ಬ್ರಹ್ಮಾವರ ಖಾಯಂ ನ್ಯಾಯಾಲಯ ಆರಂಭಗೊಂಡಿರುವುದು ಸಂತಸ ತಂದಿದೆ: ಶಿರಿಯಾರ ಪ್ರಭಾಕರ್ ನಾಯಕ್

ಉಡುಪಿ: ಜನತೆಯ ಪರವಾಗಿ ಸಾರ್ವಜನಿಕರಿಗೆ ಅತೀ ಹತ್ತಿರ ತಾಲೂಕು ಮಟ್ಟದ ನ್ಯಾಲಯ ಅತೀ ಅಗತ್ಯವೆಂದು ಪರಿಗಣಿಸಿ ಬೈಂದೂರು, ಬ್ರಹ್ಮಾವರ ಹಾಗೂ ಮುಂದೆ ಕಾಪು ನ್ಯಾಯಾಲಯ ಉದ್ಘಾಟನೆಯಾಗುವ ಸಾಧ್ಯತೆ ಇದೆ ಎಂದು ಹಿರಿಯ ನ್ಯಾಯವಾದಿ ಮತ್ತು ನೋಟರಿ ಶಿರಿಯಾರ ಕಲ್ಮರ್ಗಿ ಪ್ರಭಾಕರ್ ನಾಯಕ್ ತಿಳಿಸಿದ್ದಾರೆ. ಗ್ರಾಮಾಭಿವೃದ್ಧಿ, ದೇಶ ಪ್ರಗತಿ ಹೊಂದಲು ನ್ಯಾಯಾಲಯವು ಜನರ ಬಳಿಗೆ ತಲುಪುವುದು ಅತೀ ಅಗತ್ಯ ಎಂದು ಮನಗೊಂಡು ಭಾರತ ಸರ್ಕಾರವು ನ್ಯಾಯಾಂಗ ವ್ಯವಸ್ಥೆಯನ್ನು ಸರಿಪಡಿಸುವುದು ಸೂಕ್ತ ಕ್ರಮ ಎಂದು ಭಾವಿಸಿದೆ. ಉಡುಪಿ ಜಿಲ್ಲೆಯಲ್ಲಿ ಬೈಂದೂರು, […]

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ

ಪೆರ್ಡೂರು: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸಭೆಯು ಆ.1 ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಿಯಾನಂದ ಹೆಗ್ಡೆ, ಡಾ. ವಿದ್ಯಾಧರ ಶೆಟ್ಟಿ, ಜಯ ಪೂಜಾರಿ, ಶಂಕರ ನಾಯ್ಕ, ನಾಗಲಕ್ಷ್ಮಿ ನಾಯ್ಕ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ್ […]

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಮಣಿಪಾಲ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ನಲ್ಲಿ ಸುವರ್ಣ ಅವಕಾಶ

ಮಣಿಪಾಲ: ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್‍ನ್ನು ಮಣಿಪಾಲದ ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ: ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಈಗಾಗಲೇ ಜಿಲ್ಲೆಯ ಹಲವು ಪ್ರತಿಷ್ಠಿತ ಹಾಗೂ ಹೆಸರುವಾಸಿ ಶಿಕ್ಷಣ (CBSE/ICSE/STATE) ಸಂಸ್ಥೆಗಳಲ್ಲಿ ಉದ್ಯೋಗ […]

ಮಂಗಳೂರು: ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿಕೆ; ಹೋಟೆಲ್ ತಿಂಡಿ-ತಿನಿಸು ಬೆಲೆಯಲ್ಲಿ ಶೇ.10 ರಷ್ಟು ಹೆಚ್ಚಳಕ್ಕೆ ನಿರ್ಧಾರ

ಮಂಗಳೂರು: ದಿನಬಳಕೆ ವಸ್ತುಗಳ ಬೆಲೆ ಹಾಗೂ ಹಾಲಿನ ಬೆಲೆ ಏರಿರುವ ಹಿನ್ನಲೆಯಲ್ಲಿ ಆಗಸ್ಟ್ 1 ರಿ೦ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಟೇಲ್‌ಗಳಲ್ಲಿ ತಿಂಡಿ ತಿನಿಸುಗಳ ಬೆಲೆಯನ್ನು ಶೇ.10 ರಷ್ಟು ಹೆಚ್ಚಳ ಮಾಡಲು ಹೊಟೇಲ್ ಮಾಲೀಕರ ಸಂಘದ ದ.ಕ.ಜಿಲ್ಲಾ ಘಟಕವು ತೀರ್ಮಾನಿಸಿದೆ. ಆದರೆ ಬೆಲೆ ಏರಿಕೆಯ ನಿರ್ಧಾರದ ತೀರ್ಮಾನವನ್ನು ಆಯಾ ಹೊಟೇಲ್‌ಗಳಿಗೆ ಬಿಡಲಾಗಿದೆ. ಪ್ರಸ್ತುತ ಹಾಲಿನ ದರವು ಎರಡೆರಡು ಬಾರಿ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 6 ರೂ ನಷ್ಟು ಹೆಚ್ಚಳ ಕಂಡಿದೆ. ಅಲ್ಲದೆ ತರಕಾರಿ, ಬೇಳೆ ಕಾಳು, ಕಚ್ಚಾವಸ್ತುಗಳ […]

ಜಿಲ್ಲೆಯಲ್ಲಿ ಸುಸಜ್ಜಿತ ಸರ್ಕಾರಿ ಮೆಡಿಕಲ್ ಕಾಲೇಜು ಕೋರಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ: ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಡಾ.ಪಿವಿ ಭಂಡಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.