ಕೋಟದ ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಕಾರ್ಯಕ್ರಮ ನಡೆಯಿತು.ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ವೆರಿಕೋಸ್೯ ಎನ್ನುವ ರೋಗವನ್ನು ಗುಣಪಡಿಸುವ ಜೊತೆಗೆ ರಾಜ್ಯಾದ್ಯಂತ ತನ್ನ ಶಾಖೆಗಳನ್ನು ತೆರೆದು ಅದೆಷ್ಟೊ ಬಡ […]
ದ.ಕ. ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ(ಜು.27) ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರಿದಿದ್ದು, ನಾಳೆ (ಜುಲೈ 27) ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಖಾಸಗಿ ವಿದ್ಯಾ ಸಂಸ್ಥೆ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೋಜರಾಜ್ ವಾಮಂಜೂರು ದಂಪತಿ ಭೇಟಿ
ಉಡುಪಿ: ಶ್ರೀಕೃಷ್ಣಮಠಕ್ಕೆ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರಾದ ಭೋಜರಾಜ್ ವಾಮಂಜೂರು ಇವರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಮಧೂರು ನಾರಾಯಣ ಶರಳಾಯ ಇವರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ(ಜು.27) ಕೂಡ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ಎಲ್ಲೊ ಅಲರ್ಟ್ ಘೋಷಿಸದ್ದು, ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಮಂಗಳೂರು: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು: ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ
ಮಂಗಳೂರು: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು. ಹೀಗಾಗಿ […]