ಶಕ್ತಿ ಯೋಜನೆಯಿಂದ ವ್ಯಾಪಾರ ತತ್ತರ: ಖಾಸಗಿ ವಾಹನಗಳ ಮಾಲೀಕರ ಒಕ್ಕೂಟದಿಂದ ಪರಿಹಾರಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ತಮ್ಮ ವ್ಯಾಪಾರಕ್ಕೆ ಶೇ 50ರಷ್ಟು ಹೊಡೆತ ಬಿದ್ದಿದೆ ಎಂದು ಆರೋಪಿಸಿರುವ ಕರ್ನಾಟಕ ಖಾಸಗಿ ವಾಹನಗಳ ಮಾಲೀಕರ ಒಕ್ಕೂಟವು ಸಾರಿಗೆ ನಿಗಮಗಳಿಗೆ ನೀಡಿದಂತೆ ತಮಗೂ ಪರಿಹಾರ ನೀಡದಿದ್ದಲ್ಲಿ ಜುಲೈ 28 ರಂದು ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದೆ. ಗುರುವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಿರುವುದು ನಮ್ಮ ವ್ಯಾಪಾರವನ್ನು ಹಾಳು ಮಾಡಿದೆ. ನಮ್ಮ ವ್ಯಾಪಾರವು ಸುಮಾರು […]

ಕೋಲಾರ: 2,000 ಬಾಕ್ಸ್ ಟೊಮೇಟೋ ಮಾರಾಟ ಮಾಡಿ 38 ಲಕ್ಷ ರೂ ಗಳಿಸಿದ ರೈತ ಕುಟುಂಬ!!

ಕೋಲಾರ: ದೇಶಾದ್ಯಂತ ಟೊಮೇಟೊ ಬೆಲೆ ಗಗನಕ್ಕೇರುತ್ತಿರುವ ನಡುವೆಯೇ ರಾಜ್ಯದ ಕೋಲಾರ ಜಿಲ್ಲೆಯ ರೈತರ ಕುಟುಂಬವೊಂದು ಟೊಮೇಟೋ ಬೆಳೆದು ಜಾಕ್ ಪಾಟ್ ಹೊಡೆದಿದೆ. ಈ ಕುಟುಂಬವು 2,000 ಬಾಕ್ಸ್ ಟೊಮೇಟೋಗಳನ್ನು 38 ಲಕ್ಷ ರೂ ಗಳಿಗೆ ಮಾರಾಟ ಮಾಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ. ವರದಿಯ ಪ್ರಕಾರ, ಕೋಲಾರ ಜಿಲ್ಲೆಯ ಬೇತಮಂಗಲ ಗ್ರಾಮದ ಪ್ರಭಾಕರ ಗುಪ್ತಾ ಮತ್ತು ಅವರ ಸಹೋದರರು ತಮ್ಮ 40 ಎಕರೆ ಜಮೀನಿನಲ್ಲಿ ಟೊಮೇಟೋ ಬೆಳೆದಿದ್ದಾರೆ. ಪ್ರತಿ ಕೆಜಿ ಟೊಮೇಟೊ ಬಾಕ್ಸ್ ಅನ್ನು […]

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಭಾರತ ಸರಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ವರು ಇಂದು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ಕಾರ್ಕಳ: ಜುಲೈ 17 ರಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ: ಕಾರ್ಕಳ-ಕುಂದಾಪ್ರ ಕನ್ನಡ ಹಬ್ಬ 2023

ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು ಘಟಕ ಹಾಗೂ ಕಾರ್ಕಳ ಕುಂದಾಪ್ರದವರ ಸಹಯೋಗದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ ನ ಉತ್ಸವ ಸಭಾಂಗಣದಲ್ಲಿ ಜುಲೈ 17 ರಂದು ಸಂಜೆ 4.30 ರಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಕಳ-ಕುಂದಾಪ್ರ ಕನ್ನಡ ಹಬ್ಬ 2023 ಅನ್ನು ಆಚರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಕ.ರಾ.ಹಿಂ.ವ.ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ರಂಗ ಸಂಸ್ಕೃತಿ ಕಾರ್ಕಳ ಇದರ ಅಧ್ಯಕ್ಷ ನಿತ್ಯಾನಂದ ಪೈ, ಜನಪದ ಕಲಾವಿದ ನಾಗರಾಜ್ ಪಾಣಾರ, ಖ್ಯಾತ ಸಾಹಿತಿ […]

ಅಂತ್ಯೋದಯ/ಬಿಪಿಎಲ್ ಕಾರ್ಡುದಾರರಿಗೆ ಬ್ಯಾಂಕ್ ಖಾತೆ ತೆರೆಯಲು ಇಂದಿನಿಂದ ಶಿಬಿರಗಳ ಆಯೋಜನೆ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಅಂತ್ಯೋದಯ(ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಸದಸ್ಯರು) ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ […]