ಹೆಸರಾಂತ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ವಿಜಯ್ ಕುಮಾರ್ ಈಗ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ
ಉಡುಪಿ: ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ತನ್ನ ಗೌರವಾನ್ವಿತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ಜು.26 ರಿಂದ ಪ್ರಸಿದ್ಧ ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ವಿಜಯ್ ಕುಮಾರ್ ಅವರು ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ತಮ್ಮ ಪರಿಣತಿ ಮತ್ತು ಕಾಳಜಿಗಾಗಿ ಗುರುತಿಸಲ್ಪಟ್ಟಿರುವ ಡಾ. ವಿಜಯ್ ಕುಮಾರ್ ಅವರು ಪ್ರತಿ ಬುಧವಾರ ಸಂಜೆ 5:00 ರಿಂದ 7:00 […]
ಉಡುಪಿ ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆ: ನಾಳೆ (ಜು.26)ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.26 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ನಾಳೆ (ಜು.26) ದ.ಕ. ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ 26 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಬುಧವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಹಾಗೂ ದೂರದ ಊರುಗಳಿಂದ ಬರುವ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾರ್ಥಿಗಳು ಅವಕಾಶ […]
ಉಡುಪಿ ನೇತ್ರಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಘಟನೆ: ಕಾಣದ ಕೈಗಳ ಷಡ್ಯಂತ್ರ
ಉಡುಪಿ: ನಗರದ ನೇತ್ರ ಜ್ಯೋತಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ, ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ […]
ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ; ವದಂತಿಗಳಿಗೆ ಕಿವಿಗೊಡಬೇಡಿ: ಅಕ್ಷಯ್ ಹಾಕೆ ಮನವಿ
ಉಡುಪಿ: ಕೆಲದಿನಗಳ ಹಿಂದೆ ಖಾಸಗಿ ಕಾಲೇಜೊಂದರ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಅನ್ಯ ಕೋಮಿನ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಮಚೀಂದ್ರ ಹಾಕೆ ಜು. 25 ಮಂಗಳವಾರದಂದು ಸ್ಪಷ್ಟನೆ ನೀಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು […]