ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್: ಡಿಪ್ಲೋಮಾ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಗೆ ಆ.5ರ ತನಕ ಕಾಲಾವಕಾಶ

ಮಣಿಪಾಲ: ಮಣಿಪಾಲ ಡಾ. ಟಿಎಂಎ ಪೈ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ 3 ವರ್ಷದ (6 ಸೆಮಿಸ್ಟರ್) ಡಿಪ್ಲೋಮಾ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಗೆ ಆ. 5ರ ವರೆಗೆ ಕಾಲಾವಕಾಶ ನೀಡಲಾಗಿದೆ. ಸಂಸ್ಥೆಯು ಅತ್ಯುತ್ತಮ ಮೂಲ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಒದಗಿಸುವುದರೊಂದಿಗೆ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಿದೆ. 10ನೇ ತರಗತಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಸ್ಥರ ಪ್ರಕಟಣೆ ತಿಳಿಸಿದೆ.

ನಾವುಂದ: ಬಟ್ಟೆ ವ್ಯಾಪಾರಿ ನಾಪತ್ತೆ

ಉಡುಪಿ: ನಾವುಂದ ಗ್ರಾಮದ ಕಿರಿಮಂಜೇಶ್ವರ ನಿವಾಸಿ ಮೊಹಮ್ಮದ್ ಖ್ವಾಜಾ ಶೇಖ್ (41) ಎಂಬ ವ್ಯಕ್ತಿಯು ಜುಲೈ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ನಾಳೆ ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಟಿಯ ಊಟ

ಉಡುಪಿ: ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಾಳೆ ಆ. 4 ಶುಕ್ರವಾರದಂದು ಮಧ್ಯಾಹ್ನ ಶ್ರೀ ಕ್ಷೇತ್ರದ ಅನ್ನಸಂತರ್ಪಣೆಯು ಆಟಿ ತಿಂಗಳ ವಿಶೇಷ ಖಾದ್ಯವನ್ನು ಒಳಗೊಂಡಿದ್ದು, ಆಟಿಯ ಊಟವಾಗಲಿದೆ. ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಲು ದೇವಳದ ಪ್ರಕಟಣೆ ತಿಳಿಸಿದೆ.

ಆ.3 ಮತ್ತು 4 ರಂದು ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ: ಆ.3 ಮತ್ತು 4 ರಂದು ಜಿಲ್ಲೆಯ ಹಲವೆಡೆ ಗಂಟೆಗೆ ೩೦ ರಿಂದ ೪೦ ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದೀ ತೀರ, ಹಳ್ಳ ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಲಾಗಿದೆ. ಅಪಾಯಕಾರಿ ಕಟ್ತಡಗಳು, ಮರಗಳು, ಮತ್ತು ವಿದ್ಯುತ್ ಕಂಬಗಳ ಕೆಳಗೆ ಅಥವಾ ಹತ್ತಿರ ನಿಲ್ಲದೆ ಎಚ್ಚರಿಕೆಯಿಂದ ಇರುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ.

ಇಂದ್ರ ಕುಮಾರ್ ಹೆಚ್.ಬಿ ಅವರ “ಎತ್ತರ” ಕಾದಂಬರಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಕುಂದಾಪುರ: ಪ್ರಸಕ್ತ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2022ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಇಂದ್ರ ಕುಮಾರ್ ಹೆಚ್.ಬಿ ಅವರ “ಎತ್ತರ” ಕಾದಂಬರಿಗೆ ದೊರೆತಿದೆ. ಕಥೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಇವರು ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಲೇಖಕರಾದ ಡಿ.ಎಸ್.ಚೌಗುಲೆ, ಶ್ರೀನಿವಾಸ ಮೂರ್ತಿ, ಅನುಪಮಾ ಪ್ರಸಾದ್ ಅವರು ನಿರ್ಣಾಯಕರಾಗಿ ಸಹಕರಿಸಿದ್ದಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಇದೇ ಆಗಸ್ಟ್ ತಿಂಗಳಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ […]