ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಮ್ಯಾನೇಜರ್ ಹುದ್ದೆ ಖಾಲಿ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಮತ್ತು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅಥವಾ www.udupicsl.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಆ.5) ಕಾನೂನು ಸಚಿವ ಎಚ್.ಕೆ.ಪಾಟೀಲ್ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು,ಸಂಸದೀಯ ವ್ಯವಹಾರ,ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅವರು ಆಗಸ್ಟ್ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಆಗಸ್ಟ್ 4 ರಂದು ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದು, ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ, ಬಹ್ಮಾವರದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, 4.30 ಕ್ಕೆ ಉಡುಪಿಯ […]

ಮಂಗಳೂರು: ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆ ಕುರಿತು ಮೂರು ದಿನಗಳ ಅಂತರರಾಷ್ಟ್ರೀಯ ಕಾರ್ಯಾಗಾರ

ಮಂಗಳೂರು: ಇಂಟರ್ನಲ್ ಕ್ವಾಲಿಟಿ ಅಶ್ಯೂರೆನ್ಸ್ ಸೆಲ್, PACE, ಮಂಗಳೂರಿನ ಸಹಯೋಗದೊಂದಿಗೆ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಶ್ರೇಷ್ಠತೆ ಕೇಂದ್ರವು ಆಗಸ್ಟ್ 3, 4 ಮತ್ತು 5, ರಂದು “ಸಂಶೋಧನೆ, ಬರವಣಿಗೆ ಮತ್ತು ಪ್ರತಿಷ್ಠಿತ ಜರ್ನಲ್‌ಗಳಲ್ಲಿ ಪ್ರಕಟಣೆ-ಯುರೆಕಾ” ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಆಯೋಜಿಸಿದೆ. ಆ. 3 ರಂದು ಬೆಳಿಗ್ಗೆ 9:30 ಗಂಟೆಗೆ ಮಂಗಳೂರಿನ PACE ನ ಮಲ್ಟಿಪರ್ಪಸ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು. ಈ ಕಾರ್ಯಾಗಾರವು ಸಂಶೋಧನಾ ವಿದ್ವಾಂಸರು ಮತ್ತು ಶಿಕ್ಷಣ ತಜ್ಞರನ್ನು ಸಂಶೋಧನಾ ಬರವಣಿಗೆ, ಪ್ರಕಟಣೆ ಮತ್ತು […]

ಪೂರ್ವ ಮಾಹಿತಿ ಇಲ್ಲದೆ ವಾಹನ ವಶ: ಭಾರತ್ ಬ್ಯಾಂಕ್ ವಿರುದ್ದ ದೂರು ದಾಖಲು

ಉಡುಪಿ: ನಗರ ಠಾಣೆಯಲ್ಲಿ ಭಾರತ್ ಬ್ಯಾಂಕ್ ಉಡುಪಿ ಇದರ ಸಿಬ್ಬಂದಿಗಳು ಹಾಗೂ ಏಜೆಂಟರ ವಿರುದ್ಧ ಕಾರು ಕಳ್ಳತನದ ಬಗ್ಗೆ ದೂರು ದಾಖಲಾಗಿದ್ದು, ಈ ಬಗ್ಗೆ ಸದರಿ ಬ್ಯಾಂಕ್ ಮಾಧ್ಯಮಗಳಲ್ಲಿ ನೀಡಿರುವ ಸ್ಪಷ್ಟೀಕರಣ ಸಂಪೂರ್ಣವಾಗಿ ಕಾನೂನಿಗೆ ವಿರುದ್ಧವಾಗಿದೆ ಎಂದು ದೂರುದಾರ ಪ್ರೇಮ್ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಇತ್ತೀಚಿಗೆ ಕೆಲವೊಂದಿಷ್ಟು ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಸಾಲ ವಸೂಲಾತಿ ಸಂದರ್ಭದಲ್ಲಿ ತಮ್ಮ ಸಿಬ್ಬಂದಿ ಅಥವಾ ಏಜೆಂಟರ ಹೆಸರಿನಲ್ಲಿ ರೌಡಿಗಳೊಂದಿಗೆ ಸೇರಿ ಕಾನೂನಿಗೆ ವಿರುದ್ಧವಾಗಿ ದಬ್ಬಾಳಿಕೆ ನಡೆಸುತ್ತಿರುವ ಅನೇಕ ಪ್ರಕರಣಗಳು ಘಟಿಸುತ್ತಿದ್ದು, […]

ಮುನಿಯಾಲು ಸೌಭಾಗ್ಯಕಲ್ಪ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಮಣಿಪಾಲ: ರಜತ ಮಹೋತ್ಸವದ ಸ್ಮರಣಾರ್ಥವಾಗಿ ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದ ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗವು ಆಗಸ್ಟ್ 1 ರಿಂದ 7 ರವರೆಗೆ ಋತುಚಕ್ರಕ್ಕೆ ಸಂಬಂಧಿಸಿದ ಅಸ್ವಸ್ಥತೆಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ‘ಸೌಭಾಗ್ಯ ಕಲ್ಪ’ ವನ್ನು ಬೆಳಿಗ್ಗೆ 09.00 ರಿಂದ ಸಂಜೆ 4.00 ರವರೆಗೆ ಆಯೋಜಿಸುತ್ತಿದೆ. ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಪ್ರಾಂಶುಪಾಲ ಡಾ.ಸತ್ಯನಾರಾಯಣ ಬಿ, ಮುಖ್ಯ ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ, ಪ್ರಸೂತಿ […]