ಭಾರತೀಯ ವಾಯುಪಡೆ ನೇಮಕಾತಿ ನೋಂದಣಿಗೆ ಆ. 17 ಕೊನೆಯ ದಿನ
ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆಸಕ್ತ ಅವಿವಾಹಿತ ಯುವಕ ಹಾಗೂ ಯುವತಿಯರು ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2003 ರ ಜೂನ್ 27 ರಿಂದ 2006 ರ ಡಿಸೆಂಬರ್ 27 ರ ನಡುವೆ ಜನಿಸಿರುವ, ಪಿಯುಸಿಯಲ್ಲಿ (ಕಲಾ, ಕಲೆ, ವಾಣಿಜ್ಯ, ವಿಜ್ಞಾನ, ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ […]
ಪ್ರವರ್ಗ-1 ಮೀಸಲಾತಿ ಪಟ್ಟಿಯಲ್ಲಿರುವ ಮೊಗೇರ್ ಜಾತಿಯನ್ನು ಕೈಬಿಡುವ ಕುರಿತು ಆಕ್ಷೇಪಣೆ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿ ಮೀಸಲಾತಿ ಪಟ್ಟಿಯ ಪ್ರವರ್ಗ-1 ರಲ್ಲಿರುವ ಮೊಗೇರ್ ಜಾತಿಯು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರದ ಆದೇಶದಂತೆ ಮೊಗೇರ್ ಜಾತಿಯನ್ನು ಕೈಬಿಡುವ ಬಗ್ಗೆ ಸಾರ್ವಜನಿಕರು/ ಸಂಘ ಸಂಸ್ಥೆಗಳಿಂದ ಆಕ್ಷೇಪಣೆ/ ತಕರಾರುಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಪ್ರಕಟಣೆಯ 10 ದಿನಗಳ ಒಳಗಾಗಿ ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ […]
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಶಿವಳ್ಳಿ ಗ್ರಾಮದ ಬೈಲಕೆರೆ ನಿವಾಸಿ ರವಿ ದೇವಾಡಿಗ (55) ಎಂಬ ವ್ಯಕ್ತಿಯು ಜುಲೈ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಏರ್ಪೋರ್ಟ್ನಲ್ಲಿ ವಿವಿಧ ಜಾತಿಯ 47 ಹೆಬ್ಬಾವು, 2 ಹಲ್ಲಿಗಳ ಸಾಗಣೆಗೆ ಯತ್ನ.. ಸಿಕ್ಕಿಬಿದ್ದ ಆರೋಪಿ
ತಿರುಚ್ಚಿ (ತಮಿಳುನಾಡು): ತಮಿಳುನಾಡಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೊಂದರಲ್ಲಿ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 47 ಹಾವು ಮತ್ತು 2 ಹಲ್ಲಿಗಳನ್ನು ವಶಪಡಿಸಿಕೊಂಡಿದ್ದಾರೆ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ, ಸಿಂಗಾಪುರ, ಮಲೇಷ್ಯಾ, ಶ್ರೀಲಂಕಾ ಮುಂತಾದೆಡೆಗೆ ಪ್ರತಿನಿತ್ಯ ವಿಮಾನಯಾನ ಸೇವೆ ಇದೆ. ಕೆಲ ಪ್ರಯಾಣಿಕರು ಚಿನ್ನಾಭರಣ ಕಳ್ಳಸಾಗಣೆ ಮಾಡುವಾಗ ಅವರನ್ನು ಹಿಡಿದು ಅಧಿಕಾರಿಗಳು ವಶಪಡಿಸಿಕೊಳ್ಳುವ ಕಾರ್ಯಚರಣೆಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಅಕ್ರಮಗಳನ್ನು ತಡೆಯಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಿನ್ನೆ (ಜು.30) ಮಲೇಷ್ಯಾ ರಾಜಧಾನಿ ಕೌಲಾಲಂಪುರದಿಂದ ‘ಮಲಿಂಡೋ […]
ಭೂಮಿಯ ಕಕ್ಷೆ ತೊರೆದು ಚಂದ್ರನ ಕಕ್ಷೆಗೆ ಜಿಗಿದ ಚಂದ್ರಯಾನ: ಮುಂದಿನ ನಿಲ್ದಾಣ ಚಂದ್ರನ ಅಂಗಳ
ಶ್ರೀಹರಿಕೋಟಾ: ಇಲ್ಲಿನ ಉಪಗ್ರಹ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾದ ಹದಿನೈದು ದಿನಗಳ ನಂತರ, ಚಂದ್ರಯಾನ -3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಮಿಷನ್‌ನ ಮುಂದಿನ ಹಂತಕ್ಕೆ ಚಂದ್ರನ ಕಡೆಗೆ ಹೊರಟಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ತಡರಾತ್ರಿ ಘೋಷಿಸಿದೆ. ISTRAC ನಲ್ಲಿ ನಡೆಸಿದ ಯಶಸ್ವಿ ಪೆರಿಜಿ-ಫೈರಿಂಗ್, ಇಸ್ರೋ(ISRO) ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್ ಕಕ್ಷೆಗೆ ನೂಕಿದೆ. ಇನ್ನು ಮುಂದಿನ ನಿಲ್ದಾಣ ಚಂದ್ರ. ಇದು ಚಂದ್ರನತ್ತ ಆಗಮಿಸುತ್ತಿದ್ದಂತೆ, ಚಂದ್ರ-ಕಕ್ಷೆಯ ಒಳಸೇರಿಸುವಿಕೆಯನ್ನು (LOI) ಆಗಸ್ಟ್ […]