ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ, ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು ಸಚಿವರು ಹಾರೈಸಿದರು. ಬೆನ್ನುಮೂಳೆಗೆ ಪೆಟ್ಟುಬಿದ್ದು […]
ಡಲ್ಲಾಸ್ ವಿರುದ್ಧ ಮಿಯಾಮಿಗೆ ಗೆಲುವು
ನವದೆಹಲಿ:ಇಂಟರ್ ಮಿಯಾಮಿಗಾಗಿ ಅಡುತ್ತಿರುವ ಅವರು ಎಫ್ಸಿ ಡಲ್ಲಾಸ್ ವಿರುದ್ಧದ ಪಂದ್ಯದಲ್ಲಿ ನೀಡಿದ ಅದ್ಭುತ ಪ್ರದರ್ಶನ ಫುಟ್ಬಾಲ್ ಪ್ರಿಯರಿಗೆ ಅಷ್ಟೇ ಅಲ್ಲದೇ ಆಟವನ್ನು ನೋಡಿದ ಇತರರಿಗೂ ಒಮ್ಮೆಗೆ ರೋಮಾಂಚನವನ್ನು ಉಂಟುಮಾಡಿದೆ ಕಾಲ್ಚೆಂಡಿನ ಆಟದಲ್ಲಿ ಸೂಪರ್ ಸ್ಟಾರ್ ಆಗಿರುವ ಲಿಯೋನೆಲ್ ಮೆಸ್ಸಿ ನಡೆದ ಪಂದ್ಯದಲ್ಲಿ ತಮ್ಮ ಕಾಲ್ಚೆಳಕವನ್ನು ತೋರಿದ್ದಾರೆ.ಮಿಯಾಮಿ ಪರ ಆಡುತ್ತಿರುವ ಲಿಯೋನೆಲ್ ಮೆಸ್ಸಿ ಪಂದ್ಯದಲ್ಲಿ ಗಳಿಸಿದ ಗೋಲ್ ಟ್ವಿಟರ್ನಲ್ಲಿ ವೈರಲ್ ಆಗುತ್ತಿದೆ. 85ನೇ ನಿಮಿಷದಲ್ಲಿ ಸಿಕ್ಕ ಫ್ರೀ ಕಿಕ್ ಮೆಸ್ಸಿ ಕರಾರುವಕ್ಕಾಗಿ ಬಳಸಿಕೊಂಡಿದ್ದಾರೆ. ಎಫ್ಸಿ ಡಲ್ಲಾಸ್ನ ಗೋಲ್ ಕೀಪರನ್ನು […]
ಹರಿಯಾಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆ : 156 ಜನರ ಬಂಧನ
ನುಹ್ (ಹರಿಯಾಣ): ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ವಾರದ ಹಿಂದೆ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 156 ಜನರನ್ನು ಬಂಧಿಸಲಾಗಿದ್ದು 56 ಎಫ್ಐಆರ್ಗಳನ್ನು ದಾಖಲಿಸಲಾಗಿದೆ.ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 156 ಜನರನ್ನು ಬಂಧಿಸಲಾಗಿದೆ.ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಜಿಲ್ಲೆ ಪುನಃ ಸಹಜಸ್ಥಿತಿಗೆ ಬರುತ್ತಿರುವುದರಿಂದ 144 ಜಾರಿಯನ್ನು […]
ಸನ್ರೈಸರ್ಸ್ ಹೈದರಾಬಾದ್ ಗೆ ಡೇನಿಯಲ್ ವೆಟ್ಟೋರಿ ಹೊಸ ಕೋಚ್
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ 2023ರ 16ನೇ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿತ್ತು.ವೆಟ್ಟೋರಿ ಅವರನ್ನು ಪ್ರಮುಖ ಕೋಚ್ ಆಗಿ ನೇಮಿಸಿಕೊಂಡಿರುವುದರ ಬಗ್ಗೆ ಸನ್ರೈಸರ್ಸ್ ಹೈದರಾಬಾದ್ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಿದೆ. 2014 ರಿಂದ 2018 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತರಬೇತುದಾರರಾಗಿದ್ದ ವೆಟ್ಟೋರಿ, ಐಪಿಎಲ್ನಲ್ಲಿ ಇದೀಗ ಎರಡನೇ ಕೋಚಿಂಗ್ ಹುದ್ದೆ ಅಲಂಕರಿಸುತ್ತಿದ್ದಾರೆ.ಸನ್ರೈಸರ್ಸ್ ಹೈದರಾಬಾದ್ ತನ್ನ ಮುಖ್ಯ ಕೋಚ್ ಹುದ್ದೆಗೆ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅವರನ್ನು […]
ಚಂದ್ರಯಾನ -3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಗೆ : ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವೆಡೆಗೆ
ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದೆ.ಚಂದ್ರಯಾನ -3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 24ರಂದು ನೌಕೆ ಚಂದ್ರನ ಮೇಲೆ ಇಳಿಯಲಿದೆ. ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲಿದೆ. ಇಸ್ರೋ ಟ್ವೀಟ್ ಮೂಲಕ ನೀಡಿರುವ ಮಾಹಿತಿಯ ಪ್ರಕಾರ, ಚಂದ್ರಯಾನ-3 ಬಾಹ್ಯಾಕಾಶ ನೌಕೆ ಇಂಜಿನ್ ಅನ್ನು ವಿರುದ್ಧ ದಿಕ್ಕಿನಲ್ಲಿ ಉರಿಸುವ ಮೂಲಕ ತಾನು ಈ ಮೊದಲು ಅಂದುಕೊಂಡ ನಡೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಚಂದ್ರನ ಮೇಲ್ಮೈಗೆ ಇನ್ನಷ್ಟು ಸನಿಹಕ್ಕೆ ತೆರಳಿದೆ. ಈಗ […]