ವಿಶ್ವ ಶ್ರೇಯಾಂಕದಲ್ಲಿ ಉತ್ತಮ ಏರಿಕೆ ಕಂಡ ಎಚ್‌ಎಸ್ ಪ್ರಣಯ್, ಲಕ್ಷ್ಯ ಸೇನ್:ಬಿಡಬ್ಲ್ಯೂಎಫ್

ವಿಶ್ವದ ಮಾಜಿ ನಂಬರ್ ಒನ್ ಆಟಗಾರ ಕಿಡಂಬಿ ಶ್ರೀಕಾಂತ್ ಕೂಡ ತಮ್ಮ ಶ್ರೇಯಾಂಕದಲ್ಲಿ ಸುಧಾರಣೆ ಕಂಡಿದ್ದು, ಒಂದು ಸ್ಥಾನ ಮೇಲೇರಿ 19ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಮತ್ತೊಂದು ಗಮನಾರ್ಹ ಪ್ರಗತಿಯನ್ನು ರಾಷ್ಟ್ರೀಯ ಚಾಂಪಿಯನ್ ಮಿಥುನ್ ಮಂಜುನಾಥ್ ನಾಲ್ಕು ಸ್ಥಾನಗಳನ್ನು ಮೇಲಕ್ಕೇರಿ 50 ನೇ ಸ್ಥಾನವನ್ನು ಪಡೆದರು. ಭಾರತದ ಬ್ಯಾಡ್ಮಿಂಟನ್ ಆಟಗಾರರಾದ ಎಚ್‌ಎಸ್ ಪ್ರಣಯ್ ಮತ್ತು ಲಕ್ಷ್ಯ ಸೇನ್ ಬಿಡಬ್ಲ್ಯೂಎಫ್ ವಿಶ್ವ ಶ್ರೇಯಾಂಕದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದಾರೆ.ಬಿಡಬ್ಲ್ಯೂಎಫ್ ವಿಶ್ವ ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರರಾದ ಎಚ್‌ಎಸ್ ಪ್ರಣಯ್ ಮತ್ತು […]

ಒಂದೇ ವೇದಿಕೆಯಲ್ಲಿ ಲವ್ ಬರ್ಡ್ಸ್ ತಮನ್ನಾ- ವಿಜಯ್

ಬಹುಭಾಷಾ ತಾರೆ ತಮನ್ನಾ ಭಾಟಿಯಾ ಮತ್ತು ನಟ ವಿಜಯ್ ವರ್ಮಾ ನಡುವಿನ ಸಂಬಂಧ ಈಗಾಗಲೇ ಅಧಿಕೃತಗೊಂಡಿದೆ.ವಿಜಯ್ ವರ್ಮಾ ಅವರ ಮುಂಬರುವ ವೆಬ್ಸಿರೀಸ್ ‘ಕಾಲ್ಕೂಟ್’ ಸ್ಕ್ರೀನಿಂಗ್ ಈವೆಂಟ್ಗೆ ತಮನ್ನಾ ಕೂಡ ಹಾಜರಾಗಿದ್ದರು. ಇಬ್ಬರು ಪ್ರೀತಿಸುತ್ತಿರುವುದಾಗಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಜೋಡಿ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಘೋಷಿಸುವ ಮೊದಲು ಅವರ ರಿಲೇಷನ್ಶಿಪ್ ಬಗ್ಗೆ ಕೆಲ ವದಂತಿಗಳಿದ್ದವು. ಸದ್ಯ ಈ ಬ್ಯೂಟಿಫುಲ್ ಕಪಲ್ ಕೆಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ಸಂದರ್ಭಗಳಲ್ಲಿ ಪರಸ್ಪರ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.ಪಾಪರಾಜಿಗಳು ಅವರಿಬ್ಬರನ್ನು ಕಾಲೆಳೆದರು. […]

2023ರ ಏಕದಿನ ವಿಶ್ವಕಪ್‌ ಗೆ ನೆಟ್‌ನಲ್ಲಿ ಅಭ್ಯಾಸಕ್ಕಿಳಿದ ವಿಲಿಯಮ್ಸನ್

ವಿಶ್ವಕಪ್ 2023ರ ಉದ್ಘಾಟನಾ ಪಂದ್ಯವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ಅಕ್ಟೋಬರ್ 5 ರಂದು ನಡೆಯಲಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಶುಭ ಸುದ್ದಿ ಸಿಕ್ಕಂತಾಗಿದೆ. ನ್ಯೂಜಿಲೆಂಡ್ ನಾಯಕ ಬಲಗೈ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡ ಬಳಿಕ ನೆಟ್ ಅಭ್ಯಾಸ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಚೇತರಿಸಿಕೊಂಡು ನೆಟ್ಸ್ನಲ್ಲಿ ಅಭ್ಯಾಸಕ್ಕಿಳಿಸಿದ್ದಾರೆ. ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ವಿಲಿಯಮ್ಸನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್‌ ಆರಂಭಕ್ಕೆ ಇನ್ನು 2 ತಿಂಗಳು […]

ಜಲಪಾತಗಳ ವೀಕ್ಷಣೆಗೆ ವಿಶೇಷ ಬಸ್: ಶಕ್ತಿ ಯೋಜನೆಗಿಲ್ಲ ಅವಕಾಶ..

ಹುಬ್ಬಳ್ಳಿ: ಇತ್ತೀಚೆಗೆ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.ಸಾರ್ವಜನಿಕರ ಬೇಡಿಕೆಯ ಮೇರೆಗೆ ಜಲಪಾತಗಳ ವೀಕ್ಷಣೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ರಜೆ ದಿನಗಳಂದು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಪ್ರತಿ ಭಾನುವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಈ ಬಸ್ಗಳ ಸೇವೆ […]

ಸಂಭಾವನೆ ಪಡೆಯದೆ ‘ನಂದಿನಿ’ ರಾಯಭಾರಿಯಾಗಿ ಶಿವಣ್ಣ.. 

ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಕರ್ನಾಟಕ ಹಾಲು ಮಹಾಮಂಡಳಿಯ ನಂದಿನಿ ಬ್ರ್ಯಾಂಡ್ಗೆ ಇನ್ಮುಂದೆ ಡಾ. ಶಿವರಾಜ್ಕುಮಾರ್ ರಾಯಭಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಲು ಹ್ಯಾಟ್ರಿಕ್‌ ಹೀರೋ ಶಿವರಾಜ್ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ನಂದಿನಿ ಉತ್ಪನ್ನಗಳ ಬ್ರ್ಯಾಂಡ್‌ ಅಂಬಾಸಿಡರ್ ಆಗಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಶಿವರಾಜ್ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆ, ಕೆಎಂಎಫ್‌ ಅಧ್ಯಕ್ಷ ಎಸ್ ಭೀಮಾನಾಯ್ಕ ಅವರು ಡಾ.ಶಿವರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಹ್ಯಾಟ್ರಿಕ್‌ ಹೀರೋ ಶಿವ ರಾಜ್ಕುಮಾರ್‌ […]