ಮಳೆಯನ್ನೂ ಲೆಕ್ಕಿಸದೆ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು: ಅರ್ಹತೆಗಳಿಸಲು ವಿಫಲರಾದವರಿಂದ ರೋದನ!!

ಉಡುಪಿ : ಸೋಮವಾರದಂದು ಅಜ್ಜರ ಕಾಡು ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 41, ಉಡುಪಿಯ 59, ದ.ಕನ್ನಡದ 88, ದಾವಣಗೆರೆಯ 91, ಶಿವಮೊಗ್ಗದ 92 ಹಾಗೂ ಹಾವೇರಿ ಜಿಲ್ಲೆಯ 294 ಸೇರಿದಂತೆ ಒಟ್ಟು 665 ಅಭ್ಯರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 6.30 ರಿಂದ ನಡೆದ ಓಟದ ಸ್ಪರ್ಧೆಯಲ್ಲಿ ಅಭ್ಯರ್ಥಿಗಳನ್ನು ತಲಾ 100 ಜನರಂತೆ ತಂಡಗಳಾಗಿ ವಿಂಗಡಿಸಲಾಗಿದ್ದು, ನಿಗದಿತ ದೂರ 1600 ಮೀ. (ಕ್ರೀಡಾಂಗಣದ 4 ಸುತ್ತು) ನ್ನು 5.30 ನಿಮಿಷದೊಳಗೆ ಪೂರ್ಣಗೊಳಿಸಿದವರನ್ನು ಮತ್ತು 5.30 ರಿಂದ 5.45 […]

ಪ್ರಸ್ತುತ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ರದ್ದು ಮಸೂದೆ ಮಂಡನೆ ಇಲ್ಲ: ವರದಿ

ಬೆಂಗಳೂರು: ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಬಲವಂತದ ಮತಾಂತರ ನಿಷೇಧ ಕಾನೂನು ಮಸೂದೆಯನ್ನು ರದ್ದುಗೊಳಿಸುವ ಜೂನ್ 15 ರ ಕ್ಯಾಬಿನೆಟ್ ನಿರ್ಧಾರದ ಹೊರತಾಗಿಯೂ ರಾಜ್ಯ ವಿಧಾನಮಂಡಲದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸದಿರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕೆಲವು ದಿನಗಳ ಹಿಂದೆ ಸಿದ್ಧಪಡಿಸಿದ ಕರಡು ಮಸೂದೆಯನ್ನು ಸರ್ಕಾರವು ಹಿಂತೆಗೆದುಕೊಂಡಿದೆ […]

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ ಎಂದು ಮಂಗಳವಾರ ಅವರ ಕುಟುಂಬ ಮತ್ತು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಘೋಷಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಘೋಷಿಸಿತು. ಕೇರಳದ ಮಾಜಿ ಮುಖ್ಯಮಂತ್ರಿ ನಿಧನದ ಸುದ್ದಿಯನ್ನು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. ಕೆಲ ದಿನಗಳಿಂದ […]

ಇಂದಿನಿಂದ ನಾಡಿನಾದ್ಯಂತ ದಶಕೋಟಿ ರಾಮ ಜಪಯಜ್ಞ: ಪೇಜಾವರ ಶ್ರೀ

ಉಡುಪಿ: ಅಧಿಕ ಮಾಸದಲ್ಲಿ ಅಯೋಧ್ಯಾ ರಾಮನ ಕೃಪೆಗಾಗಿ ಜುಲೈ 18 ರಿಂದ ನಾಡಿನಾದ್ಯಂತ ದಶಕೋಟಿ ರಾಮ ಜಪಯಜ್ಞಕ್ಕೆ ಪೇಜಾವರ ಶ್ರೀಗಳು ಕರೆ ಕೊಟ್ಟಿದ್ದಾರೆ. ಈ ವರ್ಷ ಅಧಿಕಮಾಸ ಬಂದಿದೆ, ಮಂಗಳವಾರದಿಂದ ಒಂದು ತಿಂಗಳ ಕಾಲ ಅಧಿಕ ಶ್ರಾವಣಮಾಸ ಇರಲಿದೆ. ಈ ಸಂದರ್ಭದಲ್ಲಿ ದೇವತಾ ಪ್ರೀತ್ಯರ್ಥವಾಗಿ ಮಾಡುವ ಯಾವುದೇ ಸತ್ಕರ್ಮಗಳಿಗೆ ಅತ್ಯಧಿಕ ಫಲ ದೊರೆಯಲಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪುರುಷೋತ್ತಮ ಮಾಸವೆಂದೇ ಕರೆಯಲ್ಪಡುವ ಈ ಅಧಿಕ ಮಾಸದಲ್ಲಿ ರಾಮನನ್ನು ನೆನೆಯೋಣ. ನಾಡಿನಾದ್ಯಂತ ಅಯೋಧ್ಯಾಪತಿ […]

ಕೆಸರುಗದ್ದೆಯಲ್ಲಿ ನೇಜಿ ನೆಟ್ಟು ಕೃಷಿ ಜೀವನದ ಕ್ಷಣಗಳನ್ನು ಸವಿದ ನಿಟ್ಟೂರು ಪ್ರೌಢಶಾಲಾ ವಿದ್ಯಾರ್ಥಿಗಳು

ಉಡುಪಿ: ನಿಟ್ಟೂರು ಪ್ರೌಢಶಾಲೆಯ ಹತ್ತನೇ ತರಗತಿಯ ಎಪ್ಪತ್ತೊಂದು ವಿದ್ಯಾರ್ಥಿಗಳು ಪುತ್ತೂರು ಗ್ರಾಮದ ಬೂದ ಪೂಜಾರಿಯವರ ಸುಮಾರು ಒಂದು ಎಕರೆ ಗದ್ದೆಯಲ್ಲಿ ನೇಜಿ ನೆಟ್ಟು, ಒಂದಷ್ಟು ಹೊತ್ತು ಕೆಸರುಗದ್ದೆಯಲ್ಲಿ ಸುರಿಯುತ್ತಿದ್ದ ಮಳೆಯಲ್ಲಿ ಮಿಂದು, ವಿವಿಧ ಆಟಗಳನ್ನಾಡುತ್ತಾ ಭಾನುವಾರದ ರಜೆಯನ್ನು ಸ್ಮರಣೀಯಗೊಳಿಸಿ ಸಂಭ್ರಮಿಸಿದರು. ಮಕ್ಕಳೊಂದಿಗೆ ಮಾಜಿ ಶಾಸಕ, ನಿಟ್ಟೂರು ಎಜುಕೇಷನಲ್ ಸೊಸೈಟಿಯ ಅಧ್ಯಕ್ಷ ಕೆ.ರಘುಪತಿ ಭಟ್, ಉಪಾಧ್ಯಕ್ಷ ಎಸ್.ವಿ.ಭಟ್, ಕಾರ್ಯದರ್ಶಿ ಮುರಳಿ ಕಡೆಕಾರ್, ಎಚ್.ಎನ್.ಶೃಂಗೇಶ್ವರ, ಮುಖ್ಯ ಶಿಕ್ಷಕಿ ಅನಸೂಯ, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳಾದ ದಿನೇಶ್ ಪೂಜಾರಿ, ಪಿ.ಪರಶುರಾಮ ಶೆಟ್ಟಿ, […]