ಪ. ಬಂಗಾಳ ಪಂಚಾಯತ್ ಚುನಾವಣೆ: ಅತ್ಯಾಧಿಕ ಗ್ರಾಮ ಪಂಚಾಯತ್ ಗಳನ್ನು ತೆಕ್ಕೆಗೆ ಹಾಕಿಕೊಂಡ ತೃಣಮೂಲ ಕಾಂಗ್ರೆಸ್; ಎರಡನೇ ಸ್ಥಾನದಲ್ಲಿ ಬಿಜೆಪಿ
ಕೊಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ 42,097 ಸ್ಥಾನಗಳನ್ನು ಗೆದ್ದಿದೆ ಎಂದು ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಬಿಜೆಪಿ 9,223 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇತರರಲ್ಲಿ, ಎಡರಂಗ 3,021 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ 2,430 ಸ್ಥಾನಗಳನ್ನು ಪಡೆದುಕೊಂಡಿದೆ. ಇತರೆ ಹಾಗೂ ಸ್ವತಂತ್ರ ಅಭ್ಯರ್ಥಿಗಳು 2,866 ಸ್ಥಾನಗಳನ್ನು ಗೆದ್ದಿದ್ದಾರೆ. ಗ್ರಾಮ ಪಂಚಾಯಿತಿಗಳ ಸಂಖ್ಯೆಗೆ ಸಂಬಂಧಿಸಿದಂತೆ, ಒಟ್ಟು 3,317 ರಲ್ಲಿ 2,562 ರಲ್ಲಿ ಟಿಎಂಸಿ ಗೆದ್ದಿದೆ. […]
ಪಂಚನಬೆಟ್ಟು ಪ್ರೌಢ ಶಾಲೆ ಮುಚ್ಚಿಸಲು ಹುನ್ನಾರ: ಎ.ನರಸಿಂಹ
ಉಡುಪಿ: ಪಂಚನಬೆಟ್ಟು ವಿದ್ಯಾವರ್ಧಕ ಸಂಘದ ವತಿಯಿಂದ 33 ವರ್ಷಗಳಿಂದ ಕುಗ್ರಾಮದಲ್ಲಿ ಗುಣಮಟ್ಟದ ಉಚಿತ ಶಿಕ್ಷಣ ನೀಡುತ್ತಿರುವ ಪಂಚನಬೆಟ್ಟು ಪ್ರೌಢಶಾಲೆಯನ್ನು ಮುಚ್ಚಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎ.ನರಸಿಂಹ ಆರೋಪಿಸಿದರು. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆಯ ಮಾನ್ಯತೆ ರದ್ದು ಮಾಡಿ ಶಾಲೆ ಮುಚ್ಚುವ ಆದೇಶ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಶಿಕ್ಷಣ ಇಲಾಖೆಯು ಈ ಶಾಲೆ ಮುಚ್ಚುವ ಉದ್ದೇಶದಿಂದ ಕಿರುಕುಳ ನೀಡುತ್ತಿದೆ. 2 ಕೋಟಿ ರೂ. ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗಿದ್ದು, […]
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳ ಆಹ್ವಾನ
ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವತಿಯಿಂದ ಏಕಗವಾಕ್ಷಿ ಯೋಜನೆಯಡಿ 2023 ರ ಜನವರಿ 1 ರಿಂದ ಜೂನ್ 30 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವ ಸಾಕ್ಷರರ ಕೃತಿಗಳು ಮುಂತಾದ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು […]
ಜುಲೈ 14 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]