ದಾವಣಗೆರೆ ಮತ್ತು ದಕ್ಷಿಣ ಕನ್ನಡ ,ಚಿತ್ರದುರ್ಗದಲ್ಲಿದೆ ಪ್ರಾಜೆಕ್ಟ್​​ ಕೋ ಆರ್ಡಿನೇಟರ್​ ಹುದ್ದೆ; ಅರ್ಜಿ ಸಲ್ಲಿಕೆಗೆ ಜು.28 ಕಡೆಯ ದಿನ

  ಉದ್ಯಮಗಳಿಗೆ ವ್ಯಾಪಾರ ಯೋಜನೆ ರೂಪಿಸುವಿಕೆ, ಧನಸಹಾಯ ರೂಪಿಸುವ ಮತ್ತು ಮೂಲಭೂತ ಸೌಲಭ್ಯ ಸೇರಿದಂತೆ ಆರ್ಥಿಕತೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಹುದ್ದೆ ಇದಾಗಿದೆ. ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಮತ್ತು ದಕ್ಷಿಣ ಕನ್ನಡದಲ್ಲಿ ಈ ಹುದ್ದೆಗಳು ಖಾಲಿ ಇವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ (Entrepreneurship Development Institute of India -EDII) ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್​​​​ ಅಫೀಸರ್​ ಮತ್ತು ಪ್ರಾಜೆಕ್ಟ್​​​ ಕೋ […]

ಗುಡುಗು ಸಹಿತ ಮಳೆಯಿಂದಾಗಿ ಅಮೆರಿಕದಲ್ಲಿ , 2600 ವಿಮಾನಗಳ ಸೇವೆ ರದ್ದು

ವಾಷಿಂಗ್ಟನ್​, ಅಮೆರಿಕ:ಅಮೆರಿಕದಲ್ಲಿ ಗುಡುಗು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ವೈಪರೀತ್ಯ ಕಾರಣ ಸುಮಾರು 2,600 ವಿಮಾನಗಳು ರದ್ದಾಗಿವೆ.ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಪ್ರಕಾರ, ಏಷ್ಯನ್ ಪ್ರದೇಶದಲ್ಲಿ 1,320 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೇ, ಇನ್ನೂ 8,000 ವಿಮಾನಗಳು ತಡವಾಗಿ ಚಲಿಸುತ್ತಿವೆ. ಈ ಪರಿಸ್ಥಿತಿ ವಿಶೇಷವಾಗಿ ದೇಶದ ಪೂರ್ವ ಭಾಗದಲ್ಲಿ ಇದೆ ಎಂದು ಸ್ಥಳೀಯ ಪತ್ರಿಕೆಗಳು ಹೇಳಿವೆ. ಅವುಗಳಲ್ಲಿ 350 ವಿಮಾನಗಳು ನ್ಯೂಜೆರ್ಸಿಯ ನೆವಾರ್ಕ್ ಲಿಬರ್ಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿವೆ. ಇದಲ್ಲದೇ, ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣ ಮತ್ತು […]

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿದ್ಯಾಕುಮಾರಿ ಅವರಿಗೆ ಸ್ವಾಗತ

ಉಡುಪಿ: ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಗೌರವಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ, ಕನ್ನಡ ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಹಕಾರ ಕೋರಲಾಯಿತು.

ಉಡುಪಿ: ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಚಾಲನೆ

ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಡಿಷನಲ್ ಮೇಜರ್ ಜನರಲ್ ಅರ್. ಆರ್. ರೈನಾ, ಮಂಗಳೂರು ಸೇನಾ ನೇಮಕಾತಿ ವಿಭಾಗದ ಕರ್ನಲ್ ಅನುಜ್ ಗುಪ್ತ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.

ರಾಜ್ಯ ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬದ ಕಲರವ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಿಶ್ವ ಕುಂದಾಪುರ ಕನ್ನಡ ಹಬ್ಬ ಸಂಭ್ರಮದಿಂದ ನಡೆಯಿತು. ಟೀಮ್ ಕುಂದಾಪುರಿಯನ್ಸ್ ವತಿಯಿಂದ ಮಾತಿನ್ ಹಬ್ಬ ಕಾರ್ಯಕ್ರಮ ಆಯೋಜಿಸಲಾಯಿತು. ಬದುಕು ಕಟ್ಟಕೊಳ್ಳುವ ಸಲುವಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ನೆಲೆಯಾದ ಕುಂದಾಪುರ ಭಾಗದವರೇ ಸೇರಿ ಕಟ್ಟಿದ ತಂಡವೇ ಟೀಂ ಕುಂದಾಪುರಿಯನ್ಸ್. ಈಗಾಗಲೇ ಹತ್ತು-ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಹಾನಗರಿಯಲ್ಲಿ ಮನೆಮಾತಾದ ತಂಡ, ಇಂದು ಕುಂದಾಪುರದ ಹಬ್ಬದ ಮೂಲಕ ಮತ್ತೊಮ್ಮೆ ತನ್ನ ಸಾಧನೆಯನ್ನ ತೋರಿಸಿಕೊಟ್ಟಿದೆ. ಕಾರ್ಯಕ್ರಮದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, […]