ಗ್ಯಾರಂಟಿಗಾಗಿ ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ವರ್ಗ; ರಾಜ್ಯಾದ್ಯಂತ ಪ್ರತಿಭಟನೆ: ದಿನಕರ ಬಾಬು

ಉಡುಪಿ: ಅಧಿಕಾರಕ್ಕೆ ಏರಲೇಬೇಕೆಂಬ ಹಪಾಹಪಿಯಿಂದ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಉಚಿತಗಳ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಇದೀಗ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಸುಮಾರು 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮಹಾ ಮೋಸ ಎಸಗಿರುವುದನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ತೀವ್ರವಾಗಿ ಖಂಡಿಸಿದರು. ಅವರು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಬಿಜೆಪಿ […]

ಕಾರಿನಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ವಿದ್ಯಾರ್ಥಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂಜಾವೇ ಕಾರ್ಯಕರ್ತರ ಮೇಲೆ ಕೇಸ್: ಹಿಂಜಾವೇ ಸ್ಪಷ್ಟನೆ

ಕಾರ್ಕಳ: ಕಾರಿನಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರನ್ನೇ ಪೊಲೀಸರು ಬಂಧಿಸಿದ ಘಟನೆ ಭಾನುವಾರ ಕಾರ್ಕಳದಲ್ಲಿ ನಡೆದಿದೆ. ಪ್ರಕರಣದ ವಿವರ: ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅದೇ ಕಾಲೇಜಿನ ಮಹಿಳಾ ಪ್ರೊಫೆಸರ್‌ ಒಂದೇ ಕಾರಿನಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ಲಭಿಸಿತ್ತು. ಕಾರನ್ನು ಹಿಂಬಾಲಿಸಿದ ಕಾರ್ಯಕರ್ತರಿಗೆ ಕಾರಿನಿಂದ ಕಿರುಚಾಟ ಕೇಳಿದ್ದು ಕಾರನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ಧಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ನೈತಿಕ […]

ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ

ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಯನ್ವಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಉಚಿತವಾಗಿ ಎರಡು ತಿಂಗಳು ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಮಾಹಿತಿ. ತರಬೇತಿ ಪಡೆದವರಿಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು. ಪಿಯುಸಿ ಮೇಲ್ಪಟ್ಟ, ಪದವಿ ಅಥವಾ ಸ್ನಾತಕ ಪದವಿ ವಿದ್ಯಾಬ್ಯಾಸ ಹೊಂದಿದವರು ಈ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ. 30. ಮೊದಲ 90 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ತರಬೇತಿಯ ಸ್ಥಳ ಮಂಗಳೂರು. ಈ ಕೆಳಗಿನ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. […]

ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಆತ್ಮಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ, ಕನಿಷ್ಠ 1 ಎಕ್ರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ […]

ಕಾರ್ಕಳ ಕ್ವಾರೆಯಲ್ಲಿ ಸ್ಟೋಟ; ಕಾರ್ಮಿಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ: ಶುಭದರಾವ್ ಆರೋಪ

ಕಾರ್ಕಳ: ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸ್ಫೋಟ ಸಂಭವಿಸಿ ಒಬ್ಬ ಕಾರ್ಮಿಕ ಮೃತಪಟ್ಟ ಘಟನೆ ವರದಿಯಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಮೃತಪಟ್ಟ ದುರ್ದೈವಿ. ಕೆಲಸ ಮಾಡುತ್ತಿದ್ದಾಗ ಕ್ವಾರೆಯಲ್ಲಿ ಸಂಭವಿಸಿದ ಸ್ಪೋಟದಿಂದಾಗಿ ವೆಂಕಟೇಶ್ ಸ್ಥಳದಲ್ಲಿಯೇ ಕುಸಿದು ಬಿದ್ದು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕಾರ್ಕಳದಲ್ಲಿ ನಡೆಯುವ ಅಕ್ರಮ ಕಲ್ಲು ಗಣಿಗಾರಿಕೆಗೆ ಒಂದು ಪ್ರಾಣ ಬಲಿಯಾಗಿದ್ದು, ಅನಾಹುತಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಇಂತಹ ಅಧಿಕಾರಿಗಳ ವಿರುದ್ದ‌ ಕಠಿಣ ಕ್ರಮಕ್ಕೆ […]