ರಾಜ್ಯದ ಹಲವೆಡೆ ಭಾರಿ ಮಳೆ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 28 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ,ವಿಜಯನಗರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ […]

ಉಡುಪಿಯ ಖಾಸಗಿ ಕಾಲೇಜವೊಂದರಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ

ಉಡುಪಿ: ಕಳೆದ ಒಂದು ವಾರದಿಂದ ಉಡುಪಿ ಖಾಸಗಿ ಕಾಲೇಜವೊಂದರಲ್ಲಿ ವಿಡಿಯೋ ಚಿತ್ರೀಕರಣದ ವಿಷಯದಲ್ಲಿ ಚರ್ಚೆ ನಡೆಯುತ್ತಿದ್ದು ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸ್ ಇಲಾಖೆಯು ನ್ಯಾಯಯುತವಾದ ತನಿಖೆ ನಡೆಸುತ್ತಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡದೆ ತನಿಖೆಗೆ ಸಹಕಾರ ಮಾಡಬೇಕು. ಸತ್ಯಾಂಶ ಹೊರಬರದೆ ಇದರಲ್ಲಿ ರಾಜಕೀಯ ಲೇಪ ಹಚ್ಚುವುದು ಸಮಂಜಸವಲ್ಲ. ಉಡುಪಿ ಜಿಲ್ಲೆಯು ಶಾಂತಿಪ್ರಿಯವಾದ ಜಿಲ್ಲೆ. ಇಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಬೀಜ ಬಿತ್ತುವುದು ಸರಿಯಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿದೆ. ಸರಿಯಾದ ತನಿಖೆ ನಡೆಸಿ ನ್ಯಾಯ ಒದಗಿಸುವ ಭರವಸೆ […]

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಉಡುಪಿ: ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ಜಿಲ್ಲಾ ವ್ಯಾಪ್ತಿಯಲ್ಲಿ ವಾಸ್ತವ್ಯ ಹೊಂದಿರುವ ಪ್ರಸ್ತುತ ಪಿಯುಸಿ ಅಥವಾ ಮೇಲ್ಪಟ್ಟು ಶಿಕ್ಷಣ್ ಪಡೆಯುತ್ತಿರುವ ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಸಾಲಿನ ಅಂತಿಮ ಪರೀಕ್ಷೆಯ ಅಂಕ ಪಟ್ಟಿ ಪ್ರತಿ ಮತ್ತು ಪ್ರಸ್ತುತ ಕಲಿಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣಪತ್ರದೊಂದಿಗೆ ಆ.25 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಮಾಹಿತಿಗೆ ರಾಧಾಕೃಷ್ಣ ಸಾಮಂತ್ ಮುಂಡ್ಕಿನಜೆಡ್ಡು ಚೇರ್ಕಾಡಿ, ಎಸ್.ರಮಾನಂದ ಸಾಮಂತ್ ಸರಳೇಬೆಟ್ಟು, ಆಶಾ […]

ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಹೇಯ ಕೃತ್ಯ ಖಂಡಿಸಿ ಅಜ್ಜರಕಾಡಿನಲ್ಲಿ ಎಬಿವಿಪಿ ಪ್ರತಿಭಟನೆ

ಉಡುಪಿ: ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಹೇಯ ಕೃತ್ಯ ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಮತ್ತು ಸರಕಾರದ ನಡೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಕರಣದ ವಿಚಾರಣೆಗೆ ಪ್ರತ್ಯೇಕ ತಂಡ ರಚನೆ ಮಾಡಬೇಕು. ಸಮಗ್ರ ತನಿಖೆ ನಡೆಸಿ, ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಸುರಿಯುತ್ತಿರುವ ಮಳೆಯನ್ನು […]

ವೀಡಿಯೋ ಪ್ರಕರಣ: ಎಬಿವಿಪಿ ಪ್ರತಿಭಟನೆ; ಶಾಸಕ ಯಶ್ ಪಾಲ್ ಸುವರ್ಣ ಭಾಗಿ

ಉಡುಪಿ: ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವೀಡಿಯೋ ಚಿತ್ರೀಕರಣ ವಿವಾದ ಘಟನೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂತು. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ […]