ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗಾಗಿ ಮರು ವಿನ್ಯಾಸಗೊಳಿಸಿದ ಹವಾಮಾನಧಾರಿತ ಬೆಳೆ ವಿಮೆ ಯೋಜನೆ ನೋಂದಣಿಗೆ ಅವಕಾಶ
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಅಡಿಕೆ ಬೆಳೆ ಪ್ರತಿ ಹೆ. ಗೆ ವಿಮಾ ಮೊತ್ತ 1,28,000 ರೂ. ಗಳಿಗೆ ವಿಮಾಕಂತು (ಶೇ.5) 6,400 ರೂ. ಹಾಗೂ ಕರಿಮೆಣಸು ಪ್ರತಿ ಹೆ.ಗೆ ವಿಮಾ ಮೊತ್ತ 47,000 ರೂ. ಗಳಿಗೆ […]
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಭುಗಿಲೆದ್ದ ಹಿಂಸಾಚಾರ; ಮತಗಟ್ಟೆ ಧ್ವಂಸಗೊಳಿಸಿದ ದುಷ್ಕರ್ಮಿಗಳು
ಕೋಲ್ಕತಾ: ಪಂಚಾಯತ್ ಚುನಾವಣೆಗೆ ಮತದಾನ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಉತ್ತರ 24 ಪರಗಣಗಳ ಪಿರ್ಗಾಚಾ ಪಂಚಾಯತ್‌ನಲ್ಲಿ ಶನಿವಾರ ಮುಂಜಾನೆ ಹಿಂಸಾಚಾರ ಪ್ರಾರಂಭವಾಗಿದೆ. ಶುಕ್ರವಾರ ರಾತ್ರಿ ಟಿಎಂಸಿ ಕಾರ್ಯಕರ್ತರ ಥಳಿತದಿಂದಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕೂಚ್‌ಬಿಹಾರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 44, 45, ನೂರ್ಪುರ್ ಪಂಚಾಯತ್ ನ ಮತಪೆಟ್ಟಿಗೆಗಳನ್ನು ಒಯ್ದು ಮತ ಪತ್ರಗಳನ್ನು ಹಾಳುಮಾಡಲಾಗಿದೆ. ಇಂದು ಮುಂಜಾನೆ ದಿನ್ಹಟಾ ಬ್ಲಾಕ್ ನಂಬರ್ 1 ಮತಗಟ್ಟೆಗೆ ನುಗ್ಗಿದ ಯನ್ನು […]
ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ನೇಮಕ
ಮಂಗಳೂರು: ಡಿ.ಪದ್ಮಾವತಿ ಅವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ (ಮೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅವರು ಮೂರು ವರ್ಷಗಳ ಕಾಲ ಮೆಸ್ಕಾಂ ನಿರ್ದೇಶಕರಾಗಿ (ತಾಂತ್ರಿಕ) ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪದ್ಮಾವತಿ ಅವರು ಕಲಬುರಗಿ, ಮೈಸೂರು ಮತ್ತು ದಕ್ಷಿಣ ಕನ್ನಡದ ವಿದ್ಯುತ್ ಸರಬರಾಜು ಕಂಪನಿಗಳ ಸಹಾಯಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸೂಪರಿಂಟೆಂಡಿಂಗ್ ಇಂಜಿನಿಯರ್ ಮತ್ತು ಮುಖ್ಯ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಸ್ಕಾಂ […]
ಜುಲೈ 11 ಮತ್ತು 13 ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ […]
ಅಕ್ರಮ ಆಸ್ತಿ ಗಳಿಸಿದ ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಉಡುಪಿ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಅಂದಿನ ಪಿ.ಐ ಕೆ.ಯು. ಬೆಳ್ಳಿಯಪ್ಪ ಇವರು ಮಾಹಿತಿಯನ್ನು ಸಂಗ್ರಹಿಸಿ, ಪಿರ್ಯಾದು ನೀಡಿದ ಮೇರೆಗೆ ಅಂದಿನ ಮಂಗಳೂರು ಪೊಲೀಸ್ ವಿಭಾಗದ ಎಸ್.ಪಿ. ಧರ್ಮರಾಜ್ ಎ.ಜಿ. ರವರು ಪ್ರಕರಣ […]