ಕಾಸರಗೋಡು: ಸೌಟು ಹಿಡಿಯುವ ಕೈಗಳು ಬಸ್ ಸ್ಟೀರಿಂಗ್ ಕೂಡಾ ಹಿಡಿಯಬಹುದೆಂದು ತೋರಿದ ದಿಟ್ಟ ನಾರಿ ದೀಪಾ!!
ಕಾಸರಗೋಡು: ಶ್ರೀಕೃಷ್ಣ ಬಸ್ಸಿನ ಸ್ಟೀರಿಂಗ್ ಹಿಡಿದು ಯಾವುದೇ ಪುರುಷರಿಗೆ ಕಮ್ಮಿ ಇಲ್ಲದಂತೆ ಬಸ್ ಚಲಾಯಿಸುತ್ತಾರೆ ಆಡುಕಾತುವಾಯಲ್ ಮೂಲದ ಎನ್ ದೀಪಾ ಎಂಬ ದಿಟ್ಟ ನಾರಿ. ಮಹಿಳೆಯರು ಭಾರೀ ವಾಹನಗಳನ್ನು ಚಲಾಯಿಸಲು ಸಾಧ್ಯವಿಲ್ಲ ಎನ್ನುವ ಪೂರ್ವಾಗ್ರಹವನ್ನು ತೊಡೆದು ಹಾಕಿದ್ದಾರೆ 36 ವರ್ಷ ವಯಸ್ಸಿನ ದೀಪಾ. ಏರುತಗ್ಗಿನ ಗುಡ್ಡಗಾಡಿನ ವಕ್ರ ರಸ್ತೆಗಳಲ್ಲಿ ಪ್ರಯಾಣಿಕರಿಂದ ತುಂಬಿದ ಬಸ್ ಅನ್ನು ಸಲೀಸಾಗಿ ಓಡಿಸುವ ದೀಪಾ ತನ್ನ ಬಹುಕಾಲದ ಕನಸನ್ನು ನನಸಾಗಿಸಿದ್ದಾರೆ. ಇವರ ಕನಸಿಗೆ ಇಂಬು ನೀಡಿದವರು ಬಸ್ ಮಾಲಕ ನಿಶಾಂತ್. ಅನುಭವಿ ಮತ್ತು […]
ಉಡುಪಿ ದಂತ ವೈದ್ಯಕೀಯ ಸಂಘದಿಂದ ರಾಜ್ಯಮಟ್ಟದ ಕಾರ್ಯಗಾರ
ಉಡುಪಿ: ಕಸ್ತೂರ್ಬಾ ಆಸ್ಪತ್ರೆ ಸಮೂಹ ಮಣಿಪಾಲ ಹಾಗೂ ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಘದ ಜಂಟಿ ಆಶ್ರಯದಲ್ಲಿ ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರ ನಡೆಯಿತು. ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಮೋನಿಕಾ ಸೋಲೋಮೋನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಶ್ರೀಕಾಂತ್ ಹಾಗೂ ಡಾ. ಆದರ್ಶ್ ಕುಡ್ವ ಭಾಗವಹಿಸಿ ದಂತ ಚಿಕಿತ್ಸೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಆಧುನಿಕ ಚಿಕಿತ್ಸೆ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು […]
ಸ್ನ್ಯಾಪ್‌ಚಾಟ್ ಹಾಗೂ ಇನ್ಸ್ಟಾಗ್ರಾಂ ಗಳಲ್ಲಿ ಅಪ್ರಾಪ್ತ ಬಾಲಕಿ ಹಾಗೂ ಯುವತಿಯ ತೇಜೋವಧೆ: ಸೆನ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಇಲ್ಲಿನ 14 ವರ್ಷದ ಬಾಲಕಿಯೊಬ್ಬಳ ಪೋಷಕರು ತಮ್ಮ ಮಗಳ ಫೋಟೋವನ್ನು ಅಸಭ್ಯ ರೀತಿಯಲ್ಲಿ ರೂಪಾಂತರಿಸಿ(ಮಾರ್ಫ್) ಸ್ನ್ಯಾಪ್‌ಚಾಟ್ ವೀಡಿಯೋನಲ್ಲಿ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಉಡುಪಿ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಬಾಲಕಿಯ ತಾಯಿ, ತನ್ನ ಮಗಳ ಫೋಟೋವನ್ನು ಅಸಭ್ಯ ವೀಡಿಯೊದಲ್ಲಿ ಬಳಸಿದ್ದಾರೆ ಮತ್ತು ಜುಲೈ 30 ರಂದು ಸ್ನ್ಯಾಪ್‌ಚಾಟ್‌ನಲ್ಲಿ ತನ್ನ ಸಂಪರ್ಕಗಳಿಗೆ ಪ್ರಸಾರ ಮಾಡಿದ್ದಾರೆ ಎಂದು ಹೇಳಿದ್ದಾರೆ. ನಕಲಿ ಸ್ನ್ಯಾಪ್‌ಚಾಟ್ ಖಾತೆಯನ್ನು ಬಳಸಿಕೊಂಡು ವೀಡಿಯೊವನ್ನು ಪ್ರಸಾರ […]
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು 1 ನೇ ಸ್ಥಾನಕ್ಕೇರಿಸಲು ಅಧಿಕಾರಿಗಳು ಶ್ರಮವಹಿಸಿ: ಸಿಎಂ ಸಿದ್ದರಾಮಯ್ಯ
ಉಡುಪಿ: ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಜಿಲ್ಲೆಯು ಆರೋಗ್ಯ ಸೇವೆ ಸೂಚ್ಯಂಕದಲ್ಲಿ 18ನೇ ಸ್ಥಾನದಲ್ಲಿದೆ. ಆದರೆ 2015 ನೇ ಸಾಲಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದು ಅಧಿಕಾರಿಗಳ ಉದಾಸೀನತೆಯನ್ನು ತೋರುತ್ತದೆ. ಮತ್ತೊಮ್ಮೆ ಜಿಲ್ಲೆಯನ್ನು 1 ನೇ ಸ್ಥಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಶ್ರಮವಹಿಸಿ, ಕೆಲಸ ಮಾಡಬೇಕು. ಆರೋಗ್ಯ ಸಿಬ್ಬಂದಿಗಳು ಜನರಿಗೆ ಉತ್ತಮ ಸೇವೆಗಳನ್ನು ಒದಗಿಸದಿದ್ದಲ್ಲಿ ಮರಣ ಹೊಂದುವವರ ಸಂಖ್ಯೆ […]