ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಉಡುಪಿ: ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ […]
ವೀಡಿಯೋ ಪ್ರಕರಣ: ಜುಲೈ 27 ರಂದು ಕಾಪು ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜುಲೈ 27 ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. […]
ಗ್ರೇಟರ್ ನೋಯ್ಡಾ: ಹಿಂಡನ್ ನದಿಯಲ್ಲಿ ಪ್ರವಾಹ; ಪಾರ್ಕಿಂಗ್ ಪ್ರದೇಶದಲ್ಲಿದ್ದ 300 ಕಾರುಗಳು ಮುಳುಗಡೆ
ನವದೆಹಲಿ: ಗ್ರೇಟರ್ ನೋಯ್ಡಾದ ಇಕೋಟೆಕ್ 3 ಪರಿಸರದಲ್ಲಿನ ಕಾರ್ ಪಾರ್ಕಿಂಗ್ ಪ್ರದೇಶವು ಸಂಪೂರ್ಣವಾಗಿ ಜಲಾವೃತವಾಗಿದ್ದು, 300 ಕಾರುಗಳು ನೀರನಲ್ಲಿ ಮುಳುಗಡೆಯಾಗಿವೆ. VIDEO | Several vehicles submerged in Greater Noida as water level of Hindon river rises. (Source: Third Party) pic.twitter.com/D8p94KUUUX — Press Trust of India (@PTI_News) July 25, 2023 ಧಾರಾಕಾರ ಮಳೆಯಿಂದಾಗಿ ಹಿಂಡನ್ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಇಕೋಟೆಕ್ 3 ಪರಿಸರ ಜಲಾವೃತವಾಗಿದೆ. ವಿಶಾಲವಾದ ಪಾರ್ಕಿಂಗ್ […]
ಭಾರತ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ಎಡ್ವರ್ಡ್ ಸಿಂಥಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಗೆ ಭೇಟಿ
ಮಂಗಳೂರು: ಕರ್ನಾಟಕದ ಮಂಗಳೂರಿನಲ್ಲಿರುವ UNECOSOC ವಿಶೇಷ ಸಮಾಲೋಚನಾ ಸ್ಥಾನಮಾನವನ್ನು ಹೊಂದಿರುವ CHD ಗ್ರೂಪ್‌ನ ಘಟಕವಾದ ಎಡ್ವರ್ಡ್ ಮತ್ತು ಸಿಂಥಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಗೆ ಭಾರತ ಸರ್ಕಾರದ ವಿವಿಧ ಸಚಿವಾಲಯಗಳ ಅಧೀನ ಕಾರ್ಯದರ್ಶಿಗಳು ಭೇಟಿ ನೀಡಿದರು. ಶಿಕ್ಷಣ, ಆರೋಗ್ಯ, ಹಣಕಾಸು, ರಕ್ಷಣಾ, ಗ್ರಾಮೀಣಾಭಿವೃದ್ಧಿ, ಡಿಒಪಿಟಿ, ಕ್ಯಾಬಿನೆಟ್ ಸೆಕ್ರೆಟರಿಯೇಟ್, ಸ್ಟೀಲ್, ಸಿಬಿಐ, ಪಶುಸಂಗೋಪನೆ, ಕೃಷಿ, ಪರಿಸರ ಮತ್ತು ಭೂ ವಿಜ್ಞಾನ, ರಿಜಿಸ್ಟ್ರಾರ್ ಜನರಲ್, ಪ್ರವಾಸೋದ್ಯಮ, ಕಾರ್ಪೊರೇಟ್ ವ್ಯವಹಾರಗಳು, ವಸತಿ, ಮಾಹಿತಿ ಮತ್ತು ಪ್ರಸಾರಕ್ಕಾಗಿ ಸಿಎಚ್‌ಡಿ ಗ್ರೂಪ್‌ನ ಪ್ರಯತ್ನವು […]
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಸುರೇಶ ಗುಳೇದ (42) ಎಂಬ ವ್ಯಕ್ತಿಯು ಮೂರು ತಿಂಗಳ ಹಿಂದೆ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.