ಹಿಂದೂ ಮುಖಂಡರ ಮೇಲೆ ಸುಮೋಟ್ ಕೇಸ್: ಸರ್ಕಾರದ ವಿರುದ್ದ ಕಿಡಿ ಕಾರಿದ ಯಶ್ ಪಾಲ್ ಸುವರ್ಣ

ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿ ಹಾಗೂ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ಹಾಗೂ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಅವರ ಮೇಲೆ ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಲಿಸ್ ಇಲಾಖೆಯು ರಾಜ್ಯ ಕಾಂಗ್ರೆಸ್ […]

ಮಂಗಳೂರು: ಸಿ.ಒ.ಡಿ.ಪಿ ಸುವರ್ಣ ಮಹೋತ್ಸವ; ದುರ್ಬಲ ವರ್ಗದವರಿಗೆ ಗೃಹ ನಿರ್ಮಾಣಕ್ಕೆ 1 ಕೋಟಿ 18 ಲಕ್ಷ ಧನಸಹಾಯ

ಮಂಗಳೂರು: ದಾನ ನೀಡುವವರು ದೊಡ್ಡವರಲ್ಲ, ದಾನ ಪಡೆಯುವವರು ಸಣ್ಣವರಲ್ಲ. ನಾವೆಲ್ಲರೂ ದೇವರ ಮಕ್ಕಳಾದ್ದರಿಂದ ಸಮಾನರು. ಸಮಜದ ಅಶಕ್ತ ವರ್ಗದ ಜನರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ಮನೆ ಕಟ್ಟಲು ಮತ್ತು ದುರಸ್ಥಿಗೆ ದಾನ ಹೀಗೆ ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಲೇ ಇರುವ ಅನಿವಾಸಿ ಉದ್ಯಮಿ, ಕೊಡುಗೈ ದಾನಿ ಮೈಕಲ್ ಡಿ’ಸೊಜಾ ಸಮಾಜಕ್ಕೆ ಪ್ರೇರಣೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅಭಿಪ್ರಾಯಪಟ್ಟರು. ಡಾ. ಸಲ್ಡಾನ್ಹಾ ಮಂಗಳೂರು ಧರ್ಮಕ್ಷೇತ್ರ ಕೆನರಾ […]

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ದೋಷಾರೋಪಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಹುಲ್ ಗಾಂಧಿ ಅವರ “ಎಲ್ಲಾ ಕಳ್ಳರಿಗೆ ಮೋದಿ ಉಪನಾಮ ಏಕಿದೆ” ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೆಳನ್ಯಾಯಾಲಯವು ನೀಡಿದ ದೋಷಾರೋಪಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಅವರ ದೋಷಾರೋಪಣೆಯನ್ನು ತಡೆಹಿಡಿಯುವುದರೊಂದಿಗೆ, ರಾಹುಲ್ ಗಾಂಧಿಯ ಸಂಸದ ಸ್ಥಾನದ ಅನರ್ಹತೆ ಈಗ ಸ್ಥಗಿತಗೊಂಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಶಿಕ್ಷೆಯು ಗರಿಷ್ಠ ಎರಡು ವರ್ಷಗಳ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ […]

ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಸಂದೇಶ: ವ್ಯಕ್ತಿ ಬಂಧನ

ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಗರದ ಬಿಕರ್ನಕಟ್ಟೆ ಮಸೀದಿ ರಸ್ತೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ‌ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ […]

ಚಂದ್ರಯಾನದ ಬಳಿಕ ಸಾಗರಯಾನಕ್ಕೆ ಸಜ್ಜು: 6000 ಮೀಟರ್ ಆಳಕ್ಕೆ ತೆರಳಿದ್ದಾರೆ ಮೂವರು ಸಾಗರಯಾನಿಗಳು!

ನವದೆಹಲಿ: ಆಳವಾದ ಸಾಗರ ಮತ್ತು ಅದರ ಸಂಪನ್ಮೂಲಗಳನ್ನು ಅನ್ವೇಷಿಸುವ ಗುರಿಯನ್ನು ಹೊಂದಿರುವ ಭಾರತದ ಮಹತ್ವಾಕಾಂಕ್ಷೆಯ ಸಮುದ್ರಯಾನ ಯೋಜನೆಯು ಸಬ್‌ಮರ್ಸಿಬಲ್ ವಾಹನದಲ್ಲಿ ಮೂರು ಸಿಬ್ಬಂದಿಯನ್ನು 6000 ಮೀಟರ್ ಆಳಕ್ಕೆ ಕಳುಹಿಸಲು ಸಿದ್ಧವಾಗಿದೆ. ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಘೋಷಣೆ ಮಾಡಿದ್ದಾರೆ. ಸಮುದ್ರಯಾನ ಯೋಜನೆ, ಭಾರತದ ಮೊದಲ ಮಾನವಸಹಿತ ಸಾಗರ ಮಿಷನ್ ಆಗಿದ್ದು ಆಳ ಸಮುದ್ರದ ಸಂಪನ್ಮೂಲಗಳನ್ನು ಅಧ್ಯಯನ ಮಾಡಲು ಮತ್ತು ಜೀವವೈವಿಧ್ಯ ಮೌಲ್ಯಮಾಪನಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ. ಸಬ್‌ಮರ್ಸಿಬಲ್ […]