ಮಲ್ಪೆ: ಸಮುದ್ರಕ್ಕೆ ತೆರಳಿದ ಇಬ್ಬರು ಬಾಲಕಿಯರು; ಒಬ್ಬಳ ಸಾವು ಮತ್ತೊಬ್ಬಳ ರಕ್ಷಣೆ
ಮಲ್ಪೆ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಮಲ್ಪೆ ಬಳಿ ನೀರುಪಾಲಾಗಿದ್ದು, ಓರ್ವ ಬಾಲಕಿ ಸಾವನ್ನಪ್ಪಿದ್ದರೆ, ಮತ್ತೊರ್ವ ಬಾಲಕಿಯನ್ನು ರಕ್ಷಿಸಲಾಗಿದೆ. ಮಡಿಕೇರಿ ಮೂಲದ ಮಾನ್ಯ ಮೃತ ರ್ದುದೈವಿ. ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ಠಾಣೆಯಲ್ಲಿ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿತ್ತು. ಇದೀಗ ಮಲ್ಪೆ ಬಳಿ ನಿನ್ನೆ ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಇಬ್ಬರು ಬಾಲಕಿಯರು ಸಮುದ್ರ ಪಾಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. […]
ಕ್ಯೂ.ಆರ್. ಕೋಡ್ ಬಳಸಿ, ತ್ಯಾಜ್ಯ ನಿರ್ವಹಣಾ ಶುಲ್ಕ ಪಾವತಿಸಿ: ಕಾಡೂರು-ನಡೂರು ಗ್ರಾಮ ಪಂಚಾಯತ್ ನಿಂದ ವಿನೂತನ ಸೌಲಭ್ಯ
ಕಾಡೂರು: ಡಿಜಿಟಲೀಕರಣ ಪ್ರಭಾವದಿಂದ ಎಲ್ಲಾ ವಸ್ತು ಮತ್ತು ಸೇವೆಗಳು ಆನ್ ಲೈನ್ ಮೂಲಕ ಮನೆ ಬಾಗಿಲಿಗೆ ಬರುತ್ತಿದ್ದು, ವಿದ್ಯುತ್, ಗ್ಯಾಸ್, ಕೇಬಲ್ ಶುಲ್ಕ , ಬಸ್. ರೈಲು, ವಿಮಾನ ಬುಕ್ಕಿಂಗ್ ಸೇರಿದಂತೆ ದೈನಂದಿನ ಹಲವು ವಹಿವಾಟುಗಳನ್ನು ನಗದು ರಹಿತವಾಗಿ ಮನೆಯಿಂದಲೇ ನಿರ್ವಹಿಸಬಹುದಾಗಿದ್ದು, ಈಗ ಮನೆ ಮನೆಯಿಂದ ಕಸ ಸಂಗ್ರಹ ಶುಲ್ಕವನ್ನೂ ಸಹ ಕ್ಯೂಆರ್ ಕೋಡ್ ಮೂಲಕ ಪಾವತಿಸುವ ವಿನೂತನ ಸೌಲಭ್ಯವನ್ನು ಪರಿಚಯಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಡೂರು-ನಡೂರು ಗ್ರಾಮ ಪಂಚಾಯತ್ ತ್ಯಾಜ್ಯ ನಿರ್ವಹಣಾ ಶುಲ್ಕ ಪಾವತಿಯನ್ನು […]
ಪಾದೂರು ಶ್ರೀ ರಾಮ ಭಜನಾ ಮಂದಿರ ವತಿಯಿಂದ ಆಟಿಡೊಂಜಿ ದಿನ
ಕಾಪು: ಶ್ರೀ ರಾಮ ಭಜನಾ ಮಂದಿರ ಪಾದೂರು, ಚಂದ್ರನಗರ ವತಿಯಿಂದ ಭಾನುವಾರದಂದು ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಗುರ್ಮೆ ಸುರೇಶ ಶೆಟ್ಟಿ ಅವರನ್ನು ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಪಾದೂರು ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು, ಧರ್ಮದತ್ತ ಶೂನ್ಯಮಾಸ್ಟರ್ ನ್ಯೂಟ್ರಿಶನಿಸ್ಟ್ ದಯಾನಂದ ಕೆ. ಶೆಟ್ಟಿ, ಪಾದೂರು ರೋಟರಿ ಸಮುದಾಯ ದಳ […]
ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯಡಿ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆ, 1989 ರ ಅಡಿಯಲ್ಲಿ ದಾಖಲಿಸಲಾದ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ ಮತ್ತು ವಿವಿಧ ನ್ಯಾಯಾಲಯಗಳ ಅಮೂಲ್ಯ ಸಮಯವನ್ನು ಕಳೆಯುತ್ತಿವೆ ಎಂದು ಶಾಸನದ ಅಡಿಯಲ್ಲಿ ಇಬ್ಬರು ಸಹೋದರರ ವಿರುದ್ಧದ ಸಿವಿಲ್ ವಿವಾದದ ವಿಚಾರಣೆಯನ್ನು ರದ್ದುಗೊಳಿಸುವಾಗ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಂತಹ ಪ್ರಕರಣಗಳನ್ನು “ಕಾನೂನಿನ ಪ್ರಕ್ರಿಯೆಯ ದುರುಪಯೋಗ” ಎಂದು ಬಣ್ಣಿಸಿದ ನ್ಯಾಯಾಲಯ, “ಇವುಗಳನ್ನು ನಿಗ್ರಹಿಸಬೇಕಾಗಿದೆ, ವಿಫಲವಾದರೆ ಅವು […]
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
ಬೆಂಗಳೂರು: ಕನ್ನಡ ಚಿತ್ರ ನಟ ಚಿನ್ನಾರಿ ಮುತ್ತ ಖ್ಯಾತಿಯ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ […]