ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶ ಪಡೆದ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿಗಳು

ಮಂಗಳೂರು: ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಚಿಂತ್ಯಾ ಅರವಿಂದ್ ರೈ ಐಐಟಿ ಮುಂಬಯಿ ಹಾಗೂ ಮಧುಪ್ರಿಯಾ ಕೆ.ಎಂ. ಐಐಟಿ ರೂರ್ಕಿಯಲ್ಲಿ ಜನರಲ್ ಮೆರಿಟ್‍ನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಎಂಜಿನಿಯರಿಂಗ್ ಕಾಲೇಜಿನ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಫಿಸಿಕ್ಸ್ ನಲ್ಲಿ ಅಚಿಂತ್ಯ ಅರವಿಂದ್ ರೈ 100 ಪರ್ಸೆಂಟೈಲ್ ಪಡೆದು, ಒಟ್ಟು 99.8709961 ಪರ್ಸೆಂಟೈಲ್ ಹಾಗೂ ಜೆಇಇ ಎಡ್ವಾನ್ಸ್ ಪರೀಕ್ಷೆಯಲ್ಲಿ ಜನರಲ್ ಮೆರಿಟ್‍ನಲ್ಲಿ 1883ನೇ ಶ್ರೇಣಿ ಪಡೆದಿದ್ದರು. ಮಧುಪ್ರಿಯಾ ಕೆ. 99.7100308 ಪರ್ಸೆಂಟೈಲ್ ಪಡೆದು, […]
ಮಣಿಪಾಲ: ರೀಲ್ಸ್ ನಲ್ಲಿ ಸ್ಕೂಟರ್ ಸ್ಟಂಟ್ ವೈರಲ್; ಕೇಸು ದಾಖಲಿಸಿದ ಪೊಲೀಸರು

ಮಣಿಪಾಲ: ಯುವಕನೋರ್ವ ರೀಲ್ಸ್ ಗಾಗಿ ಸ್ಕೂಟರನಲ್ಲಿ ಸ್ಟಂಟ್ ಮಾಡಿ ಅದನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೆ ಪೊಲೀಸರು ಯುವಕನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದ, ಈತನ ಸ್ಟಂಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ […]
ಬ್ರಹ್ಮಾವರ: ನಾಳೆ(ಆ.5) ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ

ಬ್ರಹ್ಮಾವರ: ಬ್ರಹ್ಮಾವರವು ತಾಲೂಕು ಕೇಂದ್ರವಾಗಿದ್ದು, ಆ.5 ರಂದು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ತಿಳಿಸಿದರು. ನಗರದಲ್ಲಿ ಗುರುವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನ್ಯಾಯಾಲಯ ಕಟ್ಟಡದ ಉದ್ಘಾಟನೆಯನ್ನು ಬೆಳಿಗ್ಗೆ 10.30 ಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿಯ ಅಧ್ಯಕ್ಷ ಪಿ.ಎಸ್.ದಿನೇಶ್ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ ಅರುಣ್ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಡುಪಿ […]
ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]