ಆನ್​ಲೈನ್ ಮೂಲಕ ಕಾಶಿಯಾತ್ರೆಯ 4ನೇ ರೈಲು ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಿಕೊಳ್ಳಲು ಮನವಿ : ಜುಲೈ 29ರಿಂದ ಆರಂಭ

ಬೆಂಗಳೂರು:2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್‌ಸಿಟಿಸಿ ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್​ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕರ್ನಾಟಕ ಭಾರತ್ […]

ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಾಘಾತದಿಂದ ನಿಧನ

ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಅರುಣ್ ನಾಯಕ್ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಕೆ. ಉದಯ ಕುಮಾರ್ ಶೆಟ್ಟಿ

ಮಂಗಳೂರು: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. […]

ಉಡುಪಿ: ಜು.21 ರಂದು ಲಿನೆನ್ ಕ್ಲಬ್ ಶೋ ರೂಂ ಉದ್ಘಾಟನೆ

ಉಡುಪಿ: ಲಿನೆನ್ ಕ್ಲಬ್ ಪುರುಷರ ಉಡುಪುಗಳ ಶೋ ರೂಂ ಜು.21ರಂದು ಬೆಳಿಗ್ಗೆ 10.30 ಕ್ಕೆ ಕಲ್ಸಂಕ ಬಳಿಯ ಮಾಂಡವಿ ರಾಯಲ್ ಪ್ರಿನ್ಸ್ G-2 ನಲ್ಲಿ ಕಾರ್ಯಾರಂಭಿಸಲಿದೆ. ಶೋ ರೂಂ ನ ಉದ್ಘಾಟನೆಯನ್ನು ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ನ ಎಂಡಿ ಡಾ. ಜೆರಿ ವಿನ್ಸೆಂಟ್ ಡಯಾಸ್ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಲಿದ್ದಾರೆ. ಚಂದ್ರಶೇಖರ್ ಅಡಿಗ ಹಾಗೂ ತಲ್ಲೂರು ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ಹೆಚ್ಚಿನ ಮಾಹಿತಿಗೆ: 9008133011/9448123418 ಸಂಪರ್ಕಿಸಿ