ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ನೇಮಕ
ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐ.ಎ.ಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳ್ಳಾಲ ತಾಲೂಕಿನ ಹಾವೂರು ಗ್ರಾಮದ ವಿದ್ಯಾಕುಮಾರಿ 2014 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ಅವರನ್ನು ನೇಮಿಸಲಾಗಿದೆ. ಕೂರ್ಮಾ ರಾವ್ ಎಂ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ನೇಮಕ
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಹುದ್ದೆಗೆ 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಕೆ ಅವರನ್ನು ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.
ಗೃಹ ಜ್ಯೋತಿ ಯೋಜನೆ: ಜುಲೈ 27 ಅರ್ಜಿ ಸಲ್ಲಿಕೆಗೆ ಕೊನೆ ದಿನ
ಬೆಂಗಳೂರು: ಕಾಂಗ್ರೆಸ್ ನ ಉಚಿತ ಕ್ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆ ದಿನವಾಗಿದೆ. ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು […]
ನಾಳೆ (ಜು.14) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ […]
ಜುಲೈ 17 ರಿಂದ 25 ರವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ: ಅಗತ್ಯ ಸಿದ್ದತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಅವರು ಬುಧವಾರದಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ […]