ಕಸ್ತೂರ್ಬಾ ಆಸ್ಪತ್ರೆಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳು ದಿನಾಚರಣೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು 22ನೇ ಜುಲೈ 2023 ರಂದು ಮೆದುಳಿನ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳಿನ ದಿನವನ್ನು ಆಚರಿಸಿತು. ಪ್ರತಿ ವರ್ಷ ಜುಲೈ 22 ಅನ್ನು ವಿಶ್ವ ಮೆದುಳಿನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ಘೋಷ ವಾಕ್ಯ “ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯ” ಈ ಅಂತರಾಷ್ಟ್ರೀಯ ಆಂದೋಲನವು ಮಾಹಿತಿಯ ಅಂತರವನ್ನು ಮುಚ್ಚಲು ಮತ್ತು ಮೆದುಳಿನ ಆರೋಗ್ಯದ ದುರ್ಬಲತೆಗಳ ಬಗ್ಗೆ ಸಾರ್ವಜನಿಕ ಅರಿವನ್ನು ಹೆಚ್ಚಿಸಲು […]

ಹಿರಿಯಡಕ: ಓಂತಿಬೆಟ್ಟುವಿನಲ್ಲಿ ಬೈಕ್ ಗೆ ಬಸ್ ಡಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ 

ಹಿರಿಯಡಕ: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಓಂತಿಬೆಟ್ಟು ಸಭಾಭವನದ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಉಡುಪಿಯ 60ವರ್ಷದ ಕೃಷ್ಣ ಪೂಜಾರಿ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರ, ನಿವೃತ್ತ ಬ್ಯಾಂಕ್ ಉದ್ಯೋಗಿ, ಹಿರಿಯಡ್ಕ ನಿವಾಸಿ ಭೋಜ ಶೆಟ್ಟಿ ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. […]

ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚಿಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದು […]

116 ನೇ ಸಂಸ್ಥಾಪನಾ ದಿನ ಆಚರಿಸಿದ ಬ್ಯಾಂಕ್ ಆಫ್ ಬರೋಡಾ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಗುರುವಾರ ತನ್ನ 116ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿತು. ಉರ್ವಾದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಸ್ವ-ಸಹಾಯ ಸಂಘಗಳ ಮೂಲಕ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಸೇರಿದಂತೆ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಬ್ಯಾಂಕಿನಿಂದ ದೊರೆಯುವಂತಾಗಲಿ […]

ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಪೂರ್ಣರಾತ್ರಿ ತಾಳಮದ್ದಲೆ ಕಾರ್ಯಕ್ರಮ

ಬೆಂಗಳೂರು: ಬಣ್ಣ ಬಣ್ಣದ ವೇಷಗಳಿಲ್ಲದೆ, ಮಾತಿನ ವೈಖರಿಯ ಮೂಲಕವೇ ಕಥಾನಕವೊಂದನ್ನು ಕಟ್ಟಿಕೊಡುವ ತಾಳಮದ್ದಲೆ ಎಂಬ ಯಕ್ಷಗಾನದ ರಂಗ ಪ್ರಕಾರವೊಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಪೂರ್ಣರಾತ್ರಿ ನಡೆಯಲಿದೆ. ಕೃಷ್ಣ ಸಂಧಾನ ಹಾಗೂ ಕರ್ಣಾರ್ಜುನ ಯಕ್ಷಗಾನ ತಾಳಮದ್ದಲೆ ಪ್ರಸಂಗಗಳು ಜು.22ರ ರಾತ್ರಿ 10 ರಿಂದ ಯಕ್ಷ ಸಂಕ್ರಾಂತಿ ಹೆಸರಿನಲ್ಲಿ ನಡೆಯಲಿವೆ. ಯಕ್ಷಗಾನ ಸಂಘಟಕ ನಾಗರಾಜ ಶೆಟ್ಟಿ ನೈಕಂಬಿ ಅವರ ಸಂಯೋಜನೆಯಲ್ಲಿ, ಕೃಷ್ಣ ಸಂಧಾನ, ಕರ್ಣಾ ರ್ಜುನ ಕಥಾನಕಗಳು ರವಿಚಂದ್ರ ಕನ್ನಡಿಕಟ್ಟೆ, ಗಣೇಶ್ ಹೆಬ್ರಿ, ಚಂದ್ರಕಾಂತ ಮೂಡುಬೆಳ್ಳೆ […]