ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಗೆ

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಕೂಲಕಂಷ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರದಂದು ಉಡುಪಿಗೆ ಆಗಮಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಈ ಸಂಬಂಧ ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಗುರುವಾರದಂದು ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತೆ, ಮೂವರು […]