ಜಿಲ್ಲೆಯಲ್ಲಿ ವರದಕ್ಷಿಣೆ ಪ್ರಕರಣ ಇಳಿಕೆ: ಸಿ.ಇ.ಓ ಪ್ರಸನ್ನ ಹೆಚ್
ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 4 ವರದಕ್ಷಿಣೆ ಪ್ರಕರಣಗಳಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹೆಚ್ ತಿಳಿಸಿದರು. ಅವರು ಸೋಮವಾರದಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಿ ಅವರನ್ನುಆರ್ಥಿಕವಾಗಿ ಸಬಲರನ್ನಾಗಿಸಬೇಕು. ಸರ್ಕಾರ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ […]
ಜು. 27 ರಂದು ಪೈ ಇಂಟರ್ ನ್ಯಾಷ್‌ನಲ್ ನಲ್ಲಿ ನೇರ ಸಂದರ್ಶನ
ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟವರ್ಸ್ ಬಳಿಯ ಪೈ ಇಂಟರ್ ನ್ಯಾಷ್‌ನಲ್ ನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ […]
ಬೈಂದೂರು: ಜಲಪಾತಕ್ಕೆ ಬಿದ್ದು ನಾಪತ್ತೆಯಾದವನ ಪತ್ತೆಗೆ ಮನವಿ
ಬೈಂದೂರು: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದ ಹಳ್ಳಿ ಕೆ.ಹೆಚ್ ನಗರ ನಿವಾಸಿ ಶರತ್ (23) ಎಂಬ ಯುವಕನು ಜುಲೈ 23 ರಂದು ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿನಿಂದ ಕಾಲು ಜಾರಿ ಬಿದ್ದು, ಸೌಪರ್ಣಿಕ ನದಿಯ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. […]
ಪುಟಪರ್ತಿಯಲ್ಲಿ ಅಂಕುಶ್ ನಾಯಕ್ ಇವರಿಂದ ಸಿತಾರ್ ವಾದನ
ಪುಟಪರ್ತಿ: ಶ್ರೀ ಸತ್ಯಸಾಯಿ ಸೇವಾ ಪ್ರತಿಷ್ಠಾನದ ಕರ್ನಾಟಕ ನಾರ್ತ್ ವಿಭಾಗದ ಪುಟಪರ್ತಿ ಯಾತ್ರೆ ಕಾರ್ಯಕ್ರಮದ ಅಂಗವಾಗಿ ಆಂಧ್ರಪ್ರದೇಶದ ಪುಟಪರ್ತಿಯ ಪ್ರಶಾಂತಿ ನಿಲಯಂನ ಸಾಯಿ ಕುಲವಂತ್ ಹಾಲ್‌ನಲ್ಲಿ ಶನಿವಾರ ಬೆಳಗ್ಗೆ ಮಂಗಳೂರಿನ ಯುವ ಸಿತಾರ್ ವಾದಕ ಅಂಕುಶ್ ಎನ್. ನಾಯಕ್ ಅವರಿಂದ ಸಿತಾರ್ ವಾದನ ಕಾರ್ಯಕ್ರಮ ನಡೆಯಿತು. ತಬ್ಲಾದಲ್ಲಿ ಪಂಡಿತ್ ರಾಜೇಂದ್ರ ನಾಕೋಡ್ ಸಾಥ್ ನೀಡಿದರು. ಕರ್ನಾಟಕ ನಾರ್ತ್ ವ್ಯಾಪ್ತಿಯ 19 ಜಿಲ್ಲೆಗಳ 4 ಸಾವಿರಕ್ಕೂ ಅಧಿಕ ಸಾಯಿ ಭಕ್ತರು ಈ ಪರ್ತಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶ್ರೀ ಸತ್ಯಸಾಯಿ […]
ಮುಕುಂದಕೃಪಾ ಆಂಗ್ಲ ಮಾಧ್ಯಮ ಶಾಲೆ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ
ಉಡುಪಿ: ಮುಕುಂದಕೃಪ ಆಂಗ್ಲ ಮಾಧ್ಯಮ ನರ್ಸರಿ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಇದರ ಸ್ಥಾಪಕರ ದಿನಾಚರಣೆ ಮತ್ತು ಸುವರ್ಣಮಹೋತ್ಸವದ ಸಮಾರೋಪ ಸಮಾರಂಭ ಸೋಮವಾರದಂದು ನಡೆಯಿತು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಪರಮಪೂಜ್ಯ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಶೆಟ್ಟಿ, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.