ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ : ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ವಿವಿಧ ಸಂಸ್ಥೆಗಳಲ್ಲಿ 1.14 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಇದರಲ್ಲಿ ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ದೆಹಲಿ ಪೊಲೀಸ್ ಸೇರಿದಂತೆ ವಿವಿಧ ಪಡೆಗಳಲ್ಲಿ ಖಾಲಿ ಹುದ್ದೆಗಳು ಇವೆ ಎಂದು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.ಸಿಆರ್‌ಪಿಎಫ್, ಬಿಎಸ್‌ಎಫ್ ಸೇರಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ವಿವಿಧ ಸಂಸ್ಥೆಗಳಲ್ಲಿ 1,14,245 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಖಾಲಿ […]

140 ವರ್ಷಗಳಲ್ಲಿಯೇ ಚೀನಾ ರಾಜಧಾನಿ ಬೀಜಿಂಗ್​ನಲ್ಲಿ ಅತ್ಯಧಿಕ ಮಳೆ; 20 ಸಾವು

ಬೆಂಗಳೂರು: ದಕ್ಷಿಣ ಚೀನಾದ ಪ್ರಾಂತ್ಯಗಳಲ್ಲಿ ಭಾರಿ ಅನಾಹುತಕ್ಕೆ ಕಾರಣವಾದ ಡೊಕ್ಸುರಿ ಚಂಡಮಾರುತ ನಂತರ ಉತ್ತರಕ್ಕೆ ಚಲಿಸಿದ್ದರಿಂದ ಸುರಿದ ಮಳೆಯಿಂದಾಗಿ ಉತ್ತರ ಚೀನಾ ಪ್ರವಾಹದಲ್ಲಿ ಮುಳುಗಿದೆ. ಬೀಜಿಂಗ್ ಮತ್ತು ಹೆಬೈ ಪ್ರಾಂತ್ಯದ ಸುತ್ತಮುತ್ತಲಿನ ಪ್ರದೇಶಗಳು ತೀವ್ರ ಪ್ರವಾಹಕ್ಕೆ ತುತ್ತಾಗಿದ್ದು, ನೀರು ಅಪಾಯಕಾರಿ ಮಟ್ಟಕ್ಕೆ ಏರಿದೆ. ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಪೂರೈಸುವ ಪೈಪ್‌ಗಳು ಸಹ ಹಾಳಾಗಿವೆ.ಚೀನಾದ ರಾಜಧಾನಿ ಬೀಜಿಂಗ್​ನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಳೆದ 140 ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಮಳೆ ಇದು […]

ಹೆಬ್ರಿ ತಾಲೂಕಿನಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ಬಾಲಕಿ

ಕೃತಿಕಾ(3) ಮೃತ ಬಾಲಕಿ ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಅಜ್ಜಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಾಲಕಿ ನೀರಿನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ನಾಲ್ಕು ದಿನಗಳ ಕಾಲ ಮೈಸೂರಿನಲ್ಲಿ ಅಗ್ನಿವೀರ್ ಸೇನಾ ನೇಮಕಾತಿ 14 ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ: ರ‍್ಯಾಲಿಗೆ ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಈ ರ‍್ಯಾಲಿಯಲ್ಲಿ ಭಾಗವಹಿಸಿರುವ ಅಭ್ಯರ್ಥಿಗಳು ಈಗಾಗಲೇ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರನ್ನು ಅಗ್ನಿವೀರ್ ರ‍್ಯಾಲಿಯಲ್ಲಿ ಮೊದಲ ದಿನ ಕ್ರೀಡಾ ಚಟುವಟಿಕೆ ಹಾಗೂ ಎರಡನೇ ದಿನ ದೈಹಿಕ ಪರೀಕ್ಷೆಗೆ ಒಳಪಡಿಸಲಾಗುವುದು. ಇನ್ನು ರ‍್ಯಾಲಿಗೆ 14 ಜಿಲ್ಲೆಗಳ 1723 ಸೇನಾ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಗ್ನಿವೀರ್ ನೇಮಕಾತಿ ಅಧಿಕಾರಿ ಗೌರವ್ ತಾಪ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.ಉದ್ಯೋಗಿಕಾಂಕ್ಷಿಗಳಿಗೆ ಭಾರತೀಯ ಸೇನಾ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಲ್ಲಿನ ಚಾಮುಂಡಿ ವಿಹಾರ […]

WhatsAppನಿಂದ ಜೂನ್​ನಲ್ಲಿ 66 ಲಕ್ಷ ಖಾತೆಗಳ ರದ್ದು

ನವದೆಹಲಿ : ಜೂನ್ 1 ರಿಂದ 30 ರ ನಡುವೆ, 66,11,700 ವಾಟ್ಸ್​ ಆಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಮತ್ತು ಇವುಗಳ ಪೈಕಿ 24,34,200 ಅಕೌಂಟ್​​ಗಳನ್ನು ಬಳಕೆದಾರರಿಂದ ಯಾವುದೇ ವರದಿಗಳು ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವಾಟ್ಸ್​ ಆಯಪ್ ಮಂಗಳವಾರ ತನ್ನ ಮಾಸಿಕ ಅನುಸರಣೆ ವರದಿಯಲ್ಲಿ ತಿಳಿಸಿದೆ.ಹೊಸ ಐಟಿ ನಿಯಮಗಳು-2021 ರ ಅನುಸಾರವಾಗಿ ಮೆಟಾ ಒಡೆತನದ ವಾಟ್ಸ್​ ಆಯಪ್ ಜೂನ್ ತಿಂಗಳಲ್ಲಿ ಭಾರತದಲ್ಲಿ 66 ಲಕ್ಷಕ್ಕೂ ಹೆಚ್ಚು ಅಕೌಂಟ್​ಗಳನ್ನು ರದ್ದುಗೊಳಿಸಿದೆ. ವಾಟ್ಸ್​ ಆಯಪ್ ಜೂನ್ ತಿಂಗಳಲ್ಲಿ ಭಾರತದಲ್ಲಿ […]