ಹುಲಿ ಗಣತಿ: ಭಾರತದಲ್ಲಿ ಮೊದಲ ಸ್ಥಾನದಲ್ಲಿ ಮಧ್ಯಪ್ರದೇಶ , ಕರ್ನಾಟಕಕ್ಕೆ ಎರಡನೇ ಸ್ಥಾನದ ಪಟ್ಟ
ನಿರಂತರವಾಗಿ ಕಡಿಮೆಯಾಗುತ್ತಿರುವ ಹುಲಿಗಳ ಸಂಖ್ಯೆಯನ್ನು ನಿಯಂತ್ರಿಸಲು ಜುಲೈ 29 ರ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನ ಭಾರತಕ್ಕೆ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ವಿಶ್ವದ ಶೇಕಡಾ 70 ಕ್ಕಿಂತ ಹೆಚ್ಚು ಹುಲಿಗಳು ಭಾರತದಲ್ಲಿ ಕಂಡುಬರುತ್ತವೆ. ನವದೆಹಲಿ: ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಹುಲಿ ಗಣತಿ 2022 ರ ರಾಜ್ಯವಾರು ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಅಂಕಿ – ಅಂಶಗಳ ಪ್ರಕಾರ, ಭಾರತದಲ್ಲಿ 3167 ಹುಲಿಗಳಿವೆ. 563 ಹುಲಿಗಳನ್ನು ಹೊಂದಿರುವ ಕರ್ನಾಟಕವು ಮಧ್ಯಪ್ರದೇಶದ ನಂತರ ಎರಡನೇ […]
Angels Zumba Fitness ವತಿಯಿಂದ ಆಟಿಡೊಂಜಿ ದಿನ
ಉಡುಪಿ :ದಿ .29 ಶನಿವಾರದಂದು ಏಂಜೆಲ್ಸ್ Zumba fitness ವತಿಯಿಂದ ವಿವಿಧ ರೀತಿಯ ಆಟೋಟ ಸ್ಪರ್ಧೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಲವು ಬಗೆಯ ಆಟಿ ಅಡುಗೆ Zumba class ನ ವಿದ್ಯಾರ್ಥಿಗಳಿಂದಲೇ ತಯಾರಿಸಲಾಯಿತು
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshrs day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ […]
3,000 ಎಂಜಿನಿಯರ್ ಗಳ ನೇಮಕ, 5 ವರ್ಷಗಳಲ್ಲಿ ಬೆಂಗಳೂರಿನಲ್ಲಿ Semiconನಿಂದ 400 ಮಿಲಿಯನ್ ಡಾಲರ್ ಹೂಡಿಕೆ
ನವದೆಹಲಿ: ಯುಎಸ್ ಚಿಪ್ ತಯಾರಕ ಅಡ್ವಾನ್ಸ್ಡ್ ಮೈಕ್ರೋ ಡಿವೈಸಸ್ (ಎಎಂಡಿ) ಬೆಂಗಳೂರಿನಲ್ಲಿ ತನ್ನ ಅತಿದೊಡ್ಡ ವಿನ್ಯಾಸ ಕೇಂದ್ರವನ್ನು ನಿರ್ಮಿಸಲು ಮುಂದಿನ ಐದು ವರ್ಷಗಳಲ್ಲಿ ಸುಮಾರು 400 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಶುಕ್ರವಾರ ತಿಳಿಸಿದೆ.ಈ ವರ್ಷದ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ವಿನ್ಯಾಸ ಕೇಂದ್ರವನ್ನು ತೆರೆಯಲಾಗುವುದು ಮತ್ತು ಐದು ವರ್ಷಗಳಲ್ಲಿ 3,000 ಹೊಸ ಎಂಜಿನಿಯರಿಂಗ್ ಪಾತ್ರಗಳನ್ನು ಸೃಷ್ಟಿಸಲಾಗುವುದು ಎಂದು ಎಎಂಡಿ ಹೇಳಿದೆ. “ವಿಶ್ವಾದ್ಯಂತ ಎಎಮ್ಡಿ ಗ್ರಾಹಕರಿಗೆ ಬೆಂಬಲ ನೀಡುವ ಹೆಚ್ಚಿನ ಕಾರ್ಯಕ್ಷಮತೆ ಮತ್ತು ಹೊಂದಾಣಿಕೆಯ ಪರಿಹಾರಗಳನ್ನು ತಲುಪಿಸುವಲ್ಲಿ ನಮ್ಮ […]
ಬ್ಯಾಂಕ್ ಆಫ್ ಬರೋಡಾ ಬರೋಡಾ: ಕಾರ್ ಲೋನ್ ಮೇಲೆ ಸ್ಥಿರ ಬಡ್ಡಿ ದರದ ಆಯ್ಕೆ
ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಕಾರ್ ಲೋನ್ ಗಳ ಮೇಲೆ ಸ್ಥಿರ ಬಡ್ಡಿದರವನ್ನು ಪರಿಚಯಿಸುವುದಾಗಿ ಘೋಷಿಸಿದೆ. ಸಾಲಗಾರರು ತಮ್ಮ ಆದ್ಯತೆಯ ಆಧಾರದ ಮೇಲೆ ಬರೋಡಾ ಕಾರ್ ಲೋನ್ ಗಳ ಮೇಲೆ ಸ್ಥಿರ ಮತ್ತು ಫ್ಲೋಟಿಂಗ್ ಬಡ್ಡಿದರಗಳ ನಡುವೆ ಆಯ್ಕೆ ಮಾಡುವ ಆಯ್ಕೆಯನ್ನು ಹೊಂದಿದ್ದಾರೆ. ಬರೋಡಾ ಕಾರ್ ಲೋನ್ ಗಳ ನಿಗದಿತ ಬಡ್ಡಿ ದರವನ್ನು ಬ್ಯಾಂಕಿನ 1-ವರ್ಷದ MCLRUÉ ಜೋಡಿಸಲಾಗಿದೆ ಮತ್ತು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಹೊಸ ಕಾರು […]