ಕುಂದಾಪುರ: ಅಪ್ರಾಪ್ತ ವಯಸ್ಸಿನ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ
ಕುಂದಾಪುರ: ಹೊರರಾಜ್ಯದಿಂದ ಬಂದಿದ್ದು, ಪತಿಯನ್ನು ತ್ಯಜಿಸಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯನ್ನು ಪ್ರೀತಿಸಿ ಮದುವೆಯಾದ ವ್ಯಕ್ತಿಯೊಬ್ಬ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಆತನ ವಿರುದ್ದ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬೈಂದೂರಿನ ಸೊಹೇಲ್ ಎಂದು ಗುರುತಿಸಲಾಗಿದೆ. ಈತ 11 ವರ್ಷಗಳ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದು ಆಕೆಯ ಇಬ್ಬರು ಮಕ್ಕಳೊಂದಿಗೆ ಕುಂದಾಪುರದಲ್ಲಿ ವಾಸವಾಗಿದ್ದ. ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಇದನ್ನು ಅರಿತ ಮಹಿಳೆಯು ತನ್ನ […]
208.46 ಮೀಟರ್ ಏರಿದ ಯಮುನಾ ನೀರಿನ ಮಟ್ಟ: ಮನೆಗಳಿಗೆ ನುಗ್ಗಿದ ನೀರು; ಜನಜೀವನ ಅಸ್ತವ್ಯಸ್ತ
ಹೊಸದಿಲ್ಲಿ: ದಿಲ್ಲಿಯ ಯಮುನಾ ನದಿಯಲ್ಲಿ ರಾತ್ರಿಯ ವೇಳೆ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಸಾರ್ವಜನಿಕ ಸಾರಿಗೆಯ ಮೇಲೆ ಪರಿಣಾಮ ಬೀರಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹರಿಯಾಣದ ಹಥ್ನಿಕುಂಡ್ ಬ್ಯಾರೇಜ್ ನಿಂದ ನದಿಗೆ ನೀರು ಬಿಡುತ್ತಿರುವುದರಿಂದ ಇಂದು ಬೆಳಗ್ಗೆ 11 ಗಂಟೆಗೆ ಯಮುನಾದಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. #WATCH | A Police van stuck in flood-water near […]
ಡಾ. ಜಿ. ಸಂತೋಷ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಬುಧವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್, ದ.ಕ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಹಾಗೂ ಪಾಲಿಕೆಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅಪರ ಜಿಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಾಣಿಕ್ಯ ಹೊಸ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದ್ದಾರೆ.
ಭಾರತದಲ್ಲಿ EV ಕಾರು ನಿರ್ಮಾಣ ಕಾರ್ಖಾನೆ ತೆರೆಯಲು ಟೆಸ್ಲಾ ಉತ್ಸುಕತೆ: ವಾರ್ಷಿಕ 500,000 EV ಕಾರು ಉತ್ಪಾದನೆಯ ಯೋಜನೆ
ನವದೆಹಲಿ: ಎಲೆಕ್ಟ್ರಿಕ್ ವಾಹನ ತಯಾರಕ ಟೆಸ್ಲಾ ಭಾರತದಲ್ಲಿ ಸ್ಥಳೀಯವಾಗಿ ಕಾರ್ಖಾನೆಯನ್ನು ಸ್ಥಾಪಿಸಲು ಭಾರತ ಸರ್ಕಾರದೊಂದಿಗೆ ಸಕ್ರಿಯವಾಗಿ ಮಾತುಕತೆ ನಡೆಸುತ್ತಿದೆ. ಈ ಕಾರ್ಯತಂತ್ರವು ಭಾರತದಲ್ಲಿ EV ಕಾರುಗಳನ್ನು ತಯಾರಿಸುವ ಮತ್ತು ಅವುಗಳನ್ನು ಹೆಚ್ಚು ಕೈಗೆಟುಕುವ ಬೆಲೆಯಲ್ಲಿ ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಿ ಮೂಲಗಳ ಪ್ರಕಾರ, ಟೆಸ್ಲಾ ವಾರ್ಷಿಕವಾಗಿ 500,000 EV ಗಳನ್ನು ಉತ್ಪಾದಿಸಲು ಯೋಜಿಸಿದ್ದು, ಆರಂಭಿಕ ಬೆಲೆಗಳು 20 ಲಕ್ಷದಿಂದ ಪ್ರಾರಂಭವಾಗುತ್ತವೆ ಎಂದು ಟಿಒಐ ವರದಿ ಮಾಡಿದೆ. ಒಂದೊಮ್ಮೆ ಟೆಸ್ಲಾ ಭಾರತದಲ್ಲಿ ಸ್ಥಳೀಯ ಕಾರ್ಖಾನೆಯನ್ನು ತೆರೆಯುವಲ್ಲಿ ಸಫಲರಾದರೆ ಈ […]
ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
ಬೆಂಗಳೂರು: ಚಿತ್ರರಂಗದ ಹಿರಿಯ ನಟ ಹಾಗೂ ಪಕ್ಷದ ಮುಖಂಡ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರಿಗೆ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ. ಈ ಸಂಬಂಧ ಬುಧವಾರ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ.ಸಂದೀಪ್ ಪಾಠಕ್ ಪ್ರಕಟಣೆ ಹೊರಡಿಸಿದ್ದಾರೆ. ಈವರೆಗೆ ಪಕ್ಷದ ಪ್ರಚಾರ ಮತ್ತು ಜನಸಂಪರ್ಕ ವಿಭಾಗದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗಿದೆ. […]