ಸೆಮಿಸ್ಗೆ ಜೊಕೊವಿಕ್:ಕ್ವಾರ್ಟರ್‌ಫೈನಲ್ ಪ್ರವೇಶಿಸಿದ ರೋಹನ್ ಬೋಪಣ್ಣ, ಮ್ಯಾಥ್ಯೂ ಎಬ್ಡೆನ್ ಜೋಡಿ
ಲಂಡನ್: ಭಾರತದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಅವರು ವಿಂಬಲ್ಡನ್ ಚಾಂಪಿಯನ್‌ಶಿಪ್‌ನ ಪುರುಷರ ಡಬಲ್ಸ್ನಲ್ಲಿ ಕ್ವಾರ್ಟರ್‌ಫೈನಲ್ ತಲುಪಿದ್ದಾರೆ. ಅವರು ತಮ್ಮ ರೌಂಡ್ ಆಫ್ 16 ಪಂದ್ಯದಲ್ಲಿ ನೆದರ್ಲೆಂಡ್ಸ್‌ನ ಡೇವಿಡ್ ಪೆಲ್ ಮತ್ತು ಯುಎಸ್‌ಎಯ ರೀಸ್ ಸ್ಟಾಲ್ಡರ್ ಅವರನ್ನು ಸೋಲಿಸಿದರು. ಆಲ್ ಇಂಗ್ಲೆಂಡ್ ಕ್ಲಬ್‌ನ ಗ್ರಾಸ್ ಕೋರ್ಟ್‌ನಲ್ಲಿ ಆರನೇ ಶ್ರೇಯಾಂಕದ ಇಂಡೋ-ಆಸೀಸ್ ಜೋಡಿ 7-5, 4-6, 7(10)-6(5) ರಿಂದ ಎರಡು ಗಂಟೆ 19 ನಿಮಿಷಗಳಲ್ಲಿ ಶ್ರೇಯಾಂಕ ರಹಿತ ಪೆಲ್ ಮತ್ತು ಸ್ಟಾಲ್ಡರ್ ವಿರುದ್ಧ ಜಯಗಳಿಸಿತು. ವಿಂಬಲ್ಡನ್ […]
ಬೆಂಗಳೂರಿನ HAL ಏರ್ಪೋರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶ : ತಾಂತ್ರಿಕ ದೋಷ
ಬೆಂಗಳೂರು :ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ತುರ್ತಾಗಿ ಎಚ್‌ಎಎಲ್‌ನಲ್ಲೇ ಲ್ಯಾಂಡ್ ಆಗಿದೆ. ವಿಮಾನ ತುರ್ತು ಭೂಸ್ಪರ್ಶವಾಗುವ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ. ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು, ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಸ್ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತಾಂತ್ರಿಕ […]
ವಾಕ್ ಇನ್ ಇಂಟರ್ವ್ಯೂ :ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ;
ಶಿವಮೊಗ್ಗ: ಗುತ್ತಿಗೆ ಆಧಾರದಡಿ ಒಟ್ಟು 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಪಶು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಹತೆ : ಅಭ್ಯರ್ಥಿಗಳು ಬಿಎಸ್ಸಿ ಪದವಿ, ಪಿಎಚ್ಡಿ ಪದವಿ ಪಡೆದಿರಬೇಕು. ಯಾವುದೇ ವಯೋಮಿತಿ ಇಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳ ವಿವರ : ಕರ್ನಾಟಕ ಪಶು […]
ಸಿಬಿಐ ಬಂಧಿತ ಮೂವರು ಅಧಿಕಾರಿಗಳು ಸೇರಿ 7 ರೈಲ್ವೆ ನೌಕರರ ಅಮಾನತು: ಒಡಿಶಾ ತ್ರಿವಳಿ ರೈಲು ಅಪಘಾತ ಕೇಸ್
ಭುವನೇಶ್ವರ(ಒಡಿಶಾ) ತಪ್ಪಾದ ಸಿಗ್ನಲಿಂಗ್ ಮತ್ತು ಸಿಬ್ಬಂದಿ ಅಚಾತುರ್ಯದಿಂದ ಅಪಘಾತಕ್ಕೆ ಕಾರಣವಾಗಿದ್ದ ಏಳು ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ (ಎಸ್‌ಇಆರ್) ಪ್ರಧಾನ ವ್ಯವಸ್ಥಾಪಕ ಅನಿಲ್ ಕುಮಾರ್ ಮಿಶ್ರಾ ಬುಧವಾರ ತಿಳಿಸಿದ್ದಾರೆ.ಜೂನ್ 2 ರಂದು 300 ಜನರನ್ನು ಬಲಿ ಪಡೆದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣದಲ್ಲಿ ನಡೆದ ತ್ರಿವಳಿ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿತ ಮೂವರು ಸಿಬ್ಬಂದಿ ಸೇರಿ ಕನಿಷ್ಠ ಏಳು ರೈಲ್ವೆ ಉದ್ಯೋಗಿಗಳನ್ನು ಆಗ್ನೇಯ […]
ನಾಳೆ ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು: ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಕಾವೇರಿ 1 ಹಾಗೂ 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ನಾಳೆ ಜುಲೈ 13 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ. ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪು ನಗರ, ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಎನ್.ಆರ್. ಕಾಲೋನಿ, ಬನಶಂಕರಿ 1ನೇ ಹಂತ, ಶಾಂತಲಾ ನಗರ, ಶಾಂತಿ ನಗರದ ಸುತ್ತಮುತ್ತ ಸರಬರಾಜು ಸ್ಥಗಿತವಾಗಲಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ […]