ಮಣಿಪಾಲ: ಅಡ್ಡಾದಿಡ್ಡಿ ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ದುಷ್ಕರ್ಮಿಗಳು

ಮಣಿಪಾಲ: ಕಾರನ್ನು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿಗೈದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕಾರು ಪರ್ಕಳ ಕಡೆಯಿಂದ ಮಣಿಪಾಲಕ್ಕೆ ಬರುವಾಗ ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಬಳಿಕ ಹಿಂದಕ್ಕೆ ರಿವರ್ಸ್ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಹಲವು ವಾಹನ ಜಖಂಗೊಂಡಿದೆ. ಪರ್ಕಳದಿಂದ ಬರುವಾಗಲೆ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿದೆ ಎನ್ನಲಾಗಿದೆ. ಮಣಿಪಾಲದಲ್ಲಿ ಯುಟರ್ನ್ ಮಾಡಿಕೊಂಡು ಪರ್ಕಳ ಕಡೆಗೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು […]

ಮಣಿಪಾಲ: ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಡಾ. ಟಿಎಂಎ ಪೈ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಆರಂಭಗೊಂಡಿದೆ. ಸಂಸ್ಥೆಯಲ್ಲಿ 3 ವರ್ಷದ (6 ಸೆಮಿಸ್ಟರ್) ಡಿಪ್ಲೋಮಾ ಎಂಜಿನಿಯರಿಂಗ್ ಪ್ರವೇಶಕ್ಕೆ ಕೆಲವು ಕೋರ್ಸ್ ಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಕೆಲವೇ ಸೀಟುಗಳು ಭರ್ತಿಯಾಗಲು ಬಾಕಿ ಇವೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು. ಆಟೋಮೊಬೈಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, […]

ಜುಲೈ 3 ರಿಂದ ಸೆ. 29 ವರೆಗೆ ಆನೆಗುಂದಿ ಮಹಾಸಂಸ್ಥಾನದ ಜಗದ್ಗುರುಗಳ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ

ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ವರೆಗೆ ಶ್ರೀ ಸರಸ್ವತೀ ಸತ್ಸಂಗ ಮಂದಿರ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಜರುಗಲಿದೆ. ಜುಲೈ 15 ರಂದು ಆನೆಗುಂದಿ ಶ್ರೀಗಳವರ ಜನ್ಮ ವರ್ಧಂತಿ ಹಾಗೂ ಶ್ರೀ ನಾಗಧರ್ಮೇಂದ್ರ ಸರಸ್ವತೀ ವಿದ್ಯಾರ್ಥಿ ಭವನ ಉದ್ಘಾಟನೆ ನಡೆಯಲಿದೆ.

ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿಯ ವಾರ್ಷಿಕೋತ್ಸವ ಸಮಾರಂಭವು ಜುಲೈ 8 ಶನಿವಾರದಂದು ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವಕೃಷ್ಣ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿಯನ್ನು ಪಡೆದರೆ ಸಾಲದು, ದೇಶವನ್ನು ಬೆಳೆಸುವ, ದೇಶದ ನಿಯಮವನ್ನು ಪಾಲಿಸುವ ಉತ್ತಮ ಪ್ರಜೆಗಳಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ […]

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಕೇಂದ್ರ ಸರ್ಕಾರದ ಕೊಳಕು ರಾಜಕೀಯಕ್ಕೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ನಿಲ್ಲಿಸುವ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ, ಕೆಜಿಗೆ 34 ರೂ ನಮ್ಮಿಂದ ತಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ […]