ಅಮೇರಿಕಾದ ಪ್ರತಿಷ್ಠಿತ ನೋವಾ ಸಯನ್ಸ್ ಪಬ್ಲಿಷರ್ಸ್ ನಲ್ಲಿ ಜ್ಞಾನಸುಧಾ ಕಾಲೇಜಿನ ಡಾ. ಪ್ರಜ್ವಲ್ ಕುಲಾಲ್ ಅವರ ಸಂಶೋಧನಾ ಲೇಖನ ಪ್ರಕಟ
ಕಾರ್ಕಳ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ಅವರ ಸಂಶೋಧನಾ ಲೇಖನವು ಅಮೇರಿಕಾದ ಪ್ರತಿಷ್ಠಿತ ನೋವಾ ಸಯನ್ಸ್ ಪಬ್ಲಿಷರ್ಸ್ನಲ್ಲಿ ಪ್ರಕಟಗೊಂಡಿದೆ. ನೀರಿನ ಶುದ್ಧೀಕರಣ ಕ್ಷೇತ್ರದಲ್ಲಿ ಸಸ್ಯಜನಕ ಪಾಲಿಸ್ಯಾಕರೈಡ್‌ಗಳನ್ನು ನ್ಯಾನೋ ಕಾಂಪೊಸಿಟ್‌ಗಳಾಗಿ ಪರಿಣಾಮಕಾರಿಯಾಗಿ ಬಳಸುವ ಸಂಶೋಧನೆಯನ್ನು ಗುರುತಿಸಿ 2022ರಲ್ಲಿ ಅಮೇರಿಕಾದ ಪ್ರತಿಷ್ಠಿತ ನೋವಾ ಸಯನ್ಸ್ ಪಬ್ಲಿಷರ್ಸ್ ತಮ್ಮ ವಿಜ್ಞಾನ ಸಂಬಂಧಿ ಸಂಪಾದನಾ ಕೃತಿಯ ಒಂದು ಅಧ್ಯಾಯಕ್ಕೆ ಲೇಖನಾ ಪ್ರಬಂಧವನ್ನು ಇವರಿಂದ ಅಹ್ವಾನಿಸಿದ್ದರು. ಇರಾನಿನ ಊರ್ಮಿಯಾ ವಿವಿಯ ಕೆಮಿಕಲ್ ಇಂಜಿನಿಯರಿಂಗ್ […]
ಜುಲೈ 23 ರಂದು ಗ್ರಾ.ಪಂ. ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ
ಉಡುಪಿ: ಗ್ರಾಮ ಪಂಚಾಯತಿ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್‌ನ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ […]
ಜು. 21-22 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ಧೀಕರಣ ಘಟಕದಲ್ಲಿ ಕ್ಲುಬಿಕಲ್ ಮೀಟರ್, ಟ್ಯಾಂಕ್ ಕ್ಲೀನಿಂಗ್ ಹಾಗೂ ಗೇಟ್ ವಾಲ್ವ್ ಫಿಕ್ಸಿಂಗ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ, ಜುಲೈ 21 ರ ಬೆಳಗ್ಗೆ 6 ರಿಂದ ಜು. 22 ರ ಬೆಳಗ್ಗೆ 6 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ತಾಲೂಕು ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗೌರವ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಉಡುಪಿಯ ನೂತನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ನಾಡೋಜ ಪ್ರೊ. ಕೆ. ಪಿ ರಾವ್ ಅಭಿನಂದನಾ ಸಮಿತಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಸಾಪ ಜಿಲ್ಲಾ ಸಮಿತಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.
ಬ್ರಹ್ಮಾವರ: ಸ.ಪ.ಪೂ ಕಾಲೇಜು ಎನ್.ಎಸ್.ಎಸ್ ವತಿಯಿಂದ ಯುವ ಸ್ಪಂದನ ಕಾರ್ಯಕ್ರಮ
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ “ಎನ್ ಎಸ್ ಎಸ್ ಯುವಸ್ಪಂದನ ” ಕಾರ್ಯಕ್ರಮದ ಅಡಿಯಲ್ಲಿ “ವೈಯಕ್ತಿಕ ಮತ್ತು ಸಾಮಾಜಿಕ ಜವಾಬ್ದಾರಿಗಳು” ಎಂಬ ವಿಚಾರವಾಗಿ ವಿಶೇಷ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾಲೂಕಿನ ತಹಸೀಲ್ದಾರ್ ರಾಜಶೇಖರ ಮೂರ್ತಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ತಮ್ಮ ಪರಿಚಯದೊಂದಿಗೆ ತಮ್ಮ ಜೀವನದ ಗುರಿ ಮತ್ತು ತಮ್ಮ ಜೀವನದ ಪ್ರೇರಕ ಶಕ್ತಿಗಳಾದ ಆದರ್ಶ […]