ಜವಾನ್’​ ಸಿನಿಮಾದ ನಿಗೂಢ ಪೋಸ್ಟರ್​ ರಿಲೀಸ್​

ಬಾಲಿವುಡ್​ ಬಾದ್​ ಶಾ​ ಶಾರುಖ್​ ಖಾನ್​ ನಟನೆಯ ಬಹುನಿರೀಕ್ಷಿತ ‘ಜವಾನ್​’ ಸಿನಿಮಾದ ಪ್ರಿವ್ಯೂ ಈಗಾಗಲೇ ಬಿಡುಗಡೆಯಾಗಿ ಟ್ರೆಂಡಿಂಗ್​ನಲ್ಲಿದೆ.’ಜವಾನ್​’ ಸಿನಿಮಾದಿಂದ ಮತ್ತೊಂದು ಪೋಸ್ಟರ್​ ರಿಲೀಸ್​ ಆಗಿದೆ. ಕಣ್ಣನ್ನು ಕೇಂದ್ರಿಕರಿಸಿರುವ ಈ ಅದ್ಭುತ ಚಿತ್ರ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಪೋಸ್ಟರ್​ನಲ್ಲಿ ವ್ಯಕ್ತಿಯು ಯಾರೆಂದು ತಿಳಿದಿಲ್ಲ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಪೋಸ್ಟರ್​ ಸದ್ಯ ಟ್ರೆಂಡಿಂಗ್​ ಆಗಿದೆ. ಸಸ್ಪೆನ್ಸ್​ ಅನ್ನು ಕೇಂದ್ರವಾಗಿರಿಸಿ ಪೋಸ್ಟರ್​ ಅನ್ನು ರಿಲೀಸ್​ ಮಾಡಲಾಗಿದೆ. ನಿಗೂಢವಾದ ಕಣ್ಣನ್ನು ಮಾತ್ರ ತೋರಿಸಲಾಗಿದೆ. “ಅವನು ನಿನ್ನ […]

ಕೊಡಗಿನಲ್ಲಿ ಧಾರಾಕಾರ ಮಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಬೆಳಗ್ಗೆವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾವೇರಿ ನದಿ ನೀರು ಹೆಚ್ಚಳ ಆಗಿರುವುದರಿಂದ ಭಾಗಮಂಡಲ ಮತ್ತು ತಲಕಾವೇರಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯಿಂದ ಗುಡ್ಡ ಕುಸಿತ ಸಂಭವಿಸುವ […]

ನಾಳೆ (ಜು.24) ಬೈಂದೂರು ತಾಲೂಕಿನ ಶಾಲಾ ಮತ್ತು ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಬೈಂದೂರು,ಜು.23: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದ ಕಾರಣ, ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಬೈಂದೂರು ತಾಲೂಕಿನ ವ್ಯಾಪ್ತಿಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ (ಜು.24) ಸೋಮವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಸರಳಬೆಟ್ಟು: ಸಸ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ 

ಸರಳಬೆಟ್ಟು: ಶಿವ ಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳಬೆಟ್ಟು, ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಸ್ನೇಹಸಂಗಮ ಸರಳಬೆಟ್ಟು ಇವರ ಸಹಭಾಗಿತ್ವದಲ್ಲಿ‌ ಸಸ್ಯೋತ್ಸವ 2023 ಕಾರ್ಯಕ್ರಮವನ್ನು ಸರಳಬೆಟ್ಟುವಿನ ರತ್ನ ಸಂಜೀವ ಕಲಾಮಂಡಲದ ಆವರಣದಲ್ಲಿ ಇಂದು ಆಯೋಜಿಸಲಾಗಿತ್ತು. ಪದ್ಮಶ್ರೀ  ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭಹಾರೈಸಿದರು. ಸಮಾರಂಭದಲ್ಲಿ ಮಾಜಿ ಶಾಸಕ ರಘುಪತಿ ಭಟ್, ಎಎಸ್ಪಿ ಸಿದ್ದಲಿಂಗಯ್ಯ, ನಗರ ಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರ ಬಿಜೆಪಿ […]

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯಲ್ಲಿ ಅಂತರಶಿಸ್ತೀಯ ಏಕೀಕರಣ ಕುರಿತು ಸಮಾವೇಶ

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸಹಯೋಗವನ್ನು ಬೆಳೆಸುವ ಒಂದು ಭವ್ಯವಾದ ಪ್ರಯತ್ನದಲ್ಲಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ‘ಮಾಹೆ ಹೆಲ್ತ್ ಸೈನ್ಸಸ್ ರಿಸರ್ಚ್ ವರ್ಟಿಕಲ್ಸ್‌ನ ಸಮತಲ ಏಕೀಕರಣ’ ಎಂಬ ವಿಷಯದ ಬಗ್ಗೆ ಒಂದು ದಿನದ ಸಮಾವೇಶ ಜುಲೈ 21ರಂದು ಮಣಿಪಾಲದ ಮಾಹೆ  ಕ್ಯಾಂಪಸ್‌ನಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ  ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ  ಡಾ. ಶರತ್ ಕುಮಾರ್ ರಾವ್ ಮತ್ತು ಮಾಹೆ […]