ಮಹಾರಾಷ್ಟ್ರದ ಬುಲ್ದಾನದಲ್ಲಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ..

ಬುಲ್ದಾನ(ಮಹರಾಷ್ಟ್ರ): ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ ಹಿಂಗೋಲಿಗೆ ಹೋಗುತ್ತಿತ್ತು. ಈ ಬಸ್ನಲ್ಲಿ ಒಟ್ಟು 35 ರಿಂದ 40 ಯಾತ್ರಿಗಳಿದ್ದರು. ಇನ್ನು ಟ್ರಾವೆಲ್ಸ್ ಸಂಖ್ಯೆ MH 27 BX 4466 ಆಗಿದ್ದು ಈ ಬಸ್ ನಾಗ್ಪುರದಿಂದ ನಾಸಿಕ್ ಕಡೆಗೆ ಪ್ರಯಾಣಿಸುತ್ತಿದ್ದು, ಅಪಘಾತದ ಸಂದರ್ಭದಲ್ಲಿ 25 ರಿಂದ 30 ಪ್ರಯಾಣಿಕರಿದ್ದರು. ಎರಡು ಟ್ರಾವೆಲ್ ಬಸ್ಗಳ ಮಧ್ಯೆ ಅಪಘಾತ ನಡೆದು 6 ಜನ ಪ್ರಯಾಣಿಕರು ಸಾವನ್ನಪ್ಪಿ, […]

ಆ.2-3 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 2 ಮತ್ತು 3 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220 ಕೆ.ವಿ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಮತ್ತು 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಹೆಗ್ಗುಂಜೆ- ಹಿರಿಯಡ್ಕ ಮಾರ್ಗದ ಸಿಟಿ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಮತ್ತು ಬಾರ್ಕೂರು […]

ವಾಶ್ ರೂಂ ನಲ್ಲಿ ವೀಡಿಯೋ ರೆಕಾರ್ಡಿಂಗ್ ತನಿಖೆಗೆ ಹಿಂದೇಟು ಖಂಡನೀಯ: ಪ್ರಮೋದ್ ಮಧ್ವರಾಜ್

ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ವಾಶ್ ರೂಂ ನಲ್ಲಿ ಯುವತಿಯ ವೀಡಿಯೋ ರೆಕಾರ್ಡ್ ಮಾಡಿರುವುದು ಸಮಸ್ತ ಮಾನವ ಕುಲ ತಲೆ ತಗ್ಗಿಸುವಂತಹ ಕೃತ್ಯ ಎಂದು ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ತಿಳಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆಯನ್ನು ಸಣ್ಣ ವಿಚಾರ ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆ ತಿರಸ್ಕರಿಸಿರುವುದು ಖಂಡನೀಯ. ಪೊಲೀಸ್ ಇಲಾಖೆ ಬಗ್ಗೆ ಸಂಶಯವಿದೆ. ಘಟನೆಯಿಂದಾಗಿ ಹೆಣ್ಣು ಮಕ್ಕಳ ಮರ್ಯಾದೆಗೆ ಧಕ್ಕೆಯಾಗಿದೆ ಎಂದರು. ಇಂತಹ ಗಂಭೀರ ವಿಚಾರವನ್ನು ಗೃಹಮಂತ್ರಿಗಳು ಕ್ಷುಲ್ಲಕವಾಗಿ ಪರಿಗಣಿಸಿದ್ದಾರೆ. ಇದಕ್ಕೆ ಹಲವು […]

ಆಗಸ್ಟ್ 5 ರಂದು ಮನೋವೈದ್ಯರ ಹುದ್ದೆಗಾಗಿ ನೇರ ಸಂದರ್ಶನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆ ತಿಳಿಸಿದೆ.  

ಮುನಿಯಾಲ್ ಆಯುರ್ವೇದ ಆಸ್ಪತ್ರೆ ವತಿಯಿಂದ ಮಹಿಳೆಯರ ಋತುಚಕ್ರದ ಸಮಸ್ಯೆಗಳ ಉಚಿತ ಚಿಕಿತ್ಸಾ ಶಿಬಿರ

ಮಣಿಪಾಲ: ಇಲ್ಲಿನ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ಕಳೆದ ಇಪ್ಪತ್ತೈದು ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಸಾವಿರಾರು ರೋಗಿಗಳಿಗೆ ಪ್ರಾಚೀನ ಆಯುರ್ವೇದ ಶಾಸ್ತ್ರಪದ್ದತಿಯಿಂದ ಸೇವೆ ಸಲ್ಲಿಸಿ ಆಶಾಕಿರಣವಾಗಿದೆ. ಇದೇ ನಿಟ್ಟಿನಲ್ಲಿ ತನ್ನ ರಜತ ಮಹೋತ್ಸವದ ಸಂಭ್ರಮದ ಅಂಗವಾಗಿ ಆಗಸ್ಟ್ 1 ರಿಂದ 7 ವರೆಗೆ ಬೆಳಿಗ್ಗೆ 9.00 ರಿಂದ ಸಂಜೆ 4.00 ರವರೆಗೆ ಮಹಿಳೆಯರ ಋತುಚಕ್ರದ ಸಮಸ್ಯೆಗಳ ಚಿಕಿತ್ಸಾ ಶಿಬಿರ-“ಸೌಭಾಗ್ಯ ಕಲ್ಪ”ವನ್ನು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಆಯೋಜಿಸಲಾಗಿದೆ. […]