ವಾಶ್ ರೂಮಿನಲ್ಲಿ ವೀಡಿಯೋ ಪ್ರಕರಣ: ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನಾ ಮೆರವಣಿಗೆ
ಉಡುಪಿ: ಖಾಸಗಿ ಕಾಲೇಜಿನ ವಾಶ್ ರೂಮಿನಲ್ಲಿ ರಹಸ್ಯ ಕ್ಯಾಮರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಶಂಕಿತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಸೂಕ್ತ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು. ಶುಕ್ರವಾರದಂದು ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತರು ನ್ಯಾಯಕ್ಕಾಗಿ ಒತ್ತಾಯಿಸಿದರು. ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. […]
ಬ್ರಹ್ಮಾವರ: ಜು.29 ರಂದು ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರ
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ಜು.29 ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸೆನ್ ಪೊಲೀಸ್ ಠಾಣೆ ಉಡುಪಿ ಇದರ ಪೊಲೀಸ್ ನಿರೀಕ್ಷಕ ಮಂಜುನಾಥ್ ಭಾಗವಹಿಸಲಿದ್ದಾರೆ.
ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮರಾ ಇಲ್ಲ; ಘಟನೆಗೆ ಕೋಮು ಬಣ್ಣ ಹಚ್ಚಬೇಡಿ: ಖುಷ್ಬು ಸುಂದರ್
ಉಡುಪಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಸದಸ್ಯೆ ಮತ್ತು ಬಿಜೆಪಿ ನಾಯಕಿ ಖುಷ್ಬು ಸುಂದರ್ ಗುರುವಾರ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇದ್ದ ವಿಚಾರವನ್ನು ತಳ್ಳಿಹಾಕಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಖುಷ್ಬೂ ಪ್ರಕರಣದ ತನಿಖೆಗಾಗಿ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಶೌಚಾಲಯಗಳಲ್ಲಿ ಹಿಡನ್ ಕ್ಯಾಮೆರಾಗಳಿದ್ದವು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲಿ ಸತ್ಯಾಂಶವಿಲ್ಲ. ಸುಳ್ಳು ವಿಡಿಯೋಗಳು ಹರಿದಾಡುತ್ತಿವೆ. ಅದೊಂದು […]
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಆರೋಪಿಗಳ ಕೇಸ್ ವಾಪಾಸು ಪಡೆಯುವ ಉತ್ಸುಕತೆ ಉಡುಪಿ ಪ್ರಕರಣದಲ್ಲಿ ಕಾಣುತ್ತಿಲ್ಲ: ಸರ್ಕಾರದ ವಿರುದ್ದ ನಯನಾ ಆಕ್ರೋಶ
ಉಡುಪಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ಗಳನ್ನು ಹಿಂಪಡೆಯುವ ಪ್ರಸ್ತಾಪದ ಬಗ್ಗೆ ಉತ್ಸುಕತೆ ತೋರುವ ರಾಜ್ಯ ಗೃಹ ಇಲಾಖೆ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣದ ಪ್ರಕರಣದ ತನಿಖೆಯ ಬಗ್ಗೆ ಯಾಕೆ ಮಹತ್ವ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪ್ರಶ್ನಿಸಿದ್ದಾರೆ. ಈ ಗಂಭೀರ ಪ್ರಕರಣವು ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದ್ದು, ಸದ್ರಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ […]
ಮಂಗಳೂರು: ಕುಡ್ಲಗಿಪ್ ಕುಂದಾಪ್ರದರ್ ಬಳಗದಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ
ಮಂಗಳೂರು: ದಿನಕ್ಕೆ ಕಡಿಮೆ ಎಂದರೂ ಹನ್ನೆರಡು ಗಂಟೆ ಕೆಲಸ ಮಾಡುವ ಶ್ರಮಜೀವಿಗಳೆಂದರೆ ಅದು ಕುಂದಾಪುರದವರು. ಪಂಚನದಿಗಳು ಹರಿಯುವ ನಾಡಾದ ಕುಂದಾಪುರದಿಂದ ಬಂದ ಜನರು ಕುಂದಾಪ್ರ ಹಬ್ಬವನ್ನು ಮಂಗಳೂರಿನಲ್ಲಿ ಆಚರಿಸುತ್ತಿದ್ದಾರೆ ಎಂದರೆ ಅದು ಕೇವಲ ಇಲ್ಲಿರುವ ಎಲ್ಲಾ ಕುಂದಾಪ್ರದವರನ್ನು ಒಟ್ಟುಗೂಡಿಸುವ ಉದ್ದೇಶವೇ ಹೊರತು ಇನ್ನಾವುದೇ ಸ್ವಾರ್ಥ ಅಲ್ಲ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಮೊಳಹಳ್ಳಿ ಡಾ. ಶಾಂತರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅರ್ಕುಳದ ಮನಸ್ವಿನಿ ಆಸ್ಪತ್ರೆಯಲ್ಲಿ ನಡೆದ ‘ಕುಡ್ಲಗಿಪ್ ಕುಂದಾಪ್ರದರ್’ ವಾಟ್ಸಾಪ್ ಬಳಗ ಆಯೋಜಿಸಿದ್ದ ವಿಶ್ವ ಕುಂದಾಪುರ ಕನ್ನಡ […]