡಿ: ನಾಪತ್ತೆಯಾದ ಜೈನ ಮುನಿ; ಹತ್ಯೆ ಸಂಬಂಧಿಸಿ ಇಬ್ಬರ ಬಂಧನ
ಚಿಕ್ಕೋಡಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಸನ್ಯಾಸಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಸನ್ಯಾಸಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಶನಿವಾರ ಮಾಧ್ಯಮಗಳು ವರದಿ ಮಾಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅವರ ಗುರುತು ಇನ್ನೂ ಬಹಿರಂಗಗೊಂಡಿಲ್ಲ. ಸನ್ಯಾಸಿಯು ಕಳೆದ 15 ವರ್ಷಗಳಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ […]
ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (CASK) 1914 ರಲ್ಲಿ ಸ್ಥಾಪನೆಯಾಯಿತು. ಅಂದಿನಿಂದ ಇಂದಿನವರೆಗೆ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅದ್ಭುತ ಸೇವೆಯನ್ನು ಮಾಡಿದೆ. ವಿಶೇಷವಾಗಿ ಕಳೆದ ಒಂದು ದಶಕದಲ್ಲಿ ಅನೇಕ ಪರಿಣಾಮಕಾರಿ ದತ್ತಿ ಮತ್ತು ಸಮುದಾಯ ಸೇವಾ ಯೋಜನೆಗಳನ್ನು ಸಂಸ್ಥೆಯು ಅನುಷ್ಠಾನಗೊಳಿಸಿದೆ. ಅಸೋಸಿಯೇಷನ್ ನ ಪ್ರಮುಖ ಯೋಜನೆಗಳು: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ (5,665 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ); ಶಿಕ್ಷಕರ ಉನ್ನತೀಕರಣ ಕಾರ್ಯಕ್ರಮ (1,543 ಶಿಕ್ಷಕರು […]
ಬ್ರಹ್ಮಾವರ: Blue Bell ಹೋಂ ಸ್ಟೇಗೆ ಕರ್ನಾಟಕ ಸರ್ಕಾರದ ಮಾನ್ಯತೆ
ಬ್ರಹ್ಮಾವರ: ಇಲ್ಲಿನ ಚೇರ್ಕಾಡಿ ಮುಂಡ್ಕಿನಜೆಡ್ಡುವಿನಲ್ಲಿರುವ Blue Bell ಹೋಂ ಸ್ಟೇಗೆ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ(ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ, 2015 ರ ಕಲಂ 8 ರ ಅಡಿ ಹೋಂ ಸ್ಟೇ ವರ್ಗದಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಬಜಪೆ: 5 ಲಕ್ಷ ರೂ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಶಾಲಾ ಸಂಚಾಲಕಿ
ಬಜಪೆ: ವಿದ್ಯೆ ಕಲಿಸಿ ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡಬೇಕಾಗಿರುವ ವಿದ್ಯಾ ದೇಗುಲಗಳೇ ಭ್ರಷ್ಟಾಚಾರಕ್ಕೆ ಎಡೆ ಮಾಡಿದಾಗ ಸಮಾಜಕ್ಕೆ ದಾರಿ ತೋರುವವರು ಯಾರು ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯಕ್ತ ಬಲೆಗೆ ಸಿಲುಕಿ ಬಿದ್ದಿದ್ದಾರೆ. ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಶುಕ್ರವಾರದಂದು 5 ಲಕ್ಷ […]